vaibhav suryavanshi century in ipl : ವೈಭವ್ ಸೂರ್ಯವಂಶಿ ಬಾಸ್ ಬೇಬಿ ಆಟಕ್ಕೆ ಇಡೀ ಕ್ರಿಕೆಟ್ ಲೋಕವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. 14 ವರ್ಷದ ವೈಭವ್ ಸೂರ್ಯವಂಶಿ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಇದುವರೆಗೆ ಸಂಭವಿಸದ ಸಾಧನೆ ಮಾಡಿದ್ದಾರೆ.
ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ವೈಭವ್ ಪವರ್ ಹಿಟ್ಟಿಂಗ್ ನೋಡಿದರೆ ಕ್ರಿಸ್ ಗೇಲ್ ಅವರ ದಾಖಲೆ ಕೂಡ ಮುರಿಯುತ್ತದೆ ಎಂಬಂತೆ ತೋರುತ್ತಿತ್ತು. ಆದರೆ ಕೂದಲೆಳೆ ಅಂತರದಲ್ಲಿ ಮಿಸ್ ಆಗಿದೆ. ಸೆಕೆಂಡ್ ಫಾಸ್ಟೆಸ್ಟ್ ಸೆಂಚೂರಿಯನ್ನು ದಾಖಲೆ ಮಾಡುವ ಮೂಲಕ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದ್ದಾರೆ.
ವೈಭವ್ ಸೂರ್ಯವಂಶಿ ಅವರನ್ನು ಎಷ್ಟೇ ಹೊಗಳಿದರೂ ಕಡಿಮೆಯೇ ಆಗುತ್ತದೆ. ಟಿ20 ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದನ್ನೂ ಓದಿ : IPL 2025: ಐಪಿಎಲ್‌ನಲ್ಲಿ ಅಂಪೈರ್‌ಗಳ ಸಂಬಳ ಎಷ್ಟಿರುತ್ತೆ ಗೊತ್ತಾ? ಒಂದೊಂದು ಮ್ಯಾಚ್‌ಗೂ ಸಿಗುವ ಸಂಬಳ...
ವೈಭವ್ ಸೂರ್ಯವಂಶಿ ತಮ್ಮ ಇನ್ನಿಂಗ್ಸ್‌ನಲ್ಲಿ 11 ಸಿಕ್ಸರ್‌ಗಳು ಮತ್ತು 7 ಬೌಂಡರಿಗಳನ್ನು ಬಾರಿಸಿದರು. ಅವರು 38 ಎಸೆತಗಳಲ್ಲಿ 101 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ವೈಭವ್ ತಮ್ಮ ಚೊಚ್ಚಲ ಪ್ರವೇಶವನ್ನು ದಾಖಲೆಯೊಂದಿಗೆ ಆರಂಭಿಸಿದ್ದರು. ಅವರು ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದರು.
ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದ ಯೂಸುಫ್ ಪಠಾಣ್ ಅವರನ್ನು ಹಿಂದಿಕ್ಕಿದರು.
ಇದನ್ನೂ ಓದಿ : IPL 2025: ಕೊಹ್ಲಿಗೆ ಆರೆಂಜ್ ಕ್ಯಾಪ್, ಹೇಝಲ್‌ವುಡ್ ಗೆ ಪರ್ಪಲ್ ಕ್ಯಾಪ್, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದ ಆರ್ಸಿಬಿ
ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕ ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಆಗಿದ್ದಾರೆ. 1 ನೇ ಸ್ಥಾನದಲ್ಲಿ ಕ್ರಿಸ್ ಗೇಲ್ ಇದ್ದಾರೆ. ಅವರು 30 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ದಾಖಲೆಯನ್ನು ಸೃಷ್ಟಿಸಿದ್ದಾರೆ.
ವೈಭವ್ ಇನ್ನಿಂಗ್ಸ್ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2010 ರಲ್ಲಿ ರಾಜಸ್ಥಾನ ವಿರುದ್ಧ ಸಿಎಸ್‌ಕೆ ಪರ 56 ಎಸೆತಗಳಲ್ಲಿ 127 ರನ್ ಗಳಿಸಿದ್ದ ಮುರಳಿ ವಿಜಯ್ ಅವರ ದಾಖಲೆಯನ್ನು ವೈಭವ್ ಸರಿಗಟ್ಟಿದರು. ಇದರಲ್ಲಿ ಅವರು 11 ಸಿಕ್ಸರ್‌ಗಳು ಮತ್ತು 8 ಬೌಂಡರಿಗಳನ್ನು ಬಾರಿಸಿದ್ದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









