ಯುವಿ-ಮಾಹಿಯಂತೆ ಟೀಂ ಇಂಡಿಯಾಗೆ ಲಭಿಸಿತು ಇನ್ನೊಂದು ಮಾರಕ ಜೋಡಿ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇಬ್ಬರೂ ಆಟಗಾರರು ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ದೊಡ್ಡ ಬೆನ್ನೆಲುಬಾಗಿದ್ದರು. ಇಂಗ್ಲೆಂಡ್ ವಿರುದ್ಧ ರಿಷಬ್ ಪಂತ್ ಬಿರುಸಿನ ಶತಕ ಸಿಡಿಸಿದ್ದು, ಹಾರ್ದಿಕ್‌ ಮತ್ತು ಪಂದ್ಯ ಜೊತೆಯಾಗಿ125 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ. 

Written by - Bhavishya Shetty | Last Updated : Jul 18, 2022, 10:59 AM IST
  • ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಗೆದ್ದ ಭಾರತ
  • ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್ ಆದ ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್
  • ಇಬ್ಬರು ಯುವ ಆಟಗಾರರು ತಮ್ಮ ಆಟದಿಂದ ಎಲ್ಲರ ಮನ ಗೆದ್ದಿದ್ದಾರೆ
ಯುವಿ-ಮಾಹಿಯಂತೆ ಟೀಂ ಇಂಡಿಯಾಗೆ ಲಭಿಸಿತು ಇನ್ನೊಂದು ಮಾರಕ ಜೋಡಿ! title=
Rohit Sharma

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಅಬ್ಬರದ ಶೈಲಿಯಲ್ಲಿ ಏಕದಿನ ಸರಣಿಯನ್ನು ಗೆದ್ದಿದೆ. ಇನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಇಬ್ಬರು ಆಟಗಾರರು ಉತ್ತಮ ಆಟ ಪ್ರದರ್ಶಿಸಿದ್ದಾರೆ. ಈ ಆಟಗಾರರು ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಆದರೆ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಅನುಭವಿ ಆಟಗಾರರು ಕಳಪೆ ಪ್ರದರ್ಶನ ನೀಡುತ್ತಿದ್ದರೆ, ಇನ್ನೊಂದೆಡೆ ಇಬ್ಬರು ಯುವ ಆಟಗಾರರು ತಮ್ಮ ಆಟದಿಂದ ಎಲ್ಲರ ಮನ ಗೆದ್ದಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ಬಿಜೆಪಿ ನಾಯಕಿ ಸುಲ್ತಾನಾ ಖಾನ್ ಮಾರಕಾಸ್ತ್ರಗಳಿಂದ ಹಲ್ಲೆ: ಇಲ್ಲಿದೆ ವಿಡಿಯೋ

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇಬ್ಬರೂ ಆಟಗಾರರು ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ದೊಡ್ಡ ಬೆನ್ನೆಲುಬಾಗಿದ್ದರು. ಇಂಗ್ಲೆಂಡ್ ವಿರುದ್ಧ ರಿಷಬ್ ಪಂತ್ ಬಿರುಸಿನ ಶತಕ ಸಿಡಿಸಿದ್ದು, ಹಾರ್ದಿಕ್‌ ಮತ್ತು ಪಂದ್ಯ ಜೊತೆಯಾಗಿ125 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ. ಹಾರ್ದಿಕ್ ಪಾಂಡ್ಯ 71 ರನ್ ಕೊಡುಗೆ ನೀಡಿದ್ದಾರೆ. ಭಾರತ ತಂಡ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಈ ಇಬ್ಬರೂ ಆಟಗಾರರು ಉತ್ತಮ ಇನ್ನಿಂಗ್ಸ್‌ ಆಡಿದ್ದಾರೆ. ಈ ಇಬ್ಬರೂ ಆಟಗಾರರ ಆಗಮನ ಭಾರತದ ಮಧ್ಯಮ ಕ್ರಮಾಂಕವನ್ನು ಬಲಗೊಳಿಸಿದೆ.

ಟೀಂ ಇಂಡಿಯಾ ಗೆಲುವಿನಲ್ಲಿ ಅಗ್ರ ಕ್ರಮಾಂಕದ ಆಟಗಾರರು ಪ್ರಮುಖ ಪಾತ್ರ ವಹಿಸುತ್ತಿದ್ದ ಕಾಲವೊಂದಿತ್ತು. ಇದು ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಆರಂಭಿಕ ಜೋಡಿಯನ್ನು ಹೊಂದಿತ್ತು. ಈ ಜೋಡಿ ವಿಫಲವಾದರೆ ಮೂರನೇ ಕ್ರಮಾಂಕದಲ್ಲಿದ್ದ ಆಟಗಾರರು ತಂಡವನ್ನು ಮುನ್ನಡೆಸುತ್ತಿದ್ದರು. ಆ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಸಹ ಸೇರಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬ್ಯಾಟಿಂಗ್‌ನ ಕೇಂದ್ರವು ಮಧ್ಯಮ ಕ್ರಮಾಂಕದಲ್ಲಿದೆ. ಕಳೆದ ಒಂದು ವರ್ಷದಲ್ಲಿ ರಿಷಬ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಜೊತೆಯಾಗಿ ಟೀಂ ಇಂಡಿಯಾಗೆ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಈ ಇಬ್ಬರೂ ಆಟಗಾರರು ಕೆಲವೇ ಎಸೆತಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಕಲೆಯನ್ನು ಹೊಂದಿದ್ದಾರೆ.

ಯುವರಾಜ್-ಧೋನಿಯಂತಹ ಜೋಡಿ: 
ಒಂದು ಕಾಲದಲ್ಲಿ ಮಧ್ಯಮ ಕ್ರಮಾಂಕದ ಬೆನ್ನೆಲುಬಾಗಿದ್ದವರು ದಿಗ್ಗಜ ಮಹೇಂದ್ರ ಸಿಂಗ್ ಧೋನಿ ಮತ್ತು ಯುವರಾಜ್ ಸಿಂಗ್. ಆದರೆ ಇವರಿಬ್ಬರ ನಿವೃತ್ತಿಯ ನಂತರ ಟೀಂ ಇಂಡಿಯಾಕ್ಕೆ ಅವರ ಸ್ಥಾನ ತುಂಬಲು ಸಾಧ್ಯವಾಗಿರಲಿಲ್ಲ. ಆದರೆ ಈಗ ತಂಡದಲ್ಲಿ ಹಾರ್ದಿಕ್ ಇದ್ದು, ಸದೃಢ ಬ್ಯಾಟ್ಸ್‌ಮನ್  ಜೊತೆಗೆ ಬೌಲರ್‌ ಸಹ ಹೌದು. ಇವರಿಗೆ ಉತ್ತಮ ಜೋಡಿಯಾಗಿ ರಿಷಬ್‌ ಪಂತ್ ಆಡುತ್ತಾರೆ. ರಿಷಬ್ ಪಂತ್ ಮಹೇಂದ್ರ ಸಿಂಗ್ ಧೋನಿ ಶೈಲಿಯಲ್ಲಿ ನಿಖರವಾಗಿ ಬ್ಯಾಟ್ ಮಾಡುತ್ತಾರೆ. ಹಾರ್ದಿಕ್ ಪಾಂಡ್ಯ ಯುವಿಯಂತೆ ದೀರ್ಘ ಸಿಕ್ಸರ್‌ಗಳನ್ನು ಬಾರಿಸುವುದರಲ್ಲಿಯೂ ಪ್ರಸಿದ್ಧರಾಗಿದ್ದಾರೆ.

ಇದನ್ನೂ ಓದಿ: 39 ವರ್ಷಗಳ ಬಳಿಕ ಇಂಗ್ಲೆಂಡ್‌ನ ಈ ಮೈದಾನದಲ್ಲಿ ಗೆದ್ದುಬೀಗಿದ ಟೀಂ ಇಂಡಿಯಾ: ಸಂಭ್ರಮದ ಫೋಟೋ ಇಲ್ಲಿವೆ

ರಿಷಬ್ ಪಂತ್ ಪ್ರಸ್ತುತ ಭಾರತದ ನಂಬರ್ ಒನ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್. ಪಂತ್ ಜುಲೈ 1, 2021 ರಿಂದ 36 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 1,287 ರನ್ ಗಳಿಸಿದ್ದಾರೆ. ಇವುಗಳಲ್ಲಿ ಮೂರು ಶತಕಗಳು ಸೇರಿವೆ. ಇನ್ನು ಹಾರ್ದಿಕ್ ಪಾಂಡ್ಯ ಬಹಳ ಸಮಯದ ನಂತರ ಟೀಮ್ ಇಂಡಿಯಾಕ್ಕೆ ಮರಳಿದ್ದು, ಅದ್ಭುತ ಕಂಬ್ಯಾಕ್‌ ಮಾಡಿದ್ದಾರೆ. ಇನ್ನು ಕಳೆದ ಒಂದು ವರ್ಷದಲ್ಲಿ ಪಾಂಡ್ಯ 21 ಪಂದ್ಯಗಳಲ್ಲಿ 415 ರನ್ ಬಾರಿಸಿದ್ದಾರೆ. ಅಲ್ಲದೆ 15 ವಿಕೆಟ್ ಪಡೆದಿದ್ದಾರೆ. ಐಪಿಎಲ್‌ನಲ್ಲೂ ಹಾರ್ದಿಕ್-ಪಂತ್ ನಾಯಕತ್ವದ ಗುಜರಾತ್‌ ಟೈಟಾನ್ಸ್‌ ಗೆಲುವು ಸಾಧಿಸಿತ್ತು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News