ಭಾರತ ಪಾಕ್ ನಡುವೆ ನಡೆಯುತ್ತೆ 3 ಪಂದ್ಯ! ಐತಿಹಾಸಿಕ ಬದ್ಧವೈರಿಗಳ ಕದನ ಯಾವಾಗ-ಎಲ್ಲಿ ನಡೆಯುತ್ತೆ ಗೊತ್ತಾ?

India vs Pakistan: ಭಾರತ ಮತ್ತು ಪಾಕಿಸ್ತಾನ ನೆರೆಯ ರಾಷ್ಟ್ರಗಳಾಗಿದ್ದರೂ ಇವೆರಡರ ನಡುವಿನ ಸಂಬಂಧ ಚೆನ್ನಾಗಿಲ್ಲ. ಇದು ಕ್ರೀಡೆಯ ಮೇಲೂ ಪರಿಣಾಮ ಬೀರುತ್ತದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಹಲವು ವರ್ಷಗಳಿಂದ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಭಾರತ ತಂಡವು 17 ವರ್ಷಗಳ ಹಿಂದೆ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು.

Written by - Bhavishya Shetty | Last Updated : Mar 26, 2023, 09:27 PM IST
    • ಭಾರತ ಮತ್ತು ಪಾಕಿಸ್ತಾನ ನೆರೆಯ ರಾಷ್ಟ್ರಗಳಾಗಿದ್ದರೂ ಇವೆರಡರ ನಡುವಿನ ಸಂಬಂಧ ಚೆನ್ನಾಗಿಲ್ಲ.
    • ಭಾರತ ಮತ್ತು ಪಾಕಿಸ್ತಾನ ನಡುವೆ ಹಲವು ವರ್ಷಗಳಿಂದ ದ್ವಿಪಕ್ಷೀಯ ಸರಣಿ ನಡೆದಿಲ್ಲ.
    • ಆದರೆ ಕಳೆದ ಹಲವು ವರ್ಷಗಳಿಂದ ಈ ಎರಡೂ ದೇಶಗಳ ನಡುವೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆದಿಲ್ಲ.
ಭಾರತ ಪಾಕ್ ನಡುವೆ ನಡೆಯುತ್ತೆ 3 ಪಂದ್ಯ! ಐತಿಹಾಸಿಕ ಬದ್ಧವೈರಿಗಳ ಕದನ ಯಾವಾಗ-ಎಲ್ಲಿ ನಡೆಯುತ್ತೆ ಗೊತ್ತಾ? title=
India Pakistan

India vs Pakistan, Asia Cup 2023: ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವಾಗ ಬೇಕಾದ್ರೂ ಪಂದ್ಯ ನಡೆಯಲಿ. ಅಲ್ಲಿ ಕ್ರೇಜ್ ಉತ್ತಂಗದಲ್ಲಿರುತ್ತದೆ. ಈ ಎರಡು ನೆರೆಯ ರಾಷ್ಟ್ರಗಳ ನಡುವಿನ ಪಂದ್ಯವನ್ನು ವೀಕ್ಷಿಸಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣವನ್ನು ಆಗಮಿಸುತ್ತಾರೆ. ಆದರೆ ಕಳೆದ ಹಲವು ವರ್ಷಗಳಿಂದ ಈ ಎರಡೂ ದೇಶಗಳ ನಡುವೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆದಿಲ್ಲ.

ಇದನ್ನೂ ಓದಿ: Extra Marital Affair: ಪತಿ ಇರುವಾಗಲೇ ಬೇರೆಯವರ ಜೊತೆ ಅಕ್ರಮ ಸಂಬಂಧ ಬೆಳೆಸಿದ ಸ್ಟಾರ್ ಸೆಲೆಬ್ರಿಟಿಗಳು!

ಭಾರತ ಮತ್ತು ಪಾಕಿಸ್ತಾನ ನೆರೆಯ ರಾಷ್ಟ್ರಗಳಾಗಿದ್ದರೂ ಇವೆರಡರ ನಡುವಿನ ಸಂಬಂಧ ಚೆನ್ನಾಗಿಲ್ಲ. ಇದು ಕ್ರೀಡೆಯ ಮೇಲೂ ಪರಿಣಾಮ ಬೀರುತ್ತದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಹಲವು ವರ್ಷಗಳಿಂದ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಭಾರತ ತಂಡವು 17 ವರ್ಷಗಳ ಹಿಂದೆ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು. ಅಂದಿನಿಂದ ಉಭಯ ತಂಡಗಳು ಐಸಿಸಿ ಮತ್ತು ಏಷ್ಯಾಕಪ್ ವೇದಿಕೆಯಲ್ಲಿ ಮಾತ್ರ ಮುಖಾಮುಖಿಯಾಗಿದ್ದವು. ಇದೀಗ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಬಂದಿದೆ.

ಸೆಪ್ಟೆಂಬರ್‌’ನಲ್ಲಿ ನಡೆಯಲಿರುವ ಮುಂಬರುವ ಏಷ್ಯಾ ಕಪ್ 2023 ರ ಕುರಿತು ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳ ನಡುವಿನ ಜಗಳ ಈಗ ಪರಿಹಾರದತ್ತ ಮುಖಮಾಡಿದೆ. ಕ್ರಿಕ್‌ ಬಜ್ ವರದಿಯ ಪ್ರಕಾರ ಪಾಕಿಸ್ತಾನವು ಏಷ್ಯಾಕಪ್‌’ನ ಆತಿಥ್ಯದ ಹಕ್ಕನ್ನು ಪಡೆದುಕೊಂಡಿದೆ. ಆದರೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಬಹುದು.

ಭಾರತ ಮತ್ತು ಪಾಕಿಸ್ತಾನ ನಡುವೆ ಏಷ್ಯಾಕಪ್‌’ನಲ್ಲಿ ಒಂದಲ್ಲ ಎರಡಲ್ಲ ಮೂರು ಪಂದ್ಯಗಳು ನಡೆಯಬಹುದು. ಈ ಎರಡೂ ತಂಡಗಳು 6 ರಾಷ್ಟ್ರಗಳ ಏಷ್ಯಾ ಕಪ್ ಟೂರ್ನಿಯಲ್ಲಿ ಕ್ವಾಲಿಫೈಯರ್ ತಂಡದೊಂದಿಗೆ ಗುಂಪಿನಲ್ಲಿ ಸ್ಥಾನ ಪಡೆದಿವೆ. ಇನ್ನೊಂದೆಡೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಎರಡನೇ ಗುಂಪಿನ ಭಾಗವಾಗಿದೆ. 13 ದಿನಗಳೊಳಗೆ ಏಷ್ಯಾಕಪ್ ನಲ್ಲಿ ಫೈನಲ್ ಪಂದ್ಯ ಸೇರಿದಂತೆ ಒಟ್ಟು 13 ಪಂದ್ಯಗಳು ನಡೆಯಲಿವೆ.

ಭಾರತ-ಪಾಕ್ ಪಂದ್ಯಗಳು ಎಲ್ಲಿ ನಡೆಯಲಿವೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳು ಪಾಕಿಸ್ತಾನದ ನೆಲದಲ್ಲಿ ನಡೆಯುವುದಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಪಂದ್ಯಗಳು ಎಲ್ಲಿ ನಡೆಯುತ್ತವೆ ಎಂಬುದು ಇನ್ನೂ ನಿರ್ಧರಿಸಲಾಗಿಲ್ಲ. ಆದರೆ ಯುಎಇ, ಓಮನ್, ಶ್ರೀಲಂಕಾ ಮತ್ತು ಇಂಗ್ಲೆಂಡ್’ನಲ್ಲಿ ಇಂಡೋ ಪಾಕ್ ಪಂದ್ಯ ಆಯೋಜನೆಯಾಗಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bad Times: ಮಂಗಳನ ಅಂಗಳದಲ್ಲಿ ಶತ್ರು ಬುಧ! ಈ ರಾಶಿಯವರ ಗ್ರಹಚಾರ ಕೆಡುವ ಜೊತೆ ಸಮಸ್ಯೆಗಳ ಮೂಟೆ ಬೆನ್ನೇರುತ್ತೆ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಈ ಬಾರಿ ಏಷ್ಯಾ ಕಪ್ ಆತಿಥ್ಯವನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಿದೆ. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಈ ಪಂದ್ಯಾವಳಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು, ಭಾರತ ತಂಡವು ಪಾಕಿಸ್ತಾನಕ್ಕೆ ಬರದಿದ್ದರೆ, ಪಾಕಿಸ್ತಾನ ತಂಡವು ಸಹ ಏಕದಿನ ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರವಾಸ ಮಾಡುವುದಿಲ್ಲ ಎಂದು ಹೇಳಿತು. ಕುತೂಹಲಕಾರಿಯಾಗಿ, ಎಸಿಸಿಯ ಪ್ರಸ್ತುತ ಮುಖ್ಯಸ್ಥ ಜೈ ಶಾ ಅವರು ಬಿಸಿಸಿಐ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವಾರ, ಐಸಿಸಿ ಬೋರ್ಡ್ ಸಭೆಯ ಹೊರತಾಗಿ, ದುಬೈನಲ್ಲಿ ಎಸಿಸಿ ಸದಸ್ಯ ರಾಷ್ಟ್ರಗಳ ಸಭೆ ನಡೆದಿದ್ದು, ಈ ಬಗ್ಗೆ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ. ಆದರೆ, ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News