BCCIಯನ್ನು ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರಂತೆ ಈ 3 ಆಟಗಾರರು..! ಪ್ರಮುಖರ ವಿರುದ್ಧವೇ ಗಂಭೀರ ಆರೋಪ
BCCI, Team India: ಆ ಆಟಗಾರರ ಮುಂದೆ ಕ್ರಿಕೆಟ್ ಮಂಡಳಿ ಅಸಹಾಯಕತೆ ತೋರುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಕೆಲ ಆಟಗಾರರು, ತಮಗೆ ಬೇಕಾದಾಗ ವಿಶ್ರಾಂತಿ ತೆಗೆದುಕೊಳ್ಳುತ್ತಾ, ಬಯಸಿದಾಗಲೆಲ್ಲಾ ಜೂನಿಯರ್ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುತ್ತಾ ಅವಿಧೇಯರಂತೆ ವರ್ತಿಸುತ್ತಿದ್ದಾರಂತೆ.
BCCI, Team India: 2023ರ ಏಕದಿನ ವಿಶ್ವಕಪ್ ಫೈನಲ್’ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಇದಾದ ನಂತರ ಭಾರತ ತಂಡದ ಡ್ರೆಸ್ಸಿಂಗ್ ಸ್ಟೈಲ್’ನಲ್ಲಿ ಅಪಸ್ವರದ ಸುದ್ದಿ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಹಲವು ಆಟಗಾರರು ಬಿಸಿಸಿಐಗೆ ಅವಿಧೇಯರಾಗಿ ವೈಟ್ ಬಾಲ್ ಕ್ರಿಕೆಟ್ ಆಡಲು ನಿರಾಕರಿಸಿದ್ದರು.
ಆ ಆಟಗಾರರ ಮುಂದೆ ಕ್ರಿಕೆಟ್ ಮಂಡಳಿ ಅಸಹಾಯಕತೆ ತೋರುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಕೆಲ ಆಟಗಾರರು, ತಮಗೆ ಬೇಕಾದಾಗ ವಿಶ್ರಾಂತಿ ತೆಗೆದುಕೊಳ್ಳುತ್ತಾ, ಬಯಸಿದಾಗಲೆಲ್ಲಾ ಜೂನಿಯರ್ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುತ್ತಾ ಅವಿಧೇಯರಂತೆ ವರ್ತಿಸುತ್ತಿದ್ದಾರಂತೆ. ಅಷ್ಟಕ್ಕೂ ಆ ಆಟಗಾರರು ಬೇರಾರು ಅಲ್ಲ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ. (ಈ ಸುದ್ದಿಯು ಕೆಲ ಮೂಲಗಳ ಆಧಾರವಾಗಿದೆ. ಹೊರತು ನಿಖರತೆ ಇಲ್ಲ ಎಂಬುದು ಗಮನಿಸಬೇಕಾದ ಅಂಶ).
ಇದನ್ನೂ ಓದಿ: Makara Jyothi 2024: ಶಬರಿಮಲೆಯಲ್ಲಿ ಮಕರ ಜ್ಯೋತಿ ಗೋಚರಿಸುವ ಶುಭ ಸಮಯ ಹೀಗಿದೆ
ವಿರಾಟ್ ಕೊಹ್ಲಿ:
ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಹಿರಿಯ ಬ್ಯಾಟ್ಸ್‌ಮನ್’ಗಳಲ್ಲಿ ಒಬ್ಬರು. ಬಿಸಿಸಿಐ ಪ್ರತಿ ವಿಷಯದಲ್ಲೂ ಗರಿಷ್ಠ ಪ್ರಾಮುಖ್ಯತೆ ನೀಡುವ ಆಟಗಾರರಲ್ಲಿ ಇವರೂ ಒಬ್ಬರು. ಏಕದಿನ ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ನಿರಂತರವಾಗಿ ಕ್ರಿಕೆಟ್ ಆಡುತ್ತಾರೆ ಎಂದು ನಂಬಲಾಗಿತ್ತು. ಆದರೆ ಆ ಬಳಿಕ ಅವರಿಗೆ ವಿಶ್ರಾಂತಿ ನೀಡಲಾಯಿತು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ವಿರಾಟ್ ವೈಟ್ ಬಾಲ್ ಕ್ರಿಕೆಟ್ ಆಡುವುದನ್ನು ತಪ್ಪಿಸಿದ್ದರು. ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ 3 ಪಂದ್ಯಗಳ T20 ಸರಣಿಯಲ್ಲಿ 14 ತಿಂಗಳ ನಂತರ ವಿರಾಟ್ ಮರಳಿದ್ದಾರೆ. ಆದರೆ ವೈಯಕ್ತಿಕ ಕಾರಣಗಳಿಂದ ವಿರಾಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾಗವಹಿಸಲಿಲ್ಲ. ಈ ಎಲ್ಲಾ ವಿಷಯಗಳನ್ನು ಗಮನಿಸಿದಾಗ ವಿರಾಟ್ ತಂಡಕ್ಕೆ ಯಾವಾಗ ಬೇಕಾದರೂ ಬರುತ್ತಾರೆ, ಯಾವಾಗ ಬೇಕಾದರೂ ಹೋಗುತ್ತಾರೆ ಎಂದು ಕೆಲವರು ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ರೋಹಿತ್ ಶರ್ಮಾ:
ರೋಹಿತ್ ಶರ್ಮಾ ಕೂಡ ಸುಮಾರು 14 ತಿಂಗಳ ಬಳಿಕ ಟಿ20 ಕ್ರಿಕೆಟ್ ಆಡುತ್ತಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ಮಾಡಲಾಯಿತು. ಇನ್ನು ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ಅವರಿಗೆ ದೊಡ್ಡ ಜವಾಬ್ದಾರಿ ನೀಡಲಾಗಿತ್ತು. ಬಿಸಿಸಿಐನಿಂದ ನಾಯಕತ್ವ ಸ್ವೀಕರಿಸಲು ರೋಹಿತ್ ಶರ್ಮಾ ನಿರಾಕರಿಸಿದ್ದರು ಎಂದು ಹೇಳಲಾಗುತ್ತಿದೆ. ಅಂದುಕೊಂಡಾಗ ಅಫ್ಘಾನಿಸ್ತಾನದ ವಿರುದ್ಧ ಕಮ್ ಬ್ಯಾಕ್ ಮಾಡಿ ನಾಯಕನ ಪಾತ್ರ ನಿರ್ವಹಿಸಿದರು. ಈ ಹಿಂದೆ ರೋಹಿತ್ ಶರ್ಮಾ ವಿಶ್ರಾಂತಿ ತೆಗೆದುಕೊಳ್ಳುವುದರ ಬಗ್ಗೆ ಅಭಿಮಾನಿಗಳು ಪ್ರಶ್ನೆಗಳನ್ನು ಎತ್ತಿದ್ದರು. ಏಕೆಂದರೆ ಟಿ20 ವಿಶ್ವಕಪ್’ಗೂ ಮುನ್ನ ಅಂತಾರಾಷ್ಟ್ರೀಯ ಆಟಗಾರನೊಬ್ಬ ತಂಡದ ಒಳಗೆ ಮತ್ತು ಹೊರಗೆ ಇರಲು ಸಾಧ್ಯವಿಲ್ಲ. ಇದು ತಂಡದ ಪ್ರದರ್ಶನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದೇ ಕಾರಣಕ್ಕೆ ಫ್ಯಾನ್ಸ್ ಅಸಮಾಧಾನ ಹೊರಹಾಕಿದ್ದರು.
ಇದನ್ನೂ ಓದಿ: ಈ ಎಣ್ಣೆಗೆ ಕರ್ಪೂರ ಬೆರೆಸಿ ಹಚ್ಚಿದರೆ ಸಾಕು… ಬಿಳಿಕೂದಲು ಕ್ಷಣದಲ್ಲೇ ಗಾಢವಾಗಿ ಕಪ್ಪಾಗುತ್ತೆ!
ಹಾರ್ದಿಕ್ ಪಾಂಡ್ಯ:
ಈ ಪಟ್ಟಿಯಲ್ಲಿ ಕೊನೆಯ ಹೆಸರು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರದ್ದು. ವಿಶ್ವಕಪ್’ನಲ್ಲಿ ಬಾಂಗ್ಲಾದೇಶ ವಿರುದ್ಧ ಬೌಲಿಂಗ್ ಮಾಡುವಾಗ ಪಾಂಡ್ಯ ಗಾಯಗೊಂಡಿದ್ದರು. ಅಂದಿನಿಂದ ತಂಡದಿಂದ ಹೊರಗುಳಿದಿದ್ದಾರೆ. ಆಫ್ರಿಕಾ ಮತ್ತು ಆಸ್ಟ್ರೇಲಿಯಾದಲ್ಲಿ ಆಡಿದ ಟಿ20 ಸರಣಿಯಲ್ಲಿಯೂ ಅವರನ್ನು ಸೇರಿಸಿಕೊಂಡಿರಲಿಲ್ಲ. ಮಾಧ್ಯಮ ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಪರ ಆಡಲು ಆಸಕ್ತಿ ತೋರಿಸುತ್ತಿಲ್ಲ. ಆದರೆ ಮುಂಬರುವ ಐಪಿಎಲ್ ಸೀಸನ್’ಗಾಗಿ ಜಿಮ್’ನಲ್ಲಿ ವರ್ಕೌಟ್ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಹಾರ್ದಿಕ್ ಈಗ ಐಪಿಎಲ್’ನಲ್ಲಿ ಮುಂಬೈ ಇಂಡಿಯನ್ಸ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.