Tokyo Olympics: ಕೈ ಜಾರಿದ ಕಂಚಿನ ಪದಕ, ಭಾರತೀಯ ಮಹಿಳಾ ಹಾಕಿ ತಂಡದ ಕನಸು ಭಗ್ನ
Tokyo Olympics: ಭಾರತೀಯ ಮಹಿಳಾ ಹಾಕಿ ತಂಡವು ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಅವಕಾಶವನ್ನು ಹೊಂದಿತ್ತು, ಇದೀಗ ಪದಕ ಕೈತಪ್ಪಿದೆ. ಮಹಿಳಾ ತಂಡ ತನ್ನ ಮೂರನೇ ಒಲಿಂಪಿಕ್ಸ್ ಆಡುತ್ತಿದೆ.
ಟೋಕಿಯೊ : ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆಲ್ಲುವ ಭಾರತೀಯ ಮಹಿಳಾ ಹಾಕಿ ತಂಡದ ಕನಸು ಭಗ್ನಗೊಂಡಿದೆ. ಶುಕ್ರವಾರ ನಡೆದ ಕಂಚಿನ ಪದಕದ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ತಂಡವು ಭಾರತೀಯ ಮಹಿಳಾ ಹಾಕಿ ತಂಡವನ್ನು 4-3ರಿಂದ ಸೋಲಿಸಿತು. ಇದರೊಂದಿಗೆ ಭಾರತೀಯ ಮಹಿಳಾ ಹಾಕಿ ತಂಡವು ಇತಿಹಾಸ ಸೃಷ್ಟಿಸುವ ಅವಕಾಶವನ್ನೂ ತಪ್ಪಿಸಿಕೊಂಡಿದೆ. ಭಾರತೀಯ ಮಹಿಳಾ ಹಾಕಿ ತಂಡವು ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಅವಕಾಶವನ್ನು ಹೊಂದಿತ್ತು, ಅದು ಈಗ ಕೈತಪ್ಪಿದೆ.
India women hockey team) ಇತಿಹಾಸದಲ್ಲಿ ಮೊದಲ ಬಾರಿಗೆ ಒಲಿಂಪಿಕ್ ಪದಕ ಗೆಲ್ಲುವುದನ್ನು ತಪ್ಪಿಸಿಕೊಂಡಿದೆ. ಆದಾಗ್ಯೂ, ಮೊದಲ ಬಾರಿಗೆ ಒಲಿಂಪಿಕ್ಸ್‌ನ ಸೆಮಿಫೈನಲ್ ತಲುಪುವ ಮೂಲಕ, ಭಾರತೀಯ ಮಹಿಳಾ ತಂಡ ಇತಿಹಾಸವನ್ನು ಸೃಷ್ಟಿಸಿತು.
ಇದನ್ನೂ ಓದಿ- ಒಲಿಂಪಿಕ್ ನಲ್ಲಿ ಪದಕ ಗೆದ್ದ ಹಾಕಿ ತಂಡದ ಆಟಗಾರರಿಗೆ ಬಹುಮಾನಗಳ ಸುರಿ ಮಳೆ, ಪ್ರತಿ ಆಟಗಾರನಿಗೂ ನಗದು ಘೋಷಣೆ
ಮಹಿಳಾ ಹಾಕಿಯಲ್ಲಿ ಗ್ರೇಟ್ ಬ್ರಿಟನ್ (Great Britain) ವಿರುದ್ಧ ಭಾರತ 3-4 ರಿಂದ ಕಂಚಿನ ಪದಕ ಸೋತಿದೆ. ಆದರೆ ಮೊದಲ ಬಾರಿಗೆ ಕ್ರೀಡಾಕೂಟದ ಸೆಮಿಫೈನಲ್ ಪ್ರವೇಶಿಸುವ ಮೂಲಕ ಎಲ್ಲರ ನಿರೀಕ್ಷೆಗಳನ್ನು ಮೀರಿಸಿದೆ. ಜೊತೆಗೆ 2016 ರ ರಿಯೋ ಕ್ರೀಡಾಕೂಟದಲ್ಲಿ ಚಿನ್ನದ ವಿಜೇತರಾಗಿದ್ದ ವಿಶ್ವ ನಂ. 4 ಗ್ರೇಟ್ ಬ್ರಿಟನ್ ವಿರುದ್ಧ ಭಾರತ ತಂಡದ ಅದ್ಭುತ ಪ್ರಯತ್ನದ ಬಗ್ಗೆ ಹೆಮ್ಮೆಯೂ ಇದೆ.
ಇದನ್ನೂ ಓದಿ- Tokyo Olympics 2020 : ಬೆಳ್ಳಿಗೆ ಮುತ್ತಿಟ್ಟ ಕುಸ್ತಿಪಟು ರವಿ ದಹಿಯಾ
ಒಲಿಂಪಿಕ್ಸ್‌ನಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನವೆಂದರೆ 1980 ರ ಮಾಸ್ಕೋ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ. ಆ ಆವೃತ್ತಿಯಲ್ಲಿ, ಯಾವುದೇ ಸೆಮಿಫೈನಲ್ ಇರಲಿಲ್ಲ ಏಕೆಂದರೆ ಕೇವಲ ಆರು ತಂಡಗಳು ರೌಂಡ್-ರಾಬಿನ್ ಮಾದರಿಯಲ್ಲಿ ಪೈಪೋಟಿ ನಡೆಸಿದವು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ