ICC T20 World Cup: ಇದೀಗ ಟೀಮ್ ಇಂಡಿಯಾದ ಸಂಪೂರ್ಣ ಗಮನವು ಮುಂದಿನ ವರ್ಷ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2024 ರ ಮೇಲೆ ಕೇಂದ್ರೀಕೃತವಾಗಿದೆ. ಪ್ರಸ್ತುತ ಭಾರತ ಟಿ20 ತಂಡದ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ರೋಹಿತ್ ಶರ್ಮಾ ನಂತರ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಂಡಿದ್ದಾರೆ. ಆದರೆ ವಿಶ್ವಕಪ್ ವೇಳೆ ಪಾಂಡ್ಯ ಗಾಯಗೊಂಡಿದ್ದರಿಂದ ಸೂರ್ಯಕುಮಾರ್ ಅವರಿಗೆ ನಾಯಕತ್ವ ಹಸ್ತಾಂತರಿಸಿದ್ದರು. ಜಡೇಜಾ ಪ್ರಸ್ತುತ ಹಿರಿಯ ಆಟಗಾರನಾದರೂ ಅವರಿಗೆ ಉಪನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ. T20 ವಿಶ್ವಕಪ್ಗೂ ಮುನ್ನ ಹಾರ್ದಿಕ್ ಪಾಂಡ್ಯ ತಂಡಕ್ಕೆ ಬಂದರೆ ಆರನೇ ಬೌಲರ್ ಆಯ್ಕೆ ಲಭ್ಯವಾಗಲಿದೆ. ಭಾರತ ತಂಡವು ಬೌಲಿಂಗ್ ಸಂಯೋಜನೆಗೆ ಅನುಗುಣವಾಗಿ ಆಟಗಾರರನ್ನು ಬಳಸಿಕೊಳ್ಳಬಹುದು.
ಇದನ್ನೂ ಓದಿ: Suryakumar Yadav: ಶತಕ ಸಿಡಿಸಿ ಹಲವು ದಾಖಲೆ ಬರೆದ ಸೂರ್ಯಕುಮಾರ್ ಯಾದವ್
ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್ ಅಥವಾ ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ ಅಥವಾ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಅಥವಾ ಜಿತೇಶ್ ಶರ್ಮಾ, ರಿಂಗು ಸಿಂಗ್, ಹಾರ್ದಿಕ್ ಪಾಂಡ್ಯ, ಜಡೇಜಾ, ಕುಲ್ದೀಪ್ ಯಾದವ್ ಅಥವಾ ರವಿ ಬಿಷ್ಣೋಯ್, ಸಿರಾಜ್ ಅಥವಾ ಮುಖೇಶ್ ಕುಮಾರ್, ದೀಪಕ್ ಸಹರ್ ಅಥವಾ ಅರ್ಷದೀಪ್ ಸಿಂಗ್ T20 ವಿಶ್ವಕಪ್ನಲ್ಲಿ ಆಡುವ ನಿರೀಕ್ಷೆಯಿದೆ.
ಜೈಸ್ವಾಲ್, ಸೂರ್ಯಕುಮಾರ್, ರಿಂಕು ಸಿಂಗ್ ಸ್ಥಾನ ದೃಢಪಟ್ಟಿದೆ ಎನ್ನಲಾಗಿದೆ. ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ನಡೆಯಲಿದೆ. ಟಿ20 ವಿಶ್ವಕಪ್ಗೂ ಮುನ್ನ ಐಪಿಎಲ್ ನಡೆಯಲಿರುವುದರಿಂದ ಆಟಗಾರರ ಫಾರ್ಮ್ ಅನ್ನು ಪರಿಗಣಿಸಿ ಐಸಿಸಿ ಟಿ20 ವಿಶ್ವಕಪ್ಗೆ ಭಾರತೀಯ ತಂಡವನ್ನು ಫೈನಲ್ ಮಾಡಬಹುದು. ಮುಂದಿನ ವರ್ಷ ಜೂನ್ 4 ರಿಂದ ಜೂನ್ 30 ರವರೆಗೆ ಐಸಿಸಿ ಟಿ20 ವಿಶ್ವಕಪ್ ಸರಣಿ ನಡೆಯಲಿದೆ.
ಇದನ್ನೂ ಓದಿ: W,W,0,W,1,W ಜನ್ಮದಿನದಂದೇ ಭರ್ಜರಿ ಬೌಲಿಂಗ್ ಮಾಡಿ ದಾಖಲೆ ಬರೆದ ಭಾರತದ ಆಟಗಾರ !
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.