300ನೇ ಪಂದ್ಯದಲ್ಲಿ ಬ್ರೇಕ್‌ ಆಗಲಿವೆ ಈ 6 ಅದ್ಭುತ ದಾಖಲೆಗಳು; ನ್ಯೂಜಿಲೆಂಡ್‌ ವಿರುದ್ಧ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು!

ICC Champions Trophy 2025: ನ್ಯೂಜಿಲೆಂಡ್‌ ವಿರುದ್ಧವೂ ರನ್‌ ಮಷಿನ್‌ ಖ್ಯಾತಿಯ ವಿರಾಟ್ ಕೊಹ್ಲಿಯಿಂದ ಭರ್ಜರಿ ಪ್ರದರ್ಶನ ನೀಡುವ ಸಾಧ್ಯತೆ ಇದೆ. ಕಿವೀಸ್‌ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯವು ಕೊಹ್ಲಿಗೆ ತುಂಬಾ ವಿಶೇಷವಾಗಲಿದ್ದು, ಇದು ಅವರ ಏಕದಿನ ವೃತ್ತಿಜೀವನದ 300ನೇ ಪಂದ್ಯವಾಗಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 6 ಅದ್ಭುತ ದಾಖಲೆಗಳನ್ನು ಮುರಿಯುವ ಸಾಧ್ಯತೆ ಇದೆ.

Written by - Puttaraj K Alur | Last Updated : Mar 1, 2025, 02:42 PM IST
  • ಭಾನುವಾರ ದುಬೈನಲ್ಲಿ ಟೀಂ ಇಂಡಿಯಾ vs ನ್ಯೂಜಿಲ್ಯಾಂಡ್‌ ಮುಖಾಮುಖಿ
  • ರನ್‌ ಮಷಿನ್‌ ಖ್ಯಾತಿಯ ವಿರಾಟ್‌ ಕೊಹ್ಲಿಗೆ ವೃತ್ತಿ ಜೀವನದ 300ನೇ ಪಂದ್ಯ
  • ನ್ಯೂಜಿಲ್ಯಾಂಡ್‌ ವಿರುದ್ಧ ಕೊಹ್ಲಿಗೆ 6 ದಾಖಲೆಗಳನ್ನ ಮುರಿಯುವ ಅವಕಾಶ
300ನೇ ಪಂದ್ಯದಲ್ಲಿ ಬ್ರೇಕ್‌ ಆಗಲಿವೆ ಈ 6 ಅದ್ಭುತ ದಾಖಲೆಗಳು; ನ್ಯೂಜಿಲೆಂಡ್‌ ವಿರುದ್ಧ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು!
ಕಿವೀಸ್‌ ವಿರುದ್ಧವೂ ಅಬ್ಬರಿಸ್ತಾರಾ ಕೊಹ್ಲಿ?

Virat Kohli Records: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ನಾಳೆ ಅಂದರೆ ಭಾನುವಾರ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಉಭಯ ದೇಶಗಳ ನಡುವಿನ ಈ ಅದ್ಭುತ ಪಂದ್ಯವು ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆ. ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಕೊಹ್ಲಿ ಮೇಲೆ ನೆಟ್ಟಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅದ್ಭುತ ಶತಕ ಗಳಿಸಿ ಭಾರತಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. 

Add Zee News as a Preferred Source

ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 51 ಶತಕಗಳನ್ನು ಪೂರೈಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 82 ಶತಕಗಳನ್ನು ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿ 27,503 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧವೂ ಅದ್ಭುತ ಇನ್ನಿಂಗ್ಸ್‌ ಆಡುವ ತವಕದಲ್ಲಿರುವ ಕೊಹ್ಲಿಯಿಂದ ಹಲವು ದಾಖಲೆಗಳು ಬ್ರೇಕ್‌ ಆಗುವ ನಿರೀಕ್ಷೆಯಿದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯವು ಕೊಹ್ಲಿಗೆ ತುಂಬಾ ವಿಶೇಷವಾಗಲಿದ್ದು, ಇದು ಅವರ ಏಕದಿನ ವೃತ್ತಿಜೀವನದ 300ನೇ ಪಂದ್ಯವಾಗಲಿದೆ. ಈ ಪಂದ್ಯದಲ್ಲಿ 6 ಅದ್ಭುತ ದಾಖಲೆಗಳನ್ನು ಬ್ರೇಕ್‌ ಮಾಡುವ ಅವಕಾಶ ಕೊಹ್ಲಿಗಿದೆ. ಆ ದಾಖಲೆಗಳು ಯಾವುವು ಎಂದು ತಿಳಿಯಿರಿ.

ಇದನ್ನೂ ಓದಿ: Champions Trophy | ಒಂದು ಪಂದ್ಯ ಬಾಕಿ ಇರುವಾಗಲೇ ವಿಶ್ವಕಪ್ ವಿಜೇತ ನಾಯಕ ರಾಜೀನಾಮೆ

1) ಏಕದಿನ ಪಂದ್ಯಗಳಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರ

ವಿರಾಟ್ ಕೊಹ್ಲಿ ಇದುವರೆಗೆ 299 ಏಕದಿನ ಪಂದ್ಯಗಳಲ್ಲಿ 14,085 ರನ್ ಗಳಿಸಿದ್ದಾರೆ. ಭಾನುವಾರ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 150 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಶ್ರೀಲಂಕಾದ ಶ್ರೇಷ್ಠ ಬ್ಯಾಟ್ಸ್‌ಮನ್ ಕುಮಾರ್ ಸಂಗಕ್ಕಾರರ ಶ್ರೇಷ್ಠ ದಾಖಲೆಯನ್ನು ಮುರಿಯಲಿದ್ದಾರೆ. ಈ ಮೂಲಕ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಅತಿಹೆಚ್ಚು ರನ್ ಗಳಿಸಿದ 2ನೇ ಬ್ಯಾಟ್ಸ್‌ಮನ್ ಆಗಲಿದ್ದಾರೆ. ತಮ್ಮ 15 ವರ್ಷಗಳ ಸುದೀರ್ಘ ಏಕದಿನ ವೃತ್ತಿಜೀವನದಲ್ಲಿ ಸಂಗಕ್ಕಾರ 404 ಪಂದ್ಯಗಳನ್ನು ಆಡಿದ್ದು, 14,234 ರನ್ ಗಳಿಸಿದ್ದಾರೆ.

2) ಏಕದಿನ ಪಂದ್ಯಗಳಲ್ಲಿ 2ನೇ ಅತ್ಯಂತ ಯಶಸ್ವಿ ಫೀಲ್ಡರ್!

ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಮೊಹಮ್ಮದ್ ಅಜರುದ್ದೀನ್ ಅವರ 156 ಕ್ಯಾಚ್‌ಗಳ ದಾಖಲೆಯನ್ನು ಮುರಿದಿದ್ದಾರೆ. ಇದೀಗ 36 ವರ್ಷದ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 3 ಕ್ಯಾಚ್‌ಗಳನ್ನು ಹಿಡಿಯುವಲ್ಲಿ ಯಶಸ್ವಿಯಾದರೆ, ರಿಕಿ ಪಾಂಟಿಂಗ್ ಅವರ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 160 ಕ್ಯಾಚ್‌ಗಳ ದಾಖಲೆಯನ್ನ ಮುರಿಯಲಿದ್ದಾರೆ. ಈ ಮೂಲಕ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 2ನೇ ಅತ್ಯಂತ ಯಶಸ್ವಿ ಫೀಲ್ಡರ್ ಆಗಲಿದ್ದಾರೆ. ಶ್ರೀಲಂಕಾದ ಶ್ರೇಷ್ಠ ಬ್ಯಾಟ್ಸ್‌ಮನ್ ಮಹೇಲ ಜಯವರ್ಧನೆ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿಹೆಚ್ಚು ಕ್ಯಾಚ್‌ಗಳನ್ನು (218) ಪಡೆದಿದ್ದಾರೆ.

3) ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪರ ಅತಿಹೆಚ್ಚು ರನ್‌ಗಳು

ವಿರಾಟ್ ಕೊಹ್ಲಿ ಇದುವರೆಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಪರ 15 ಪಂದ್ಯಗಳನ್ನು ಆಡಿದ್ದು, 651 ರನ್ ಗಳಿಸಿದ್ದಾರೆ. ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಇನ್ನೂ 51 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಶಿಖರ್ ಧವನ್‌ರ ಶ್ರೇಷ್ಠ ದಾಖಲೆಯನ್ನು ಮುರಿಯಲಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿ ಕೊಹ್ಲಿ ಭಾರತದ ಪರ ಅತಿಹೆಚ್ಚು ರನ್ ಗಳಿಸಿದ ಆಟಗಾರನಾಗಲಿದ್ದಾರೆ. ಧವನ್ ಟೀಂ ಇಂಡಿಯಾ ಪರ 10 ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡಿದ್ದು, 701 ರನ್ ಗಳಿಸಿದ್ದಾರೆ.

4) ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್‌ಗಳು

ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಕನಿಷ್ಠ 142 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅವರ ಶ್ರೇಷ್ಠ ದಾಖಲೆಯನ್ನು ಮುರಿಯುತ್ತಾರೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರಾಗುತ್ತಾರೆ. ನಾಲ್ಕು ಚಾಂಪಿಯನ್ಸ್ ಟ್ರೋಫಿ ಋತುಗಳಲ್ಲಿ ವೆಸ್ಟ್ ಇಂಡೀಸ್ ಪರ ಕ್ರಿಸ್ ಗೇಲ್ ಒಟ್ಟು 17 ಪಂದ್ಯಗಳನ್ನು ಆಡಿದ್ದು 791 ರನ್ ಗಳಿಸಿದ್ದಾರೆ.

ಇದನ್ನೂ ಓದಿ: WPL 2025: ಮುಂಬೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 9 ವಿಕೆಟ್‌ಗಳ ಭರ್ಜರಿ ಜಯ

5) ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಭಾರತ ಪರಅತಿ ಹೆಚ್ಚು ರನ್‌ಗಳು

ಆಗಸ್ಟ್ 2008ರಲ್ಲಿ ಭಾರತ ಪರ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ ನಂತರ, ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ 31 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ 1,645 ರನ್ ಗಳಿಸಿದ್ದಾರೆ. ಭಾನುವಾರ ಕೊಹ್ಲಿ ಇನ್ನೂ 106 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಸಚಿನ್ ತೆಂಡೂಲ್ಕರ್ ಅವರ 1,750 ರನ್‌ಗಳ ದಾಖಲೆಯನ್ನು ಮುರಿಯಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಕೊಹ್ಲಿ ಭಾರತದ ಪರ ಅತಿಹೆಚ್ಚು ರನ್ ಗಳಿಸಿದ ಆಟಗಾರನಾಗಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಅತಿಹೆಚ್ಚು ಏಕದಿನ ರನ್ ಗಳಿಸಿದ ದಾಖಲೆಯನ್ನು ರಿಕಿ ಪಾಂಟಿಂಗ್ ಹೊಂದಿದ್ದಾರೆ. ಪಾಂಟಿಂಗ್ ನ್ಯೂಜಿಲೆಂಡ್ ವಿರುದ್ಧ 51 ಏಕದಿನ ಪಂದ್ಯಗಳಲ್ಲಿ 1,971 ರನ್ ಗಳಿಸಿದ್ದಾರೆ.

6) ನ್ಯೂಜಿಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತಿಹೆಚ್ಚು ಶತಕಗಳು

ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಆಡಿರುವ 31 ಏಕದಿನ ಪಂದ್ಯಗಳಲ್ಲಿ ಆರು ಶತಕಗಳನ್ನು ಗಳಿಸಿದ್ದಾರೆ. ಭಾನುವಾರ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಶತಕ ಗಳಿಸಿದರೆ, ಏಕದಿನ ಮಾದರಿಯಲ್ಲಿ ಕಿವೀಸ್ ವಿರುದ್ಧ 7 ಶತಕ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಅತಿಹೆಚ್ಚು ಏಕದಿನ ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಕೊಹ್ಲಿ ಪ್ರಸ್ತುತ ವೀರೇಂದ್ರ ಸೆಹ್ವಾಗ್ ಮತ್ತು ರಿಕಿ ಪಾಂಟಿಂಗ್ ಅವರೊಂದಿಗೆ ಸಮಬಲ ಕಾಯ್ದುಕೊಂಡಿದ್ದಾರೆ. ಸೆಹ್ವಾಗ್ ಮತ್ತು ಪಾಂಟಿಂಗ್ ತಮ್ಮ ವೃತ್ತಿಜೀವನದಲ್ಲಿ ನ್ಯೂಜಿಲೆಂಡ್ ವಿರುದ್ಧ ತಲಾ ಆರು ಶತಕಗಳನ್ನ ಗಳಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News