IND vs AUS: ಏಕದಿನ ಸರಣಿಯಿಂದ ಈ ಬಲಿಷ್ಠ ಆಟಗಾರ ಔಟ್: ಆಘಾತದಲ್ಲಿ ತಂಡ!

IND vs AUS: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಫಿಟ್ನೆಸ್ ಬಗ್ಗೆ ಸ್ಪಷ್ಟವಾಗಿಲ್ಲ. ಶುಕ್ರವಾರ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮೂರು ವಾರಗಳ ವಿಶ್ರಾಂತಿಯ ಹೊರತಾಗಿಯೂ ಅವರು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. 36 ವರ್ಷದ ವಾರ್ನರ್ ಅವರು ಇಂದು ಫಿಟ್ನೆಸ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆಯಿದೆ.

Written by - Bhavishya Shetty | Last Updated : Mar 16, 2023, 07:13 PM IST
    • ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದೆ.
    • ಈ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
    • ಈ ಆಟಗಾರ ತನ್ನ ಸ್ಫೋಟಕ ಬ್ಯಾಟಿಂಗ್‌’ಗೆ ಹೆಸರುವಾಸಿಯಾಗಿದ್ದಾನೆ
IND vs AUS: ಏಕದಿನ ಸರಣಿಯಿಂದ ಈ ಬಲಿಷ್ಠ ಆಟಗಾರ ಔಟ್: ಆಘಾತದಲ್ಲಿ ತಂಡ! title=
david warner

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ಮಾರ್ಚ್ 17 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ದೊಡ್ಡ ಅಪ್‌ಡೇಟ್‌ ಹೊರಬಿದ್ದಿದ್ದು, ಗಾಯದ ಕಾರಣ ಡ್ಯಾಶಿಂಗ್ ಓಪನರ್ ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ. ಈ ಆಟಗಾರ ತನ್ನ ಸ್ಫೋಟಕ ಬ್ಯಾಟಿಂಗ್‌’ಗೆ ಹೆಸರುವಾಸಿಯಾಗಿದ್ದಾನೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ ಈ ರೈಲು ಮಾರ್ಗ ಇಂದಿಗೂ ಬ್ರಿಟಿಷರ ವಶದಲ್ಲಿದೆ…! ಕಾರಣ ಕೇಳಿದ್ರೆ ದಂಗಾಗ್ತೀರ

ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಫಿಟ್ನೆಸ್ ಬಗ್ಗೆ ಸ್ಪಷ್ಟವಾಗಿಲ್ಲ. ಶುಕ್ರವಾರ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮೂರು ವಾರಗಳ ವಿಶ್ರಾಂತಿಯ ಹೊರತಾಗಿಯೂ ಅವರು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. 36 ವರ್ಷದ ವಾರ್ನರ್ ಅವರು ಇಂದು ಫಿಟ್ನೆಸ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆಯಿದೆ.

ಗುರುವಾರ ನಡೆದ ಪಂದ್ಯ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾರ್ಷ್ ಮಾತನಾಡಿದ್ದು, ‘‘ನನಗೆ ತಿಳಿದಂತೆ ಅವರು ಸಂಪೂರ್ಣ ಫಿಟ್ ಆಗುವವರೆಗೆ ಅವರನ್ನು ಕರೆತರಲು ಯಾವುದೇ ಆತುರವಿಲ್ಲ” ಎಂದರು.

ಇದನ್ನೂ ಓದಿ: ಸತತ ಸೋಲಿನ ಬಳಿಕ ಯುಪಿ ವಾರಿಯರ್ಸ್ ವಿರುದ್ಧ ಗೆದ್ದುಬೀಗಿದ RCB: ಪ್ಲೇ ಆಫ್ ಕನಸು ಜೀವಂತ!

ಆಸ್ಟ್ರೇಲಿಯಾ ತಂಡ ಮಾತ್ರವಲ್ಲದೆ ಅವರ ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಕೂಡ ವಾರ್ನರ್ ಸ್ಥಿತಿಯ ಮೇಲೆ ಕಣ್ಣಿಟ್ಟಿದೆ. ಗಾಯಗೊಂಡಿರುವ ರಿಷಬ್ ಪಂತ್ ಬದಲಿಗೆ ವಾರ್ನರ್ ಅವರನ್ನು ತಂಡದ ನಾಯಕರನ್ನಾಗಿ ಡೆಲ್ಲಿ ನೇಮಕ ಮಾಡಿತ್ತು. ಇದೀಗ ವಾರ್ನರ್ ಎಲ್ಲಾ ಮೂರು ಏಕದಿನ ಪಂದ್ಯಗಳನ್ನು ಆಡಿದರೆ ಫ್ರಾಂಚೈಸಿಗೆ ನಿರಾಳವಾಗಲಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News