ನವದೆಹಲಿ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟ(Tokyo Olympics 2020)ದಲ್ಲಿ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಶನಿವಾರ ನಡೆದ ಜಾವೆಲಿನ್ ಥ್ರೋ ಫೈನಲ್ ಪಂದ್ಯದಲ್ಲಿ 87.58 ಮೀಟರ್ ಎಸೆದು ನೀರಜ್ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದರೊಂದಿಗೆ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಪದಕ ಪಡೆದ ಮೊದಲ ಆಟಗಾರ ಎನಿಸಿಕೊಂಡರು. 


Neeraj Chopra) ಭಾರತದ ಚಿನ್ನದ ಬರ ನೀಗಿಸಿದ್ದಾರೆ. ಬಂಗಾರದ ಪದಕ ಗೆಲ್ಲುವ ಮೂಲಕ ನೀರಜ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಫೈನಲ್ ಪಂದ್ಯದ ಆರಂಭದಿಂದಲೂ ಉತ್ತಮ ಪ್ರದರ್ಶನ ತೋರಿದ ನೀರಜ್ ಅಂತಿಮವಾಗಿ ಚಿನ್ನಕ್ಕೆ ಕೊರಳೊಡಿದ್ದರು. ಮೊದಲ ಪ್ರಯತ್ನದಲ್ಲಿ 87.03 ಮೀ., 2ನೇ ಪ್ರಯತ್ನದಲ್ಲಿ 87.58 ಮೀ., ಹಾಗೂ 3ನೇ ಪ್ರಯತ್ನದಲ್ಲಿ 76.79 ಮೀ. ಜಾವೆಲಿನ್ ಎಸೆದರು.  


COMMERCIAL BREAK
SCROLL TO CONTINUE READING

13 ವರ್ಷದ ಬಳಿಕ ಭಾರತಕ್ಕೆ ಚಿನ್ನ


ಭಾರತದ ಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ 100 ಮೀ. ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ(Abhinav Bindra)ಬಂಗಾರದ ಪದಕ ಗೆದಿದ್ದರು. ಆ ಬಳಿಕ ನಡೆದ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಯಾವೊಬ್ಬ ಕ್ರೀಡಾಪಟುಗಳು ಚಿನ್ನಕ್ಕೆ ಮುತ್ತಿಕ್ಕಿರಲಿಲ್ಲ. ಇದೀಗ ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇಡೀ ದೇಶವೇ ನೀರಜ್ ಚೋಪ್ರಾ ಅವರ ಸಾಧನಗೆ ಸಲಾಂ ಎಂದಿದೆ.


ರಾಷ್ಟ್ರಪತಿ, ಪ್ರಧಾನಿ ಮೋದಿ ಅಭಿನಂದನೆ


Javelin Throw)ದಲ್ಲಿ ಬಂಗಾರದ ಪದಕ ಗೆದ್ದು ಇಡೀ ದೇಶಕ್ಕೆ ಹೆಮ್ಮೆ ತಂದ ‘ಚಿನ್ನ’ದಂತಹ ಪುತ್ರನಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ದೇಶಾದ್ಯಂತ ಸಂಭ್ರಮಾಚರಣೆ ನಡೆಸಯುತ್ತಿದ್ದು, ಚಿನ್ನ ಗೆದ್ದ ನೀಜರ್ ಸಾಧನೆಯನ್ನು ಇಡೀ ದೇಶದ ಜನರು ಕೊಂಡಾಡುತ್ತಿದ್ದಾರೆ.


ಟೋಕಿಯೋ ಒಲಿಂಪಿಕ್ಸ್​(Tokyo Olympics 2020)ನಲ್ಲಿ ಭಾರತ ಈವರೆಗೆ ಒಟ್ಟು 7 ಪದಕಗಳನ್ನು ಗೆದ್ದಿದೆ. ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು ಹಾಗೂ ರಸ್ಲಿಂಗ್‌ನಲ್ಲಿ ರವಿಕುಮಾರ್ ಬೆಳ್ಳಿ ಪದಕ ಗೆದ್ದಿದ್ದರೆ, ಮಹಿಳಾ ಬ್ಯಾಡ್ಮಿಂಟನ್‌ನಲ್ಲಿ ಪಿ.ವಿ.ಸಿಂಧು, ಮಹಿಳಾ ಬಾಕ್ಸಿಂಗ್‌ನಲ್ಲಿ ಲವ್ಲಿನಾ ಬೋರ್ಗೊಹೈನ್ ಹಾಗೂ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದುಕೊಂಡಿದೆ. ಪದಕ ಪಟ್ಟಿಯಲ್ಲಿ ಭಾರತ 1 ಚಿನ್ನ, 2 ಬೆಳ್ಳಿ, 4 ಕಂಚಿನ ಪದಕಗಳೊಂದಿಗೆ 47ನೇ ಸ್ಥಾನವನ್ನು ಅಲಂಕರಿಸಿದೆ.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...


Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ