ತೃತೀಯ ಟೆಸ್ಟ್ : ದ್ವಿಶತಕ ಗಳಿಸಿ ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

ರಾಂಚಿಯಲ್ಲಿ ಭಾನುವಾರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ 4 ನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

Last Updated : Oct 20, 2019, 01:10 PM IST
 ತೃತೀಯ ಟೆಸ್ಟ್ : ದ್ವಿಶತಕ ಗಳಿಸಿ ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ   title=

ನವದೆಹಲಿ: ರಾಂಚಿಯಲ್ಲಿ ಭಾನುವಾರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ 4 ನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಆ ಮೂಲಕ ಈಗ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ಕ್ರಿಸ್ ಗೇಲ್ ಸಾಲಿಗೆ ಸೇರಿದ್ದಾರೆ. ಇನ್ನೊಂದು ವಿಶೇಷವೆಂದರೆ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ 264 ರಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ದಾಖಲೆಯನ್ನು ಹೊಂದಿದ್ದಾರೆ.

249 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ರೋಹಿತ್ ಶರ್ಮಾ 28 ಬೌಂಡರಿ ಮತ್ತು 4 ಸಿಕ್ಸರ್ ಬಾರಿಸಿದರು. ಇನ್ನೊಂದು ವಿಶೇಷವೆಂದರೆ ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಗಳಿಸಿದ ನಂತರ ಟೆಸ್ಟ್‌ನಲ್ಲಿ 200 ಕ್ಕಿಂತ ಹೆಚ್ಚು ರನ್ ಗಳನ್ನು ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದುವರೆಗೆ ವಿನೂ ಮಂಕಡ್, ಬುಧಿ ಕುಂದೇರನ್, ಸುನಿಲ್ ಗವಾಸ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ನಂತರ ಟೆಸ್ಟ್ ಸರಣಿಯೊಂದರಲ್ಲಿ 500 ರನ್ ಗಳಿಸಿದ 5 ನೇ ಭಾರತೀಯ ಆರಂಭಿಕ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

ವಿಶೇಷವೆಂದರೆ, ಮಯಾಂಕ್ ಅಗರ್ವಾಲ್ ಮತ್ತು ವಿರಾಟ್ ಕೊಹ್ಲಿ ನಂತರ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ ದ್ವಿಶತಕ ಬಾರಿಸಿದ ರೋಹಿತ್ 3 ನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.ಅಲ್ಲದೆ ಟೆಸ್ಟ್ ಸರಣಿಯೊಂದರಲ್ಲಿ ಅಧಿಕ ಸಿಕ್ಸರ್ ಗಳನ್ನೂ ಹೊಡೆದ ಆಟಗಾರ ಎನ್ನುವ ಖ್ಯಾತಿಯನ್ನು ಪಡೆದಿದ್ದಾರೆ.  
 

Trending News