IND vs NZ 1st ODI: ಟೀಂ ಇಂಡಿಯಾಗೆ ಲಗ್ಗೆ ಇಟ್ಟ ಈ ಮಾರಕ ಆಟಗಾರ: ಎದುರಾಳಿಗೆ ನಡುಕ ಶುರು!
IND vs NZ 1st ODI: ಈ ಪಂದ್ಯದಲ್ಲಿ ಹಲವು ಯುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ. ಇನ್ನು ಕೆಲಕಾಲ ಪ್ಲೇಯಿಂಗ್ XIರಲ್ಲಿ ಸ್ಥಾನ ಪಡೆಯಲು ಪರದಾಡುತ್ತಿದ್ದ ಓರ್ವ ಆಟಗಾರನಿಗೆ ಶಿಖರ್ ಧವನ್ ಅವಕಾಶ ನೀಡಿದ್ದಾರೆ. ವಿಶೇಷವೆಂದರೆ ಈ ಆಟಗಾರ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಆಡುತ್ತಿದ್ದಾನೆ.
IND vs NZ 1st ODI: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಏಕದಿನ ಸರಣಿಯ ಮೊದಲ ಪಂದ್ಯ ಆಕ್ಲೆಂಡ್‌ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಎರಡು ವಿಕೆಟ್ ನಷ್ಟಕ್ಕೆ 124 ರನ್ ಕಲೆ ಹಾಕಿದೆ.
ಈ ಪಂದ್ಯದಲ್ಲಿ ಹಲವು ಯುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ. ಇನ್ನು ಕೆಲಕಾಲ ಪ್ಲೇಯಿಂಗ್ XIರಲ್ಲಿ ಸ್ಥಾನ ಪಡೆಯಲು ಪರದಾಡುತ್ತಿದ್ದ ಓರ್ವ ಆಟಗಾರನಿಗೆ ಶಿಖರ್ ಧವನ್ ಅವಕಾಶ ನೀಡಿದ್ದಾರೆ. ವಿಶೇಷವೆಂದರೆ ಈ ಆಟಗಾರ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಆಡುತ್ತಿದ್ದಾನೆ.
ಇದನ್ನೂ ಓದಿ: Hardik Pandya : 'ಹಾರ್ದಿಕ್ ನಾಯಕತ್ವದಲ್ಲಿ ಟೀಂ ಇಂಡಿಯಾಗೆ ಲಾಭವಾಗಲಿದೆ'
ನಾಯಕ ಶಿಖರ್ ಧವನ್ ಅವರು ಯುವ ಮಾರಕ ಬೌಲರ್ ಉಮ್ರಾನ್ ಮಲಿಕ್ ಅವರನ್ನು ಮೊದಲ ಏಕದಿನದ ಪ್ಲೇಯಿಂಗ್ XIನಲ್ಲಿ ಸೇರಿಸಿಕೊಂಡಿದ್ದಾರೆ. ಉಮ್ರಾನ್ ಮಲಿಕ್ ಮೊದಲ ಬಾರಿಗೆ ಭಾರತದ ಏಕದಿನ ತಂಡದ ಭಾಗವಾಗಿದ್ದಾರೆ. ಈ ಹಿಂದೆ ಉಮ್ರಾನ್ ಮಲಿಕ್ ಕೂಡ T20 ಸರಣಿಯ ಭಾಗವಾಗಿದ್ದರೂ ಸಹ ಪ್ಲೇಯಿಂಗ್ XIನಲ್ಲಿ ಭಾಗವಾಗಲು ಸಾಧ್ಯವಾಗಿರಲಿಲ್ಲ. ಕಾಶ್ಮೀರದ ನಿವಾಸಿ ಉಮ್ರಾನ್ ಮಲಿಕ್ 150 KMPH ವೇಗದಲ್ಲಿ ಬೌಲಿಂಗ್ ಮಾಡಲು ಹೆಸರುವಾಸಿಯಾಗಿದ್ದಾರೆ.
ಉಮ್ರಾನ್ ಮಲಿಕ್ ಇದುವರೆಗೆ ಟೀಂ ಇಂಡಿಯಾ ಪರ 3 ಟಿ20 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 12.44 ಎಕಾನಮಿಯೊಂದಿಗೆ ರನ್ ನೀಡಿ ಕೇವಲ 2 ವಿಕೆಟ್ ಪಡೆದಿದ್ದಾರೆ. ಅವರ ಕಳಪೆ ಪ್ರದರ್ಶನ ಕಂಡು ತಂಡದಿಂದ ಕೈಬಿಡಲಾಗಿತ್ತು. ಈ ವರ್ಷ ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದರು. ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಉದ್ದೇಶದಿಂದ ಮತ್ತೊಮ್ಮೆ ಮೈದಾನಕ್ಕಿಳಿಯಲಿದ್ದಾರೆ.
ಟೀಂ ಇಂಡಿಯಾ ಪ್ಲೇಯಿಂಗ್ XI:
ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
ಇದನ್ನೂ ಓದಿ: FIFA World Cup 2022: ವಿಶ್ವ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೋ ರೊನಾಲ್ಡೊ!
ನ್ಯೂಜಿಲೆಂಡ್ ಪ್ಲೇಯಿಂಗ್ XI:
ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.