IND vs WI, 1st T20: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ T20 ಅಂತರರಾಷ್ಟ್ರೀಯ ಸರಣಿಯ ಮೊದಲ ಪಂದ್ಯವು ಇಂದು ರಾತ್ರಿ 8 ರಿಂದ ಪೋರ್ಟ್ ಆಫ್ ಸ್ಪೇನ್ (ಟ್ರಿನಿಡಾಡ್) ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ, ಭಾರತದ ಇಬ್ಬರು ವೇಗದ ಬೌಲರ್‌ ಗಳು ವಿಧ್ವಂಸಕತೆ ಸೃಷ್ಟಿಸುವ ಸಾಧ್ಯತೆ ಇದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 21ರ ಹರೆಯದ ಈ ಕ್ರಿಕೆಟಿಗನಿಗೆ Team Indiaದಲ್ಲಿ ಸಿಗುತ್ತಿಲ್ಲ ಸ್ಥಾನ!


ವೆಸ್ಟ್ ಇಂಡೀಸ್ ವಿರುದ್ಧದ ಮೊದಲ T20 ಅಂತಾರಾಷ್ಟ್ರೀಯ ಪಂದ್ಯದಲ್ಲಿ, ಈ ಇಬ್ಬರು ವೇಗದ ಬೌಲರ್‌ ಗಳು ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅವರ ಬತ್ತಳಿಕೆಯಲ್ಲಿರುವ ಮಾರಕ ಅಸ್ತ್ರಗಳು ಎಂದರೆ ತಪ್ಪಾಗಲ್ಲ. ಇಬ್ಬರು ಕೂಡ ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತೆಯೇ ಸಖತ್ ಬೌಲಿಂಗ್ ಮಾಡುವ ಪರಿಣಿತರು.


ಟೀಂ ಇಂಡಿಯಾದ ವೇಗದ ಬೌಲರ್‌ ಗಳಾದ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಮತ್ತು ಅರ್ಶ್‌ದೀಪ್ ಸಿಂಗ್‌’ಗೆ ಅವಕಾಶ ಸಿಗಬಹುದು.


ಉಮ್ರಾನ್ ಮಲಿಕ್ ಸ್ಥಿರವಾಗಿ 150 kmph ವೇಗದಲ್ಲಿ ಬೌಲಿಂಗ್ ಮಾಡುವುದರಲ್ಲಿ ಪರಿಣತಿ ಹೊಂದಿದ್ದಾರೆ. ಐಪಿಎಲ್‌ ನಲ್ಲಿ ಉಮ್ರಾನ್ ಮಲಿಕ್ 157 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದರು, ಇನ್ನು ಬೌಲರ್ ಅರ್ಷದೀಪ್ ಸಿಂಗ್ ಮಾರಕ ಯಾರ್ಕರ್‌ಗಳನ್ನು ಹೊಡೆಯುವುದರಲ್ಲಿ ಪರಿಣತಿ ಹೊಂದಿದ್ದಾರೆ. ಅರ್ಷದೀಪ್ ಸಿಂಗ್ ಪಂಜಾಬ್ ಕಿಂಗ್ಸ್‌ ಪರವಾಗಿ ಐಪಿಎಲ್ ಆಡಿದ್ದಾರೆ. 2023ರ ಋತುವಿನಲ್ಲಿ ಅರ್ಷದೀಪ್ ಎಸೆದ ಬಾಲ್’ಗೆ ಎರಡು ಸ್ಟಂಪ್’ಗಳು ಪುಡಿಪುಡಿಯಾಗಿದ್ದವು. ಅರ್ಷದೀಪ್ ಸಿಂಗ್ ಅವರು 'ವೈಡ್ ಯಾರ್ಕರ್' ಮತ್ತು 'ಬ್ಲಾಕ್-ಹೋಲ್'ಗಳಲ್ಲಿ ಪರ್ಯಾಯವಾಗಿ ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ.


ಮೊದಲ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:


ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್ ಮತ್ತು ಮುಖೇಶ್ ಕುಮಾರ್.


ಭಾರತದ ಟಿ20 ಅಂತರಾಷ್ಟ್ರೀಯ ತಂಡ ಇಂತಿದೆ:


ಇಶಾನ್ ಕಿಶನ್ (WK), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (WK), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್ ಉಮ್ರಾನ್ ಮಲಿಕ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್


ಭಾರತ vs ವೆಸ್ಟ್ ಇಂಡೀಸ್ ಟಿ20 ಸರಣಿ ನಡೆಯುವ ಸ್ಥಳ:


1ನೇ ಟಿ20 ಪಂದ್ಯ, ಆಗಸ್ಟ್ 3, ರಾತ್ರಿ 8.00, ಟ್ರಿನಿಡಾಡ್


2ನೇ ಟಿ20 ಪಂದ್ಯ, ಆಗಸ್ಟ್ 6, ರಾತ್ರಿ 8.00, ಗಯಾನಾ


3ನೇ ಟಿ20 ಪಂದ್ಯ, ಆಗಸ್ಟ್ 8, ರಾತ್ರಿ 8.00, ಗಯಾನಾ


4ನೇ ಟಿ20 ಪಂದ್ಯ, ಆಗಸ್ಟ್ 12, ರಾತ್ರಿ 8.00, ಫ್ಲೋರಿಡಾ


ಐದನೇ ಟಿ20 ಪಂದ್ಯ, ಆಗಸ್ಟ್ 13, ರಾತ್ರಿ 8.00, ಫ್ಲೋರಿಡಾ


ಇದನ್ನೂ ಓದಿ: Watch ಬಾನೆತ್ತರಕ್ಕೆ ಗರಿಬಿಚ್ಚಿ ಹಾರಿದ ನವಿಲು: ಪಕ್ಷಿಲೋಕದ ಅಪರೂಪದ ವಿಡಿಯೋ ನೋಡಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ