ನವದೆಹಲಿ: ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತ ಪುರುಷರ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ತಾನಾಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಈ ಬಾರಿ ಪದಕದ ಭರವಸೆ ಮೂಡಿಸಿದೆ. ತಂಡದ ಪ್ರತಿಯೊಬ್ಬ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಪದಕ ಗೆಲ್ಲುವ ನಿರೀಕ್ಷೆ ಹೆಚ್ಚಾಗಿದೆ. ಈ ಮಧ್ಯೆ ಪಂಜಾಬ್ ಕ್ರೀಡಾ ಸಚಿವ ರಾಣಾ ಗುರ್ಮೀತ್ ಸೋಧಿ(Rana Gurmeet Sodhi)ಮಹತ್ವದ ಘೋಷಣೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಟೋಕಿಯೊ ಒಲಂಪಿಕ್ಸ್(Tokyo Olympics 2020) ನಲ್ಲಿ ಚಿನ್ನದ ಪದಕ ಗೆದ್ದರೆ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಪಂಜಾಬ್ ಆಟಗಾರರಿಗೆ ತಲಾ 2.25 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಈ ಮೊದಲು ತಂಡದ ಎಲ್ಲಾ ಆಟಗಾರರಿಗೆ 2.25 ಕೋಟಿ ರೂ. ಬಹುಮಾನವನ್ನು ಘೋಷಿಸಲಾಗಿತ್ತು. ಟೀ ಇಂಡಿಯಾವನ್ನು ಪ್ರತಿನಿಧಿಸುತ್ತಿರುವ ಪಂಜಾಬ್ ತಂಡದ 11 ಆಟಗಾರರು ಟೋಕಿಯೊ ಒಲಂಪಿಕ್ಸ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಒಂದು ವೇಳೆ ಚಿನ್ನದ ಪದಕ ಗೆದ್ದರೆ ಈ 11 ಆಟಗಾರರಿಗೆ ತಲಾ 2.25 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಸೋಧಿ ಹೇಳಿದ್ದಾರೆ.


ಇದನ್ನೂ ಓದಿ: Tokyo Olympics 2020: ಅಬ್ಬರದಿಂದ ಸೆಮಿಫೈನಲ್ ಪ್ರವೇಶಿಸಿದ PV Sindhu, ಪದಕದಿಂದ ಒಂದೇ ಗೆಲುವು ದೂರ


ಒಲಂಪಿಕ್ಸ್ ನಲ್ಲಿ 8 ಬಾರಿ ಚಿನ್ನದ ಪದಕ ಗೆದ್ದಿರುವ ಭಾರತ(Hockey India) ಗ್ರೂಪ್ ‘A’ ನಲ್ಲಿ ಆಸ್ಟ್ರೇಲಿಯಾ ಬಳಿಕ 2ನೇ ಸ್ಥಾನದಲ್ಲಿದೆ. ಆಗಸ್ಟ್ 1ರಂದು ಗ್ರೇಟ್ ಬ್ರಿಟನ್ ತಂಡದ ವಿರುದ್ಧ ಕ್ವಾಟರ್ ಫೈನಲ್ ನಲ್ಲಿ ಮುಖಾಮುಖಿಯಾಗಲಿದೆ. ಅದರಂತೆ 2004ರ ಚಾಂಪಿಯನ್ ಆಸ್ಟ್ರೇಲಿಯಾ ತಂಡದ ನೆದರ್ಲ್ಯಾಂಡ್ಸ್ ತಂಡದ ವಿರುದ್ಧ ಸೆಣಸಾಡಲಿದೆ.


ಭಾನುವಾರ ನಡೆಯಲಿರುವ ಪಂದ್ಯಗಳಲ್ಲಿ ಅರ್ಜೆಂಟೀನಾ ತಂಡವು ಜರ್ಮನಿ ವಿರುದ್ಧ ಮತ್ತು ಬೆಲ್ಜಿಯಂ ತಂಡ ಸ್ಪೇನ್ ವಿರುದ್ಧ ಕ್ವಾಟರ್ ಫೈನಲ್ ನಲ್ಲಿ ಮುಖಾಮುಖಿಯಾಗಲಿವೆ. ಶುಕ್ರವಾರ ಭಾರತ ತಂಡವು(Hockey Team india) ಜಪಾನ್ ತಂಡವನ್ನು 5-3 ಗೋಲುಗಳ ಅಂತರದಿಂದ ಬಗ್ಗುಬಡಿಯುವ ಮೂಲಕ ಲೀಗ್ ನ ಕೊನೆಯ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು.  


ಇದನ್ನೂ ಓದಿ: MS Dhoni : ಹೊಸ ಹೇರ್ ಸ್ಟೈಲ್ ನಲ್ಲಿ ಮಿಂಚಿದ ಎಂಎಸ್ ಧೋನಿ : ಈ ಲುಕ್ ಗೆ ಫ್ಯಾನ್ಸ್ ಫುಲ್ ಫಿದಾ!


ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ(Australia)13 ಪಾಯಿಂಟ್ಸ್ ಗಳೊಂದಿಗೆ ಅಗ್ರಸ್ಥಾನದಲ್ಲಿದೆ. 12 ಪಾಯಿಂಟ್ಸ್ ಗಳಿಸಿರುವ ಭಾರತ 2ನೇ ಸ್ಥಾನದಲ್ಲಿದೆ. ಹಾಲಿ ಒಲಂಪಿಕ್ಸ್ ಚಾಂಪಿಯನ್ ಅರ್ಜೆಂಟೀನಾ 3ನೇ ಸ್ಥಾನದಲ್ಲಿದೆ. ನ್ಯೂಜಿಲ್ಯಾಂಡ್ ಮತ್ತು ಜಪಾನ್ ಕ್ರಮವಾಗಿ 5 ಮತ್ತು 6ನೇ ಸ್ಥಾನದಲ್ಲಿವೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರು ಭಾರತ ತಂಡ ಈ ಬಾರಿ ಪದಕ ಗೆಲ್ಲುವುದು ಗ್ಯಾರಂಟಿ ಎಂದು ಹೇಳಲಾಗುತ್ತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ