IND vs SL: ಸರಣಿ ಗೆಲ್ಲಲು ರೋಹಿತ್ ಮಾಡಲೇಬೇಕು ಈ ಕೆಲಸ: ಪ್ಲೇಯಿಂಗ್ 11 ನಲ್ಲಿ ಇವರಿಗೆ ಮಾತ್ರ ಸ್ಥಾನ

Team India Playing XI: ಸೆಪ್ಟೆಂಬರ್‌ 2022ರಂದು ನಡೆದ ಏಷ್ಯಾಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಶತಕ ಬಾರಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಮೂರು ವರ್ಷಗಳ ಕಾಯುವಿಕೆಯನ್ನು ವಿರಾಟ್ ಕೊಹ್ಲಿ ಕೊನೆಗೊಳಿಸಿದ್ದರು, ಇದೀಗ ಗುವಾಹಟಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ತಮ್ಮ 73 ನೇ ಅಂತಾರಾಷ್ಟ್ರೀಯ ಶತಕವನ್ನು ಗಳಿಸಿ ಭಾರತವನ್ನು 67 ರನ್‌ಗಳ ಅಂತರದಿಂದ ಗೆಲ್ಲುವಂತೆ ಮಾಡಿದರು.

Written by - Bhavishya Shetty | Last Updated : Jan 12, 2023, 07:34 AM IST
    • ರೋಹಿತ್ ಶರ್ಮಾ ಪ್ಲೇಯಿಂಗ್ XI ನಲ್ಲಿ ಭಾರೀ ಬದಲಾವಣೆ ಮಾಡುವ ಸಾಧ್ಯತೆ
    • ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ಈ ಪಂದ್ಯದಿಂದ ಹೊರಗಿಡುತ್ತಾರೆ ಎನ್ನಲಾಗಿದೆ
    • ವಿರಾಟ್ ಕೊಹ್ಲಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ
IND vs SL: ಸರಣಿ ಗೆಲ್ಲಲು ರೋಹಿತ್ ಮಾಡಲೇಬೇಕು ಈ ಕೆಲಸ: ಪ್ಲೇಯಿಂಗ್ 11 ನಲ್ಲಿ ಇವರಿಗೆ ಮಾತ್ರ ಸ್ಥಾನ title=
Rohit Sharma

Team India Playing XI: ಭಾರತ ತಂಡ ಇಂದು ಶ್ರೀಲಂಕಾ ವಿರುದ್ಧ ಎರಡನೇ ಏಕದಿನ ಪಂದ್ಯವನ್ನು ಆಡಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ಕೈ ವಶ ಮಾಡಿಕೊಳ್ಳಲು ತಯಾರಿ ನಡೆಸುತ್ತಿದೆ. ಇದಕ್ಕಾಗಿ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್ XI ನಲ್ಲಿ ಭಾರೀ ಬದಲಾವಣೆ ಮಾಡುವ ಸಾಧ್ಯತೆ ಇದೆ. ಕಳೆದ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ಈ ಪಂದ್ಯದಿಂದ ಹೊರಗಿಡುತ್ತಾರೆ ಎನ್ನಲಾಗಿದೆ. ಜೊತೆಗೆ ಸೂಪರ್‌ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಇದನ್ನೂ ಓದಿ: India vs Sri Lanka 1st ODI: ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಿದ ವಿರಾಟ್ ಕೊಹ್ಲಿ

ಸೆಪ್ಟೆಂಬರ್‌ 2022ರಂದು ನಡೆದ ಏಷ್ಯಾಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಶತಕ ಬಾರಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಮೂರು ವರ್ಷಗಳ ಕಾಯುವಿಕೆಯನ್ನು ವಿರಾಟ್ ಕೊಹ್ಲಿ ಕೊನೆಗೊಳಿಸಿದ್ದರು, ಇದೀಗ ಗುವಾಹಟಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ತಮ್ಮ 73 ನೇ ಅಂತಾರಾಷ್ಟ್ರೀಯ ಶತಕವನ್ನು ಗಳಿಸಿ ಭಾರತವನ್ನು 67 ರನ್‌ಗಳ ಅಂತರದಿಂದ ಗೆಲ್ಲುವಂತೆ ಮಾಡಿದರು.

ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಟೀಂ ಇಂಡಿಯಾಗೆ ಕೊಂಚವೂ ಪೈಪೋಟಿ ನೀಡಿದಂತೆ ಕಂಡುಬಂದಿರಲಿಲ್ಲ. ಈ ಪಂದ್ಯದಲ್ಲಿ ಭಾರತ ಏಳು ವಿಕೆಟ್‌ಗೆ 373 ರನ್ ಗಳಿಸಿತ್ತು. ಶ್ರೀಲಂಕಾದ ಯಾವ ಬೌಲರ್‌ಗಳೂ ಉತ್ತಮವಾಗಿ ಪ್ರದರ್ಶನ ನೀಡಿರಲಿಲ್ಲ. ರೋಹಿತ್ ಶರ್ಮಾ ಕೂಡ ಗಾಯದಿಂದ ಚೇತರಿಸಿಕೊಂಡು 67 ಎಸೆತಗಳಲ್ಲಿ 83 ರನ್ ಗಳಿಸಿದ್ದರು.

8 ವರ್ಷಗಳ ಹಿಂದೆ ಮಾಡಿದ ಅದ್ಭುತ ಕೆಲಸ:

ಎಂಟು ವರ್ಷಗಳ ಹಿಂದೆ ಇಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಉಭಯ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾದಾಗ ರೋಹಿತ್ 264 ರನ್ ಗಳಿಸಿದ್ದರು. ಈಗ ಮತ್ತೊಮ್ಮೆ ಇಲ್ಲಿ ದೊಡ್ಡ ಅಂಕ ಗಳಿಸುವ ಉತ್ಸಾಹದಲ್ಲಿದ್ದಾರೆ. ಯುವ ಸ್ಟಾರ್ ಬ್ಯಾಟ್ಸ್‌ಮನ್ ಶುಭಮನ್ ಗಿಲ್ 60 ಎಸೆತಗಳಲ್ಲಿ 70 ರನ್ ಗಳಿಸಿದ್ದರು.

ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಕಳಪೆ ಫಾರ್ಮ್ ಭಾರತದ ಬ್ಯಾಟಿಂಗ್‌ನಲ್ಲಿ ಆತಂಕಕ್ಕೆ ಕಾರಣವಾಗಿದೆ. ವಿಕೆಟ್ ಕೀಪರ್ ಪಾತ್ರವನ್ನೂ ನಿರ್ವಹಿಸುತ್ತಿರುವ ರಾಹುಲ್ ಸತತವಾಗಿ ವೈಫಲ್ಯ ಅನುಭವಿಸುತ್ತಿದ್ದಾರೆ. ಕೊನೆಯ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಕೂಡ ತಮ್ಮ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಈ ಇಬ್ಬರೂ ಆಟಗಾರರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಅವರಿಗೆ ಅವಕಾಶ ನೀಡಬಹುದು.

ಇದನ್ನೂ ಓದಿ: Ind Vs SL: ವೀರೇಂದ್ರ ಸೆಹ್ವಾಗ್ ವಿರುದ್ಧ ಕುತಂತ್ರ ಮಾಡಿದ್ದ ‘ಲಂಕಾ’ದ ಮನಗೆದ್ದ ರೋಹಿತ್!

ಶ್ರೀಲಂಕಾ ವಿರುದ್ಧ ಭಾರತ ತಂಡ:

ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಲೋಕೇಶ್ ರಾಹುಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಉಮ್ರನ್‌ದೀಪ್ ಸಿರಾಜ್ 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News