who hit the longest six in cricket history: ಕ್ರಿಕೆಟ್ ಆಟದಲ್ಲಿ ಅತಿ ಉದ್ದದ ಸಿಕ್ಸ್ ಬಾರಿಸಿದ ದಾಖಲೆ ಶಾಹಿದ್ ಅಫ್ರಿದಿ ಹೆಸರಿನಲ್ಲೋ, ಮಹೇಂದ್ರ ಸಿಂಗ್ ಧೋನಿ ಅಥವಾ ಯುವರಾಜ್ ಸಿಂಗ್ ಹೆಸರಿನಲ್ಲಿ ಇದೆಯೇನೋ ಎಂದು ಭಾವಿಸುತ್ತೇವೆ. ಆದರೆ 100 ವರ್ಷಗಳ ಹಿಂದೆ, ಕ್ರಿಕೆಟ್‌ನಲ್ಲಿ ಅತಿ ಉದ್ದದ ಸಿಕ್ಸರ್ ಬಾರಿಸಿ ವಿಶ್ವ ದಾಖಲೆಯನ್ನು ಮಾಡಲಾಗಿತ್ತು. ಇಲ್ಲಿಯವರೆಗೆ ಯಾರೂ ಈ ದಾಖಲೆಯ ಹತ್ತಿರವೂ ಬರಲು ಸಾಧ್ಯವಾಗಿಲ್ಲ.
ಇದನ್ನೂ ಓದಿ: ಏಪ್ರಿಲ್ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!
ಕ್ರಿಕೆಟ್ ಇತಿಹಾಸದಲ್ಲಿ ಅತಿ ಉದ್ದದ ಸಿಕ್ಸ್ ಅನ್ನು 19 ನೇ ಶತಮಾನದಲ್ಲಿ ಆಲ್ಬರ್ಟ್ ಟ್ರಾಟ್ ಎಂಬವರು ಬಾರಿಸಿದ್ದರು. ಆಲ್ಬರ್ಟ್ ಟ್ರಾಟ್ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಎರಡರ ಪರವಾಗಿ ಕ್ರಿಕೆಟ್ ಆಡಿದ್ದರು. ಟ್ರಾಟ್ ಬಾರಿಸಿದ್ದ ಆ ಸಿಕ್ಸರ್ ಲಾರ್ಡ್ಸ್ ಕ್ರಿಕೆಟ್ ಮೈದಾನದ ಪೆವಿಲಿಯನ್ ದಾಟಿ ಹೋಗಿತ್ತು. ಆ ಸಿಕ್ಸರ್ ಉದ್ದ 164 ಮೀಟರ್. ಇದು ಕ್ರಿಕೆಟ್ ಇತಿಹಾಸದಲ್ಲಿ ಅತಿ ಉದ್ದದ ಸಿಕ್ಸ್ ಆಗಿತ್ತು. ಇಂಗ್ಲೆಂಡ್‌ನ ಮೇರಿಲ್‌ಬೋನ್ ಕ್ರಿಕೆಟ್ ಕ್ಲಬ್ ಪರ ಆಡುವಾಗ ಆಸ್ಟ್ರೇಲಿಯಾ ವಿರುದ್ಧ ಆಲ್ಬರ್ಟ್ ಈ ಶಾಟ್ ಹೊಡೆದಿದ್ದರು.
ಆಲ್ಬರ್ಟ್ ಟ್ರಾಟ್ 19 ನೇ ಶತಮಾನದ ಅತ್ಯಂತ ಪ್ರಭಾವಶಾಲಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಎರಡರ ಪರವಾಗಿ ಕ್ರಿಕೆಟ್ ಆಡಿದ್ದಾರೆ. ಇತಿಹಾಸದಲ್ಲಿ ಅತಿ ಉದ್ದವಾದ 'ಸಿಕ್ಸ್' ಆಲ್ಬರ್ಟ್ ಅವರದ್ದಾಗಿದೆ. ಅವರು 164 ಮೀಟರ್ ಉದ್ದದ ಸಿಕ್ಸ್ ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಆದರೆ ಇಷ್ಟೆಲ್ಲಾ ಹೆಸರು ಗಳಿಸಿದ್ದ ಆ ಆಟಗಾರ 1910 ರಲ್ಲಿ 41 ನೇ ವಯಸ್ಸಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತದೆ.
ಇನ್ನು ಪಾಕಿಸ್ತಾನದ ಮಾಜಿ ಸ್ಫೋಟಕ ಆಲ್‌ರೌಂಡರ್ ಶಾಹಿದ್ ಅಫ್ರಿದಿ ತಮ್ಮ ವೃತ್ತಿಜೀವನದುದ್ದಕ್ಕೂ ಅನೇಕ ಪ್ರಭಾವಶಾಲಿ ಮತ್ತು ಸ್ಫೋಟಕ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. 2013 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶಾಹಿದ್ ಅಫ್ರಿದಿ 158 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು.
ಇದನ್ನೂ ಓದಿ: ಹೆಚ್ಚು ಹೊತ್ತು ಮೂತ್ರ ತಡೆದರೇ ಕಿಡ್ನಿ ಸ್ಟೋನ್ ಆಗುತ್ತವೆಯೇ? ತಜ್ಞರು ಏನಂತಾರೆ..
ಅತಿ ಉದ್ದದ ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಇಬ್ಬರು ಭಾರತೀಯರಾದ ಯುವರಾಜ್ ಸಿಂಗ್ ಮತ್ತು ಮಹೇಂದ್ರ ಸಿಂಗ್ ಧೋನಿ ಕೂಡ ಇದ್ದಾರೆ. ಯುವರಾಜ್ ಸಿಂಗ್ 119 ಮೀಟರ್‌ಗಳ ಸಿಕ್ಸರ್ ಬಾರಿಸಿದ್ದಾರೆ. ಟಿ20ಯಲ್ಲಿ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿದ ದಾಖಲೆಯೂ ಯುವಿ ಹೆಸರಿನಲ್ಲಿದೆ. ಇನ್ನು ಎಂಎಸ್ ಧೋನಿ 112 ಮೀಟರ್‌ಗಳ ಸಿಕ್ಸರ್ ಬಾರಿಸಿದ್ದಾರೆ. 2007 ರ ಟಿ20 ವಿಶ್ವಕಪ್‌ನಲ್ಲಿ, ಭಾರತದ ಯುವರಾಜ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ 70 ರನ್‌ಗಳ ಇನ್ನಿಂಗ್ಸ್‌ನಲ್ಲಿ ಬ್ರೆಟ್ ಲೀ ಅವರ ಚೆಂಡಿನಲ್ಲಿ 119 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









