Sourav Ganguly statement on Rohit Sharma : ಜೂನ್‌ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್‌ಗಾಗಿ ಭಾರತ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಸೇರ್ಪಡೆಗೊಳಿಸುವುದನ್ನು ಮಾಜಿ ನಾಯಕ ಸೌರವ್ ಗಂಗೂಲಿ ಭಾನುವಾರ ಬೆಂಬಲಿಸಿದ್ದಾರೆ.ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ  16 ಸದಸ್ಯರ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದೆ.ಇದರಲ್ಲಿ ರೋಹಿತ್ ಶರ್ಮಾ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ.ವಿರಾಟ್ ಕೊಹ್ಲಿ ಕೂಡಾ ಟಿ20 ತಂಡಕ್ಕೆ ಮರಳಿದ್ದಾರೆ.ಈ ಇಬ್ಬರೂ ಅನುಭವಿ ಆಟಗಾರರು ಸುಮಾರು 14 ತಿಂಗಳ ನಂತರ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ.  


COMMERCIAL BREAK
SCROLL TO CONTINUE READING

ಸಾರಥ್ಯ ವಹಿಸಬೇಕು ರೋಹಿತ್ :  
ಟಿ20 ಅಂತರಾಷ್ಟ್ರೀಯ ವಿಶ್ವಕಪ್‌ನಲ್ಲಿ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಬೇಕು ಎಂದು ಸೌರವ್ ಗಂಗೂಳಿ ಹೇಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡದಲ್ಲಿ ಇರಬೇಕು. ವಿರಾಟ್ ಒಬ್ಬ ಶ್ರೇಷ್ಠ ಆಟಗಾರ.14 ತಿಂಗಳ ನಂತರ ಈ ಫಾರ್ಮಾಟ್ ಗೆ ಮರಳುತ್ತಿರುವುದು ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದ್ದಾರೆ.ಕಳೆದ ವರ್ಷ ನವೆಂಬರ್ 10 ರಂದು ನಡೆದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲನುಭವಿಸಿತ್ತು. ಇದುವೇ ಈ ಮಾದರಿಯಲ್ಲಿ ಈ ಇಬ್ಬರು ಆಟಗಾರರ ಕೊನೆಯ ಪಂದ್ಯವಾಗಿತ್ತು. 


ಇದನ್ನೂ ಓದಿ :  ಟೀಂ ಇಂಡಿಯಾ ವಿರುದ್ಧ ಟಿ20 ಸರಣಿಗೆ ಬಲಿಷ್ಠ ಅಫ್ಘಾನ್‌ ತಂಡ ಪ್ರಕಟ


ಜೈಸ್ವಾಲ್‌ಗೆ ಸಾಕಷ್ಟು ಅವಕಾಶಗಳು ಸಿಗಲಿವೆ : 
ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡು ಟೆಸ್ಟ್‌ಗಳ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಅವರ ಪ್ರದರ್ಶನದಿಂದ ಗಂಗೂಲಿ ತುಂಬಾ ಪ್ರಭಾವಿತರಾಗಿದ್ದಾರೆ. ಈ ಯುವ ಆರಂಭಿಕ ಬ್ಯಾಟ್ಸ್‌ಮನ್ ಭವಿಷ್ಯದಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆಯುತ್ತಾರೆ ಎಂದು ಗಂಗೂಲಿ ಭವಿಷ್ಯ ನುಡಿದಿದ್ದಾರೆ. 22 ವರ್ಷದ ಯಶಸ್ವಿ ಸೆಂಚುರಿಯನ್ ಮತ್ತು ಕೇಪ್ ಟೌನ್ ಟೆಸ್ಟ್‌ನ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಕೇವಲ 50 ರನ್ ಗಳಿಸಿದರು. ಆದರೆ ಎರಡನೇ ಟೆಸ್ಟ್‌ನಲ್ಲಿ ಉತ್ತಮವಾಗಿ ಆಡಿದ್ದಾರೆ. ಇದು ಅವರ ವೃತ್ತಿಜೀವನದ ಆರಂಭವಾಗಿದ್ದು, ಅವರಿಗೆ ಸಾಕಷ್ಟು ಅವಕಾಶಗಳು ಸಿಗಲಿವೆ ಎಂದು ಕಾರ್ಯಕ್ರಮವೊಂದರಲ್ಲಿ ಸೌರವ್ ಗಂಗೂಲಿ ಹೇಳಿದ್ದಾರೆ.  


ಟೆಸ್ಟ್ ಸರಣಿ ಗೆದ್ದ ಬಳಿಕ ಈ ಮಾತು :   
ಸೆಂಚುರಿಯನ್‌ನಲ್ಲಿ ಇನ್ನಿಂಗ್ಸ್ ಮತ್ತು 32 ರನ್‌ಗಳ ಸೋಲಿನ ನಂತರ, ಭಾರತವು ಕೇಪ್‌ಟೌನ್‌ನಲ್ಲಿ ಮತ್ತೆ ಕಂ ಬ್ಯಾಕ್ ಮಾಡಿದೆ. ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ವಿಕೆಟ್‌ಗಳಿಂದ ಸೋಲಿಸಿದೆ. ಈ ಕುರಿತು ಮಾತನಾಡಿದ ಗಂಗೂಲಿ, 'ಪಂದ್ಯ ಸೋತ ನಂತರ ಜನರು ಬಹಳ ಮಾತನಾಡುತ್ತಾರೆ. ಆದರೆ ಭಾರತ ಬಲಿಷ್ಠ ತಂಡ. ಅವರು ಹೇಗೆ ಆಡಿದ್ದಾರೆ ಎಂಬುದನ್ನು ನೋಡಬೇಕು. ಏಕದಿನ ಸರಣಿಯನ್ನು ಗೆದ್ದು, ಟೆಸ್ಟ್ ಮತ್ತು ಟಿ 20 ಸರಣಿಯನ್ನು ಡ್ರಾ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.  


ಇದನ್ನೂ ಓದಿ :  ಇಂಡಿಯಾ ಮತ್ತು ಆಸಿಸ್‌ ನಡುವಿನ ಮಹಿಳೆಯರ 2ನೇ ಟಿ20 ಕ್ಷಣಗಣನೆ ಆರಂಭ! ಆಸಿಸ್‌ ಗೆ ಮಾಡು ಇಲ್ಲವೇ ಮಡಿ ಪಂದ್ಯ


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ