ವೆಸ್ಟ್ ಇಂಡೀಸ್ಗೆ ಮಾರಕವಾದ ಟೀಂ ಇಂಡಿಯಾದ ಈ ಸ್ಟಾರ್ ಆಟಗಾರನ ಕೈಚಳಕ
ಸಂಜು ಸ್ಯಾಮ್ಸನ್ ವೆಸ್ಟ್ ಇಂಡೀಸ್ ವಿರುದ್ಧ ಸಂಪೂರ್ಣ ಲಯವನ್ನು ಕಂಡುಕೊಂಡು ಮೈದಾನದಲ್ಲಿ ಅಬ್ಬರಿಸುತ್ತಿದ್ದಾರೆ. ಸಂಜು ಸ್ಯಾಮ್ಸನ್ 54 ಎಸೆತಗಳಲ್ಲಿ 51 ರನ್ ಗಳಿಸಿ ಎಂದಿನಂತೆ ತಮ್ಮ ಬಿರುಸಿನ ಬ್ಯಾಟಿಂಗ್ ಮಾಡಿದ್ದಾರೆ. ಸ್ಯಾಮ್ಸನ್ ಮತ್ತು ಶ್ರೇಯಸ್ ನಾಲ್ಕನೇ ವಿಕೆಟ್‌ಗೆ 99 ರನ್‌ಗಳ ಜೊತೆಯಾಟವಾಡಿದ್ದು, ತಂಡಕ್ಕೆ ಭದ್ರ ಬುನಾದಿ ಹಾಕಿದಂತಾಗಿತ್ತು. ಅಷ್ಟೇ ಅಲ್ಲದೆ, ಆ ಬಳಿಕ ಕಣಕ್ಕಿಳಿದ ಆಟಗಾರರ ಒತ್ತಡವನ್ನೂ ಕಡಿಮೆ ಮಾಡಿತ್ತು.
ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಸತತ 2ನೇ ಏಕದಿನ ಸರಣಿಯನ್ನು ಗೆದ್ದಿದೆ. ಟೀಂ ಇಂಡಿಯಾದ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಅದ್ಭುತ ಆಟ ಪ್ರದರ್ಶಿಸುತ್ತಿದ್ದಾರೆ. ಇನ್ನು ಟಿ20 ವಿಶ್ವಕಪ್ ಸಿದ್ಧತೆಯ ದೃಷ್ಟಿಯಿಂದ ವೆಸ್ಟ್ ಇಂಡೀಸ್ ಪ್ರವಾಸವು ಅತ್ಯಂತ ಮಹತ್ವದ್ದಾಗಿದೆ. ಈ ಪ್ರವಾಸದಲ್ಲಿ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅದ್ಭುತ ಆಟ ಪ್ರದರ್ಶಿಸುತ್ತಿದ್ದಾರೆ. ಅವರ ಬ್ಯಾಟ್‌ನಿಂದ ಸಾಕಷ್ಟು ರನ್‌ಗಳು ಹೊರಬರುತ್ತಿದ್ದು, ಟೀಂ ಇಂಡಿಯಾಗೆ ಇವರ ಕೈಚಳಕ ಗೆಲುವನ್ನು ತಂದುಕೊಡುತ್ತಿದೆ. ಇನ್ನೊಂದೆಡೆ ಇವರ ಆಟ ವೆಸ್ಟ್ ಇಂಡೀಸ್ ತಂಡಕ್ಕೆ ದುಃಸ್ವಪ್ನವಾಗಿ ಪರಿಣಮಿಸಿದೆ ಎನ್ನಬಹುದು.
ಇದನ್ನೂ ಓದಿ: ಈ ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ: IMD ಎಚ್ಚರಿಕೆ
ಸಂಜು ಸ್ಯಾಮ್ಸನ್ ವೆಸ್ಟ್ ಇಂಡೀಸ್ ವಿರುದ್ಧ ಸಂಪೂರ್ಣ ಲಯವನ್ನು ಕಂಡುಕೊಂಡು ಮೈದಾನದಲ್ಲಿ ಅಬ್ಬರಿಸುತ್ತಿದ್ದಾರೆ. ಸಂಜು ಸ್ಯಾಮ್ಸನ್ 54 ಎಸೆತಗಳಲ್ಲಿ 51 ರನ್ ಗಳಿಸಿ ಎಂದಿನಂತೆ ತಮ್ಮ ಬಿರುಸಿನ ಬ್ಯಾಟಿಂಗ್ ಮಾಡಿದ್ದಾರೆ. ಸ್ಯಾಮ್ಸನ್ ಮತ್ತು ಶ್ರೇಯಸ್ ನಾಲ್ಕನೇ ವಿಕೆಟ್‌ಗೆ 99 ರನ್‌ಗಳ ಜೊತೆಯಾಟವಾಡಿದ್ದು, ತಂಡಕ್ಕೆ ಭದ್ರ ಬುನಾದಿ ಹಾಕಿದಂತಾಗಿತ್ತು. ಅಷ್ಟೇ ಅಲ್ಲದೆ, ಆ ಬಳಿಕ ಕಣಕ್ಕಿಳಿದ ಆಟಗಾರರ ಒತ್ತಡವನ್ನೂ ಕಡಿಮೆ ಮಾಡಿತ್ತು.
ಸಂಜು ಸ್ಯಾಮ್ಸನ್ ಅತ್ಯುತ್ತಮ ಫಾರ್ಮ್‌ನಲ್ಲಿ ಆಟವಾಡುತ್ತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಮೊದಲ ಅರ್ಧಶತಕವನ್ನು ಬಾರಿಸಿದ್ದಾರೆ. ಇನ್ನು ಐರ್ಲೆಂಡ್ ಪ್ರವಾಸದಲ್ಲಿಯೂ ಸಹ ಮೊದಲ ಟಿ20 ಕ್ರಿಕೆಟ್‌ನಲ್ಲಿ ಅರ್ಧಶತಕವನ್ನು ಬಾರಿಸಿದ್ದರು. ಪ್ರತಿ ಪಂದ್ಯದಿಂದಲೂ ಸಂಜು ಸ್ಯಾಮ್ಸನ್ ಪ್ರದರ್ಶನ ಸುಧಾರಿಸುತ್ತಿದೆ. ಜೊತೆಗೆ ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ. ಸಂಜು ಸ್ಯಾಮ್ಸನ್ ಅವರ ವಿಕೆಟ್ ಕೀಪಿಂಗ್ ಕೌಶಲ್ಯವೂ ಅದ್ಭುತವಾಗಿದೆ. ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅವರು ಹಲವು ಅದ್ಭುತ ಕ್ಯಾಚ್‌ಗಳನ್ನು ಹಿಡಿದಿದ್ದಾರೆ.
ಇದನ್ನೂ ಓದಿ: BSNL ತಂದಿದೆ 19 ರೂಪಾಯಿಯ ರಿಚಾರ್ಜ್ ಪ್ಲಾನ್ .! Jio-Airtel ಗ್ರಾಹಕರಿಗೆ ನಷ್ಟ
ಐಪಿಎಲ್‌ನಲ್ಲಿ ಶಕ್ತಿ ಪ್ರದರ್ಶನ:
ಸಂಜು ಸ್ಯಾಮ್ಸನ್ ಐಪಿಎಲ್ 2022 ರಲ್ಲಿ ಸಹ ಉತ್ತಮ ಆಟ ಪ್ರದರ್ಶಿಸಿದ್ದಾರೆ. ಅವರ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್ ತಲುಪಿತ್ತು. ಅವರು ಐಪಿಎಲ್ 2022ರ 17 ಪಂದ್ಯಗಳಲ್ಲಿ 489 ರನ್ ಬಾರಿಸಿದ್ದರು. ಇವರ ಅಪಾಯಕಾರಿ ಆಟ ನೋಡಿ ಆಯ್ಕೆಗಾರರು ಟೀಂ ಇಂಡಿಯಾದಲ್ಲಿ ಸ್ಥಾನ ಕೊಟ್ಟಿದ್ದಾರೆ. ಕೇರಳದ ಈ 27ರ ಹರೆಯದ ಆಟಗಾರ ಟೀಂ ಇಂಡಿಯಾದಲ್ಲಿ ಉತ್ತಮ ಆಟವನ್ನು ಆಡುತ್ತಿದ್ದು, ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮುತ್ತಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.