Tokyo Olympics 2021: ಸ್ಪೇನ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ಹಾಕಿ ತಂಡ

ಭಾರತ ಪುರುಷರ ಹಾಕಿ ತಂಡ ಸ್ಪೇನ್ ವಿರುದ್ಧ 3-0 ಅಂತರದಲ್ಲಿ ಗೆಲುವು ಸಾಧಿಸಿದೆ.

Written by - Puttaraj K Alur | Last Updated : Jul 27, 2021, 10:36 AM IST
  • ಆಸ್ಟ್ರೇಲಿಯಾ ವಿರುದ್ಧದ ಹೀನಾಯ ಸೋಲಿನ ಬಳಿಕ ಮತ್ತೆ ಪುಟಿದೆದ್ದ ಭಾರತ ಹಾಕಿ ತಂಡ
  • ಸ್ಪೇನ್ ವಿರುದ್ಧ 3-0 ಗೋಲುಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ
  • ನಿರ್ಣಾಯಕ ಪಂದ್ಯದಲ್ಲಿ ಮಿಂಚಿದ ಸಿಮ್ರಾಂಜಿತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್
Tokyo Olympics 2021: ಸ್ಪೇನ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ಹಾಕಿ ತಂಡ title=
ಸ್ಪೇನ್ ವಿರುದ್ಧ ಗೆಲುವು ಸಾಧಿಸಿದ ಭಾರತ ಹಾಕಿ ತಂಡ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಹೀನಾಯ ಸೋಲಿನ ಬಳಿಕ ಭಾರತದ ಪುರುಷರ ಹಾಕಿ ತಂಡ ಸ್ಪೇನ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಭಾರತ ಹಾಕಿ ತಂಡ 3-0 ಅಂತರದಿಂದ ಸ್ಪೇನ್ ತಂಡವನ್ನು ಬಗ್ಗುಬಡಿದಿದೆ.

ನಿರ್ಣಾಯಕ ಪಂದ್ಯದಲ್ಲಿ ಸಿಮ್ರಾಂಜಿತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್(Rupinderpal Singh)ಅವರು ಗೋಲು ಗಳಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಜುಲೈ 28ರಂದು ನಡೆಯಲಿರುವ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ ಭಾರತ ಸೆಣಸಾಡಲಿದೆ. ಆಸ್ಟ್ರೇಲಿಯಾ ತಂಡದ ಎದುರು 1-7 ಅಂತರದಿಂದ ಹೀನಾಯ ಸೋಲು ಕಂಡಿದ್ದ ಭಾರತ ತಂಡ ಮತ್ತೊಮ್ಮೆ ಪುಟಿದೆದ್ದಿತ್ತು. ಮನ್‌ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಿ ಗೆಲುವು ತಂದುಕೊಡಲು ನೆರವಾದರು. ಪಂದ್ಯದ 14ನೇ ನಿಮಿಷದಲ್ಲಿ ಸಿಮ್ರಾಂಜಿತ್ ಸಿಂಗ್ ಮೊದಲ ಗೋಲು(Goal) ಗಳಿಸುವ ಮೂಲಕ ಭಾರತ ತಂಡ ಮುನ್ನಡೆ ಸಾಧಿಸುವಂತೆ ಮಾಡಿದರು. ಇದರ ಬೆನ್ನಲ್ಲೇ ರೂಪಿಂದರ್ ಪಾಲ್ ಸಿಂಗ್ ಪೆನಾಲ್ಟಿ ಸ್ಟ್ರೋಕ್(Penalty stroke)ನಲ್ಲಿ 2ನೇ ಗೋಲು ಗಳಿಸುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ: Tokyo Olympics Update:ಸ್ವದೇಶಕ್ಕೆ ಮರಳುತ್ತಿದ್ದಂತೆ ASPಯಾಗಿ ನೇಮಕಗೊಂಡ Silver Girl ಮೀರಾಬಾಯಿ ಚಾನು

ಪಿ.ಆರ್.ಶ್ರೀಜೇಶ್ ಅವರು ಸ್ಪೇನ್ ಆಟಗಾರರ ಪೆನಾಲ್ಟಿ ಕಿಕ್ ಗಳನ್ನು ವಿಫಲಗೊಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು. ಹೀಗಾಗಿ ಪಂದ್ಯದ ಮೊದಲಾರ್ಧದಲ್ಲಿ ಭಾರತ ತಂಡ 2-0 ಗೋಲುಗಳಿಂದ ಮುನ್ನೆಡೆ ಕಾಯ್ದುಕೊಂಡಿತು. ಅತ್ಯುತ್ತಮ ಪ್ರದರ್ಶನದ ಮೂಲಕ ಭಾರತ ತಂಡದ ಆಟಗಾರರು ಸ್ಪೇನ್(Spain) ಆಟಗಾರರ ಮೇಲೆ ಒತ್ತಡ ಹೇರಿದರು. ಹೀಗಾಗಿ ಭಾರತದ ಪ್ರದರ್ಶನದ ಎದುರು ಸ್ಪೇನ್ ಮಂಕಾಯಿತು. ಕೊನೆವರೆಗೂ ಪ್ರಯತ್ನ ನಡೆಸಿದರೂ ಕೂಡ ಸ್ಪೇನ್ ಆಟಗಾರರಿಂದ ಒಂದೇ ಒಂದು ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಪಂದ್ಯದ 51ನೇ ನಿಮಿಷದಲ್ಲಿ ರೂಪಿಂದರ್ ಸಿಂಗ್ ತಮ್ಮ 2ನೇ ಗೋಲು ದಾಖಲಿಸುವ ಮೂಲಕ ಭಾರತ ತಂಡ 3-0 ಗೋಲುಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿತು.  

ಪಂದ್ಯ ಮುಗಿಯಲು ಕೆಲ ನಿಮಿಷಗಳು ಬಾಕಿ ಇರುವಾಗಲೇ ಮೈದಾನದಲ್ಲಿ ಡ್ರಾಮಾ ನಡೆಯಿತು. ಸ್ಪ್ಯಾನಿಷ್ ಗೋಲನ್ನು ರೆಫರಿ ಅನುಮತಿಸದಿದ್ದಾಗ ಸ್ಪೇನ್ ಆಟಗಾರರು ಥರ್ಡ್ ಅಂಪೈರ್ ಗೆ ಮನವಿ ಸಲ್ಲಿಸಿದರು. ಆದರೆ ಗೋಲು ಅಧಿಕೃತವಾಗಿಲ್ಲವೆಂದು ತೀರ್ಪು ಬಂದಿತ್ತು.

ಇದನ್ನೂ ಓದಿ: ಚೀನಾದ ವೇಟ್‌ಲಿಫ್ಟರ್ ಗೆ ಡೋಪಿಂಗ್ ಕಂಟಕ: ಮೀರಾಬಾಯಿ ಚಾನುಗೆ ಚಿನ್ನದ ಪದಕ ಸಾಧ್ಯತೆ..?

‘A’ ಗುಂಪಿನ ಅಂಕಪಟ್ಟಿಯಲ್ಲಿ ಆಡಿರುವ ಎಲ್ಲಾ 3 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ(Australia) ಅಗ್ರಸ್ಥಾನದಲ್ಲಿದೆ. ತಾನಾಡಿರುವ 3 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿರುವ ಭಾರತ ತಂಡ ದ್ವಿತೀಯ ಸ್ಥಾನದಲ್ಲಿದೆ. ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 3-2 ಅಂತರದಿಂದ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿತ್ತು. 2ನೇ ಪಂದ್ಯದಲ್ಲಿ ಆಸೀಸ್ ವಿರುದ್ಧ 1-7 ಗೋಲುಗಳಿಂದ ಹೀನಾಯ ಸೋಲು ಕಂಡಿತ್ತು. ಇದೀಗ 3ನೇ ಪಂದ್ಯದಲ್ಲಿ ಸ್ಪೇನ್ ತಂಡವನ್ನು 3-0 ರಿಂದ ಬಗ್ಗುಬಡಿದಿದ್ದು, ಗ್ರೇಟ್ ಬ್ರಿಟನ್ ವಿರುದ್ಧ ನಡೆಯಲಿರುವ 4ನೇ ಪಂದ್ಯದಲ್ಲೂ ಗೆಲುವು ಸಾಧಿಸುತ್ತಾ ಕಾದು ನೋಡಬೇಕಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News