Virat Kohliಯನ್ನು ನಾಯಕತ್ವದಿಂದ ಕೆಳಗಿಳಿಸಿದ ವಿವಾದದ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗಂಗೂಲಿ ನೀಡಿದ ಈ ಹೇಳಿಕೆ!

Sourav Ganguly Statement on Virat Kohli: ಸೌರವ್ ಗಂಗೂಲಿ ಅವರು ವಿರಾಟ್ ಕೊಹ್ಲಿಯಂತಹ ಅನುಭವಿ ಬ್ಯಾಟ್ಸ್‌ಮನ್‌ಗಳನ್ನು ಏಕದಿನ ನಾಯಕತ್ವದಿಂದ ಹಠಾತ್ತನೆ ತೆಗೆದುಹಾಕಿದ್ದಕ್ಕಾಗಿ ಟೀಕೆಗೆ ಒಳಪಟ್ಟಿದ್ದಾರೆ. ಇದೀಗ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ವಿರಾಟ್ ಕೊಹ್ಲಿ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದಾರೆ. ಭಾರತ ಮುಂದಿನ ತಿಂಗಳು ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಾಗಿದೆ.

Written by - Bhavishya Shetty | Last Updated : Jan 27, 2023, 07:06 PM IST
    • ವಿರಾಟ್ ಕೊಹ್ಲಿಯನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿದ ವಿವಾದ
    • ವಿರಾಟ್ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ
    • 2021ರ T20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಭಾರತದ T20 ನಾಯಕತ್ವವನ್ನು ತೊರೆದರು
Virat Kohliಯನ್ನು ನಾಯಕತ್ವದಿಂದ ಕೆಳಗಿಳಿಸಿದ ವಿವಾದದ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗಂಗೂಲಿ ನೀಡಿದ ಈ ಹೇಳಿಕೆ!
Virat Kohli

Sourav Ganguly Statement on Virat Kohli: ವಿರಾಟ್ ಕೊಹ್ಲಿಯನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿದ ವಿವಾದಕ್ಕೆ ಸಿಲುಕಿರುವ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಇದೀಗ ಟೀಂ ಇಂಡಿಯಾದ ಈ ಸ್ಟಾರ್ ಬ್ಯಾಟ್ಸ್‌ಮನ್ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬಗ್ಗೆ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ನೀಡಿದ ಒಂದು ಹೇಳಿಕೆ ಭಾರಿ ಸುದ್ದಿಯಾಗುತ್ತಿದೆ. 2021ರ T20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಭಾರತದ T20 ನಾಯಕತ್ವವನ್ನು ತೊರೆದರು. ಟಿ20 ನಾಯಕತ್ವವನ್ನು ತ್ಯಜಿಸಿದ ಒಂದು ತಿಂಗಳೊಳಗೆ ಸೌರವ್ ಗಂಗೂಲಿ ನೇತೃತ್ವದ ಬಿಸಿಸಿಐ ಮಂಡಳಿ, ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ತೆಗೆದುಹಾಕಿತು.

ಇದನ್ನೂ ಓದಿ: ಬಾಕ್ಸ್ ಆಫೀಸ್ ನಲ್ಲಿ ಪಠಾಣ್ ತೂಫಾನ್...! ಎರಡನೇ ದಿನದಲ್ಲಿ 200 ಕೋಟಿ ರೂ ಗಳಿಕೆ

ಸೌರವ್ ಗಂಗೂಲಿ ಅವರು ವಿರಾಟ್ ಕೊಹ್ಲಿಯಂತಹ ಅನುಭವಿ ಬ್ಯಾಟ್ಸ್‌ಮನ್‌ಗಳನ್ನು ಏಕದಿನ ನಾಯಕತ್ವದಿಂದ ಹಠಾತ್ತನೆ ತೆಗೆದುಹಾಕಿದ್ದಕ್ಕಾಗಿ ಟೀಕೆಗೆ ಒಳಪಟ್ಟಿದ್ದಾರೆ. ಇದೀಗ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ವಿರಾಟ್ ಕೊಹ್ಲಿ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದಾರೆ. ಭಾರತ ಮುಂದಿನ ತಿಂಗಳು ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಈ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ನಂಬಿದ್ದಾರೆ.

ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ 'ಸ್ಪೋರ್ಟ್ಸ್ ಟಾಕ್" ಜೊತೆ ಮಾತನಾಡಿದ್ದು, “ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ನಲ್ಲಿದ್ದಾರೆ ಆದರೆ ಭಾರತ ತಂಡವು ಅವರ ಮೇಲೆ ಹೆಚ್ಚು ಅವಲಂಬಿತವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಮುಂದಿನ ಸರಣಿಯಿಂದಾಗಿ ಅವರು ಟೆಸ್ಟ್ನಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿದೆ" ಎಂದು ಹೇಳಿದರು.

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಂತ ಅಪಾಯಕಾರಿ ಫಾರ್ಮ್‌ನಲ್ಲಿ ಆಟವಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಎರಡು ಶತಕ ಸಿಡಿಸಿ ‘ಮ್ಯಾನ್ ಆಫ್ ದಿ ಸೀರೀಸ್’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಇದನ್ನೂ ಓದಿ: 2023 ರ ಏಕದಿನ ವಿಶ್ವಕಪ್ ಮುನ್ನ ಟೀಂ ಇಂಡಿಯಾಗೆ ಎದುರಾಗಿದೆ ದೊಡ್ಡ ಸವಾಲು!

ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 74 ಶತಕಗಳನ್ನು ಪೂರೈಸಿದ್ದಾರೆ ಮತ್ತು ಇದೀಗ ವಿರಾಟ್ ಕೊಹ್ಲಿ ವಿಶ್ವದ ಅತಿ ಹೆಚ್ಚು ಅಂತರಾಷ್ಟ್ರೀಯ ಶತಕಗಳನ್ನು ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಆಗಿದ್ದಾರೆ. ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ 100 ಅಂತಾರಾಷ್ಟ್ರೀಯ ಶತಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿದ್ದಾರೆ. 71 ಶತಕಗಳೊಂದಿಗೆ ಆಸ್ಟ್ರೇಲಿಯಾಕ್ಕೆ ಎರಡು ವಿಶ್ವಕಪ್ ಗೆದ್ದ ನಾಯಕ ರಿಕಿ ಪಾಂಟಿಂಗ್ ಮೂರನೇ ಸ್ಥಾನದಲ್ಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

More Stories

Trending News