Sourav Ganguly security: ಸೌರವ್ ಗಂಗೂಲಿಗೆ ‘Z’ ಕೆಟಗರಿ ಭದ್ರತೆ ನೀಡಿದ ಸರ್ಕಾರ! ಕಾರಣ ಏನುಗೊತ್ತಾ?
Z Category Security for Sourav Ganguly: ಗಂಗೂಲಿ ಅವರ ಭದ್ರತೆಯನ್ನು ಹೆಚ್ಚಿಸಲು ಮಮತಾ ಸರ್ಕಾರ ಮಂಗಳವಾರ ನಿರ್ಧರಿಸಿದೆ. ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ನೀಡಲಾಗಿದ್ದ ಭದ್ರತೆ ಅವಧಿ ಮುಗಿದಿದ್ದು, ಪ್ರೋಟೋಕಾಲ್ ಪ್ರಕಾರ ಅವರ ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿ ಅದನ್ನು Z ಕೆಟಗರಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Z Category Security for Sourav Ganguly: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಈಗ Z ಕೆಟಗರಿ ಭದ್ರತೆ ನೀಡಲಾಗಿದೆ. ಅವರ ಭದ್ರತೆಯನ್ನು ಮೇಲ್ದರ್ಜೆಗೇರಿಸಲು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ನಿರ್ಧರಿಸಿದೆ. ಈ ಕುರಿತು ವಿವರಣೆ ನೀಡಿರುವ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು, “ಈ ಹಿಂದೆ ಸೌರವ್ ಗಂಗೂಲಿ ಅವರು Y ಕೆಟಗರಿ ಭದ್ರತೆಯನ್ನು ಪಡೆಯುತ್ತಿದ್ದರು. ಆದರೆ ಇದೀಗ ಅದರ ಅವಧಿ ಮುಗಿದಿದ್ದು, ಈ ವೇಳೆ ಗಂಗೂಲಿ ಅವರ ಭದ್ರತೆಯನ್ನು ಮೇಲ್ದರ್ಜೆಗೇರಿಸಲಾಗಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪ್ರಬಲ ಸಮುದಾಯದ ನಾಯಕನಿಗೆ ಪಕ್ಷದ ಜವಾಬ್ದಾರಿ ನೀಡಲು ಬಿಜೆಪಿ ಸಿದ್ದತೆ ! ಕಾಂಗ್ರೆಸ್ ಸಿಎಂ ಆಯ್ಕೆ ನಂತರ ಕಮಲ ಪಾಳಯದ ತೀರ್ಮಾನ
ಗಂಗೂಲಿ ಅವರ ಭದ್ರತೆಯನ್ನು ಹೆಚ್ಚಿಸಲು ಮಮತಾ ಸರ್ಕಾರ ಮಂಗಳವಾರ ನಿರ್ಧರಿಸಿದೆ. ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ನೀಡಲಾಗಿದ್ದ ಭದ್ರತೆ ಅವಧಿ ಮುಗಿದಿದ್ದು, ಪ್ರೋಟೋಕಾಲ್ ಪ್ರಕಾರ ಅವರ ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿ ಅದನ್ನು Z ಕೆಟಗರಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಹೊಸ ಭದ್ರತಾ ವ್ಯವಸ್ಥೆಯ ಪ್ರಕಾರ ಸೌರವ್ ಗಂಗೂಲಿ ಜೊತೆಗೆ 8 ರಿಂದ 10 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಮಾಹಿತಿ ಪ್ರಕಾರ, 'ವೈ' ವರ್ಗದ ಭದ್ರತೆಯಡಿ, 3 ಪೊಲೀಸರು ಮತ್ತು ವಿಶೇಷ ವಿಭಾಗದ 2 ಭದ್ರತಾ ಸಿಬ್ಬಂದಿಯನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗಂಗೂಲಿ ಅವರ ಬೆಹಾಲಾ ನಿವಾಸದ ಭದ್ರತೆಗೆ ನಿಯೋಜಿಸಲಾಗಿತ್ತು.
ಮಂಗಳವಾರ, ಪಶ್ಚಿಮ ಬಂಗಾಳ ಸಚಿವಾಲಯದ ಪ್ರತಿನಿಧಿಗಳು ಸೌರವ್ ಗಂಗೂಲಿ ಅವರ ಬೆಹಾಲಾ ಕಚೇರಿಗೆ ಆಗಮಿಸಿದ್ದಾರೆ. ಇಲ್ಲಿ ಅವರು ಕೋಲ್ಕತ್ತಾ ಪೊಲೀಸ್ ಹೆಡ್ ಕ್ವಾರ್ಟರ್ಸ್ ಲಾಲ್ಬಜಾರ್ ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಸದ್ಯ ಸೌರವ್ ಗಂಗೂಲಿ ತಮ್ಮ ಐಪಿಎಲ್ ತಂಡ ಡೆಲ್ಲಿ ಡೇರ್ ಡೆವಿಲ್ಸ್ ಜೊತೆಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅವರು ಈ ವಾರ ಮೇ 21 ರಂದು ಕೋಲ್ಕತ್ತಾಗೆ ಮರಳಲಿದ್ದಾರೆ. ಕೋಲ್ಕತ್ತಾಗೆ ಮರಳಿದ ತಕ್ಷಣ ಅವರಿಗೆ 'Z' ಕೆಟಗರಿ ಭದ್ರತೆ ಸಿಗಲಿದೆ.
ಪ್ರಸ್ತುತ ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯಪಾಲ ಸಿವಿ ಆನಂದ್ ಬೋಸ್ ಮತ್ತು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ 'ಝಡ್ ಪ್ಲಸ್' ಕೆಟಗರಿ ಭದ್ರತೆ ನೀಡಲಾಗುತ್ತಿದೆ. ಇದೇ ವೇಳೆ ರಾಜ್ಯದ ಕೆಲ ಸಚಿವರಿಗೆ ‘ಝಡ್’ ಕೆಟಗರಿ ಭದ್ರತೆ ನೀಡಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.