ನವದೆಹಲಿ: ಕೆರಿಬಿಯನ್ ದ್ಯತ್ಯ, ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್(Chris Gayle) ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಟಿ-20 ಕ್ರಿಕೆಟ್ ಇತಿಹಾಸಲ್ಲಿಯೇ ಯಾರೂ ಮಾಡಿರದ ವಿಶೇಷ ದಾಖಲೆಯನ್ನು ಮಾಡುವ ಮೂಲಕ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಹೌದು, ಕ್ರಿಸ್ ಗೇಲ್ ಬ್ಯಾಟಿಂಗ್ ಮಾಡಲು ನಿಂತರೆ ಸಾಕು ಎದುರಾಳಿಗಳಲ್ಲಿ ನಡುಕವುಂಟಾಗುತ್ತದೆ. ಸಿಕ್ಸರ್ ಮೇಲೆ ಸಿಕ್ಸರ್ ಭಾರಿಸುವ ಗೇಲ್ ಸ್ಫೋಟಕ ಆಟಕ್ಕೆ ಹೆಸರುವಾಸಿಯಾಗಿದ್ದಾರೆ. ಇದೀಗ ಟಿ-20 ಇತಿಹಾಸದಲ್ಲಿ 14 ಸಾವಿರ ರನ್ ಭಾರಿಸಿದ  ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ-20 ಪಂದ್ಯದಲ್ಲಿ ಈ ವಿಶೇಷ ಮೈಲುಗಲ್ಲು ಸ್ಥಾಪಿಸಿದ್ದಾರೆ. ಗೇಲ್ ಅವರ ಸ್ಫೋಟಕ ಆಟದ ನೆರವಿನಿಂದ ವೆಸ್ಟ್ ಇಂಡೀಸ್(West Indies) 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 5 ಪಂದ್ಯಗಳ ಸರಣಿಯನ್ನು ಇನ್ನೂ 2 ಪಂದ್ಯಗಳು ಬಾಕಿ ಇರುವಂತೆಯೇ ಕೈವಶಮಾಡಿಕೊಂಡಿದೆ.


ಇದನ್ನೂ ಓದಿ: Prithvi Shaw: ಇಂಟ್ರಾ ಸ್ಕ್ವಾಡ್ ಪಂದ್ಯದಲ್ಲಿ ಪೃಥ್ವಿಯ ಅಬ್ಬರಕ್ಕೆ ಹುಬ್ಬೆರಿಸಿದ ಹಿರಿಯ ಬೌಲರ್‌ಗಳು


‘ನಾನು ಬ್ಯಾಟ್ ಮೂಲಕ ರನ್ ಗಳಿಸಲು ತುಂಬಾ ಕಷ್ಟಪಟ್ಟಿದ್ದು ನಿಮಗೆಲ್ಲರಿಗೂ ಗೊತ್ತೇ ಇದೆ. ನಾನು ಯಾವಾಗಲೂ ಹೆಚ್ಚು ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಡಲು ಶ್ರಮಿಸುತ್ತೇನೆ’ ಎಂದು ಗೇಲ್ ಪಂದ್ಯದ ಬಳಿಕ ಹೇಳಿದ್ದಾರೆ. ಗಮನಿಸಬೇಕಾದ ಅಂಶವೆಂದರೆ 2016ರ ಬಳಿಕ ಗೇಲ್ ಆಸ್ಟ್ರೇಲಿಯಾ(Australia) ವಿರುದ್ಧದ ಟಿ-20 ಪಂದ್ಯದಲ್ಲಿ ಭಾರಿಸಿದ ಮೊದಲ ಅರ್ಧಶತಕ ಇದಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 141 ರನ್ ಗಳಿಸಿತ್ತು. ಗೆಲುವಿನ ಗುರಿ ಬೆನ್ನತ್ತಿದ್ದ ವೆಸ್ಟ್ ಇಂಡೀಸ್ ಗೇಲ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಕೇವಲ 14.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.


ಇದನ್ನೂ ಓದಿ: Wimbledon 2021:ನೊವಾಕ್ ಜೊಕೊವಿಕ್ ಗೆ ಆರನೇ ಬಾರಿಗೆ ವಿಂಬಲ್ಡನ್ ಚಾಂಪಿಯನ್ ಕೀರಿಟ


41 ವರ್ಷದ ವಿಂಡೀಸ್ ದೈತ್ಯ ಕೇವಲ 38 ಎಸೆತಗಳಲ್ಲಿ 7 ಸಿಕ್ಸರ್, 4 ಬೌಂಡರಿ ಇದ್ದ 67 ರನ್ ಗಳನ್ನು ಚಚ್ಚುವ ಮೂಲಕ ಆಸೀಸ್ ಬೌಲರ್ ಗಳಿಗೆ ಬೆವರಿಳಿಸಿದರು. ಗೇಲ್ ತಮ್ಮ ಸ್ಫೋಟಕ ಹೊಡೆತಗಳಿಂದ ಕ್ರೀಡಾಂಗಣದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ಮನರಂಜಿಸಿದರು. ಟಿ-20 ಕ್ರಿಕೆಟ್(T20 Cricket)ಇತಿಹಾಸದಲ್ಲಿ 14 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಆಟಗಾರನೆಂಬ ಹೊಸ ದಾಖಲೆ ಬರೆದ ಕ್ರಿಸ್ ಗೇಲ್ ಅವರಿಗೆ ಪ್ರಶಂಸೆಗಳ ಶುರುಮಳೆಯೇ ಹರಿದುಬಂದಿದೆ.


‘ಇದೊಂದು ಅದ್ಭುತ ಜರ್ನಿಯಾಗಿತ್ತು. ಆಸ್ಟ್ರೇಲಿಯಾ(Australia) ವಿರುದ್ಧ ಟಿ-20 ಸರಣಿ  ಗೆಲುವು ಸಾಧಿಸಿದ್ದಕ್ಕೆ ನನಗೆ ಖುಷಿಯಾಗಿದೆ. ಆಸೀಸ್ ನಂತಹ ತಂಡದ ವಿರುದ್ಧ ನಿಕೋಲಸ್ ಪೂರನ್ ನಾಯಕತ್ವದಲ್ಲಿ ಸರಣಿ ಗೆಲ್ಲುವುದು ನಮ್ಮ ಗುರಿಯಾಗಿತ್ತು ಎಂದು ಹೇಳಿದ್ದಾರೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಒಂದು ಹಂತದಲ್ಲಿ 80 ರನ್ ಗಳಿಗೆ 4 ಪ್ರಮುಖ ವಿಕೆಟ್ ಕಳೆದಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ವಿಂಡೀಸ್ ಎದುರು ರನ್ ಗಳಿಸಲು ಆಸೀಸ್ ಬ್ಯಾಟ್ಸ್ ಮನ್ ಗಳು ತಿಣುಕಾಡಿದರು.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.