Sarfaraz Khan in Indian Squad : ಸುದೀರ್ಘ ನಿರೀಕ್ಷೆ ಮತ್ತು ಕಠಿಣ ಪರಿಶ್ರಮದ ನಂತರ, ಕೊನೆಗೂ ಸರ್ಫರಾಜ್ ಖಾನ್ ಗೆ ಟೀಂ ಇಂಡಿಯಾದಿಂದ ಬುಲಾವ್ ಬಂದಿದೆ.   ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡನೇ ಟೆಸ್ಟ್‌ ನಲ್ಲಿ ಸರ್ಫರಾಜ್ ಖಾನ್ ಟೀಂ ಇಂಡಿಯಾದ ಭಾಗವಾಗಿರಲಿದ್ದಾರೆ.  


COMMERCIAL BREAK
SCROLL TO CONTINUE READING

ಜಡೇಜಾ ಮತ್ತು ರಾಹುಲ್ ಔಟ್ :
ಫೆಬ್ರವರಿ 2ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದಿಂದ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ ನಾಲ್ಕನೇ ದಿನದ ಆಟದಲ್ಲಿ ಜಡೇಜಾ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದಾರೆ. ಆದರೆ ರಾಹುಲ್ ತಮ್ಮ ಬಲ ಭುಜದ ನೋವಿನಿಂದ ಬಳಲುತ್ತಿದ್ದಾರೆ. ಇವರಿಬ್ಬರ ಆರೋಗ್ಯದ ಮೇಲೆ ಬಿಸಿಸಿಐ ವೈದ್ಯಕೀಯ ತಂಡ ನಿಗಾವಹಿಸಿದೆ. 


ಇದನ್ನೂ ಓದಿ :  ICC punishes Bumrah: ಜಸ್ಪ್ರೀತ್ ಬುಮ್ರಾ ವಿರುದ್ಧ ಐಸಿಸಿ ಕಠಿಣ ಕ್ರಮ..!


ತಂಡಕ್ಕೆ ಸೇರ್ಪಡೆಗೊಂಡ ಸರ್ಫರಾಜ್ ಮತ್ತು ಸೌರಭ್ : 
ಬಿಸಿಸಿಐನ ಸಿನಿಯರ್ ಪುರುಷರ ಆಯ್ಕೆ ಸಮಿತಿಯು ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಭಾರತ ತಂಡದಲ್ಲಿ ಸೇರಿಸಿದೆ. ಫೆಬ್ರವರಿ 1, 2024 ರಂದು ಅಹಮದಾಬಾದ್‌ನಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೂರನೇ ಮತ್ತು ಅಂತಿಮ ಮಲ್ಟಿ ಡೇ ಗೇಮ್ ಗಾಗಿ  ಭಾರತ ಎ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಬದಲಿಗೆ ಸರನ್ಶ್ ಜೈನ್ ಅವರನ್ನು ಸೇರಿಸಲಾಗಿದೆ. ಅವೇಶ್ ಖಾನ್ ತಮ್ಮ ರಣಜಿ ಟ್ರೋಫಿಗಾಗಿ  ಮಧ್ಯಪ್ರದೇಶ ತಂಡವನ್ನು ಪ್ರತಿನಿಧಿಸುತ್ತಿದ್ದು, ಅಗತ್ಯವಿದ್ದರೆ ಟೆಸ್ಟ್ ತಂಡವನ್ನು ಸೇರಿಕೊಳ್ಳುತ್ತಾರೆ.


ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್‌ಗೆ ಅಪ್ಡೇಟೆಡ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (WK), ಧ್ರುವ್ ಜುರೆಲ್ (wk), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್ ಮತ್ತು ಸೌರಭ್ ಕುಮಾರ್.


ಇದನ್ನೂ ಓದಿ :  ಮಾಲ್‌ನಲ್ಲಿ ‘ಸೆಕ್ಯೂರಿಟಿ ಗಾರ್ಡ್’ ಆಗಿದ್ದವ ಗಬ್ಬಾದಲ್ಲಿ ವಿಂಡೀಸ್‌ಗೆ ಟೆಸ್ಟ್ ಪಂದ್ಯ ಗೆಲ್ಲಿಸಿದ!


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.