ಟೀಂ ಇಂಡಿಯಾದಲ್ಲಿ ಶುರುವಾಗಲಿದೆ ಈ ಮಾರಕ ಆಟಗಾರನ ಅಬ್ಬರ: ಮೊದಲ ಪಂದ್ಯದಲ್ಲಿ ಗೆಲುವು ಖಚಿತ!
ODI Cricket: ವೇಗದ ಬೌಲಿಂಗ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಅತಿದೊಡ್ಡ ಮ್ಯಾಚ್ ವಿನ್ನರ್ ಎಂದು ಸಾಬೀತುಪಡಿಸಬಹುದು. ಮುಂಬೈನ ವಾಂಖೆಡೆ ಸ್ಟೇಡಿಯಂನ ಪಿಚ್ ಸ್ವಿಂಗ್ ಬೌಲರ್‌ಗಳಿಗೆ ಸಾಕಷ್ಟು ಸಹಾಯ ಮಾಡುತ್ತದೆ. ವೇಗದ ಬೌಲಿಂಗ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಮುಂಬೈ ಪಿಚ್‌ನಲ್ಲಿ ವಿನಾಶಕಾರಿಯಾಗಬಹುದು.
Shardul Thakur: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಒಬ್ಬ ಆಟಗಾರ ನಾಯಕ ಹಾರ್ದಿಕ್ ಪಾಂಡ್ಯ ಅವರ ದೊಡ್ಡ ಅಸ್ತ್ರವಾಗಲಿದ್ದು, ಏಕಾಂಗಿಯಾಗಿ ಆಸ್ಟ್ರೇಲಿಯಾ ತಂಡವನ್ನು ನಾಶಪಡಿಸುವ ಸಾಮಾರ್ಥ್ಯವನ್ನು ಹೊಂದಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಭಾರತ ಆಡಬೇಕಾಗಿದ್ದು, ಈ ಪಂದ್ಯವನ್ನು ಗೆಲ್ಲುವುದು ಭಾರತಕ್ಕೆ ಬಹಳ ಮುಖ್ಯವಾಗಿದೆ.
ಇದನ್ನೂ ಓದಿ: WTC ಫೈನಲ್ ತಂಡ ಪ್ರಕಟಕ್ಕೆ ದಿನಗಣನೆ ಶುರು: ಪ್ಲೇಯಿಂಗ್ 11ರಲ್ಲಿ ಈ ಡ್ಯಾಶಿಂಗ್ ಆಟಗಾರನಿಗೆ ಸಿಗುತ್ತಾ ಸ್ಥಾನ!
ವೇಗದ ಬೌಲಿಂಗ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಅತಿದೊಡ್ಡ ಮ್ಯಾಚ್ ವಿನ್ನರ್ ಎಂದು ಸಾಬೀತುಪಡಿಸಬಹುದು. ಮುಂಬೈನ ವಾಂಖೆಡೆ ಸ್ಟೇಡಿಯಂನ ಪಿಚ್ ಸ್ವಿಂಗ್ ಬೌಲರ್‌ಗಳಿಗೆ ಸಾಕಷ್ಟು ಸಹಾಯ ಮಾಡುತ್ತದೆ. ವೇಗದ ಬೌಲಿಂಗ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಮುಂಬೈ ಪಿಚ್‌ನಲ್ಲಿ ವಿನಾಶಕಾರಿಯಾಗಬಹುದು. ಶಾರ್ದೂಲ್ ಠಾಕೂರ್ ಆರಂಭಿಕ ಓವರ್‌ಗಳಲ್ಲಿ ತಮ್ಮ ತೀಕ್ಷ್ಣವಾದ ಬೌಲಿಂಗ್‌ನ ಆಧಾರದ ಮೇಲೆ ವಿಕೆಟ್‌ಗಳನ್ನು ಪಡೆಯುವಲ್ಲಿ ಪರಿಣತಿ ಹೊಂದಿದ್ದಾರೆ. ಇಂದು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೇಗದ ಬೌಲಿಂಗ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್‌ಗೆ ನಾಯಕ ಹಾರ್ದಿಕ್ ಪಾಂಡ್ಯ ಅವಕಾಶ ನೀಡಿದರೆ, ಅವರು ಏಕಾಂಗಿಯಾಗಿ ಭಾರತವನ್ನು ಗೆಲ್ಲಿಸಿಕೊಡುವಂತಹ ಸಾಮಾರ್ಥ್ಯ ಹೊಂದಿದ್ದಾರೆ.
ವೇಗದ ಬೌಲಿಂಗ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಅವರ ದೊಡ್ಡ ಸಾಮಾರ್ಥ್ಯವೆಂದರೆ ಅವರು ಆರಂಭಿಕ ಮತ್ತು ಕೊನೆಯ ಓವರ್’ಗಳಲ್ಲಿ ವಿಕೆಟ್ ಪಡೆಯುವ ಪ್ರತಿಭೆಯನ್ನು ಹೊಂದಿದ್ದಾರೆ. ಶಾರ್ದೂಲ್ ಠಾಕೂರ್ ಆಗಮನದಿಂದ ಟೀಂ ಇಂಡಿಯಾದ ವೇಗದ ಬೌಲಿಂಗ್ ವಿಭಾಗ ಇನ್ನಷ್ಟು ಬಲಿಷ್ಠವಾಗಲಿದೆ. ಇದರಿಂದಾಗಿ ಅವರು ಬ್ಯಾಟ್ಸ್‌ಮನ್‌ಗಳಿಗೆ ತುಂಬಾ ಅಪಾಯಕಾರಿ ಎಂದು ಸಾಬೀತುಪಡಿಸಿದ್ದಾರೆ.
ಇದನ್ನೂ ಓದಿ: IND vs AUS: ಏಕದಿನ ಪಂದ್ಯದಲ್ಲಿ ಶುಭ್ಮನ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯೋದು ಈ ಆಟಗಾರ! ಬಹಿರಂಗಪಡಿಸಿದ ಹಾರ್ದಿಕ್
ಶಾರ್ದೂಲ್ ಠಾಕೂರ್ ಟೀಂ ಇಂಡಿಯಾ ಪರ 34 ODIಗಳನ್ನು ಆಡಿದ್ದಾರೆ. ಇದರಲ್ಲಿ ಅವರು 31.74 ರ ಅತ್ಯುತ್ತಮ ಬೌಲಿಂಗ್ ಸರಾಸರಿಯಲ್ಲಿ 50 ವಿಕೆಟ್ಗಳನ್ನು ಪಡೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಶಾರ್ದೂಲ್ ಠಾಕೂರ್ ಅವರ ದಾಖಲೆ ಇನ್ನೂ ಉತ್ತಮವಾಗಿದೆ. ಶಾರ್ದೂಲ್ ಠಾಕೂರ್ ಟೀಂ ಇಂಡಿಯಾ ಪರ 25 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 23.39ರ ಅತ್ಯುತ್ತಮ ಬೌಲಿಂಗ್ ಸರಾಸರಿಯಲ್ಲಿ 33 ವಿಕೆಟ್ ಪಡೆದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.