ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸರಣಿಯ ಎರಡನೇ ಟೆಸ್ಟ್ ಪಂದ್ಯ ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾ ಪಾಲಿಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ.


COMMERCIAL BREAK
SCROLL TO CONTINUE READING

3 ಸ್ಟಾರ್ ಆಟಗಾರರು ಪ್ಲೇಯಿಂಗ್ 11 ನಿಂದ ಹೊರಕ್ಕೆ :
ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಅಜಿಂಕ್ಯ ರಹಾನೆ (Ajinkya Rahane) ಗಾಯದ ಕಾರಣ ಮುಂಬೈ ಟೆಸ್ಟ್‌ನ ಪ್ಲೇಯಿಂಗ್ XI ನಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಮಂಡಳಿಯ ವೆಬ್‌ಸೈಟ್‌ನಲ್ಲಿ ತಿಳಿಸಿದ್ದಾರೆ.


ದಕ್ಷಿಣ ಆಫ್ರಿಕಾ ಸರಣಿಗೂ ಮೊದಲು ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕತ್ವದಿಂದ ಕೊಹ್ಲಿ ವಜಾ..!
 
ಕಾನ್ಪುರ ಟೆಸ್ಟ್‌ನಲ್ಲಿ ಗಾಯ :

ಕಾನ್ಪುರ ಟೆಸ್ಟ್ ನ 5ನೇ ದಿನ ಟೀಂ ಇಂಡಿಯಾದ ವೇಗಿ ಇಶಾಂತ್ ಶರ್ಮಾ (Ishant Sharma) ಎಡಗೈ ಕಿರುಬೆರಳಿಗೆ ಗಾಯವಾಗಿದೆ. ಮೊದಲ ಟೆಸ್ಟ್ ಪಂದ್ಯದ ವೇಳೆ ಆಲ್ ರೌಂಡರ್ ರವೀಂದ್ರ ಜಡೇಜಾ (Ravindra Jadeja)  ಬಲಗೈ ಗಾಯಗೊಂಡಿದ್ದು, ಅವರಿಗೆ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ. ಅಜಿಂಕ್ಯ ರಹಾನೆ ಅವರು ಕೊನೆಯ ಟೆಸ್ಟ್‌ನ ಕೊನೆಯ ದಿನದಂದು ಗಾಯಗೊಂಡಿದ್ದಾರೆ.  


ಈ ಆಟಗಾರರಿಗೆ ಸಿಗಬಹುದು ಅವಕಾಶ : 
ಇಶಾಂತ್ ಶರ್ಮಾ ಬದಲಿಗೆ ಮೊಹಮ್ಮದ್ ಸಿರಾಜ್ (Mohammed Siraj), ರವೀಂದ್ರ ಜಡೇಜಾ ಬದಲಿಗೆ ಪ್ರಸಿದ್ಧ ಕೃಷ್ಣ (Prasidh Krishna) ಮತ್ತು ಅಜಿಂಕ್ಯ ರಹಾನೆ ಬದಲಿಗೆ ಸೂರ್ಯಕುಮಾರ್ ಯಾದವ್ (Suryakumar Yadav) ಅವರಿಗೆ ಅವಕಾಶ ನೀಡಬಹುದು.


IND vs NZ : ಕೊಹ್ಲಿ ಬಂದ ತಕ್ಷಣ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆ!
 
ಭಾರತದ ಸಂಭಾವ್ಯ ಪ್ಲೇಯಿಂಗ್ XI :
ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆ), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಪ್ರಸಿದ್ದ ಕೃಷ್ಣ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.


ನ್ಯೂಜಿಲೆಂಡ್‌ನ ಸಂಭಾವ್ಯ ಪ್ಲೇಯಿಂಗ್ XI
ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ಸಿ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ , ಕೈಲ್ ಜೇಮಿಸನ್, ರಚಿನ್ ರವೀಂದ್ರ, ಎಜಾಜ್ ಪಟೇಲ್, ಟಿಮ್ ಸೌಥಿ, ವಿಲಿಯಂ ಸೊಮರ್ವಿಲ್ಲೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.