India vs West Indies, 1st Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಜುಲೈ 12 ರ ಬುಧವಾರ ಸಂಜೆ 7:30 ರಿಂದ ಡೊಮಿನಿಕಾದಲ್ಲಿ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಈ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರ ಆಡುವುದಿಲ್ಲ ಎಂಬ ಮಾತು ಇದೀಗ ಕೇಳಿ ಬರುತ್ತಿದೆ. ಇದರಿಂದಾಗಿ ಅವರ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಭಾರತದ ಈ ಸ್ಟಾರ್ ಕ್ರಿಕೆಟಿಗನ ಅಭಿಮಾನಿಗಳಿಗೆ ಇದ್ದಕ್ಕಿದ್ದಂತೆ ನಿರಾಸೆಯಾಗುತ್ತದೆ.
ಇದನ್ನೂ ಓದಿ: ಕೊಹ್ಲಿ, ರೋಹಿತ್ ಅಲ್ಲವೇ ಅಲ್ಲ… ತೆಂಡೂಲ್ಕರ್ ಶತಕಗಳ ದಾಖಲೆಯನ್ನು ಮುರಿಯಬಲ್ಲ ಧಮ್ ಇರೋದು ಈ ಕ್ರಿಕೆಟಿಗನಿಗೆ!
ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಚೈನಾಮನ್ ಬೌಲರ್ ಕುಲದೀಪ್ ಯಾದವ್ ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಅವಕಾಶ ನೀಡಲಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕುಲದೀಪ್ ಯಾದವ್ ಅವರ ಮಾರಕ ಸ್ಪಿನ್ ಬೌಲಿಂಗ್ ಅನ್ನು ಟೀಂ ಇಂಡಿಯಾ ಕಳೆದುಕೊಳ್ಳಲಿದೆ. ಕುಲದೀಪ್ ಯಾದವ್ ಅಭಿಮಾನಿಗಳಿಗೆ ದೊಡ್ಡ ನಿರಾಸೆಯ ಸುದ್ದಿ ಎಂದರೆ ಈ ಅನುಭವಿ ಇಡೀ ಟೆಸ್ಟ್ ಸರಣಿಯಲ್ಲಿ ಆಡುವುದಿಲ್ಲ.
ಕುಲದೀಪ್ ಯಾದವ್ ಕಳೆದ 6 ವರ್ಷಗಳಿಂದ ಭಾರತಕ್ಕಾಗಿ ಕೇವಲ 8 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಟೀಂ ಇಂಡಿಯಾ ಪರ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಕುಲದೀಪ್ ಯಾದವ್ ಭಾರತ ತಂಡದಲ್ಲಿ ಸಂಪೂರ್ಣವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಆಗುತ್ತಿಲ್ಲ.
ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಜೊತೆಗೆ ಎಡಗೈ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ಗಳಾದ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರಿಗೆ ಅವಕಾಶ ನೀಡಲಾಗಿದೆ. ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಮಾರಕ ಸ್ಪಿನ್ ಬೌಲಿಂಗ್ ಜೊತೆಗೆ ಅತ್ಯುತ್ತಮ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿದ್ದಾರೆ. ಈ ವಿಚಾರದಲ್ಲಿ ಕುಲದೀಪ್ ಯಾದವ್ ಸ್ವಲ್ಪ ಹಿಂದೆ ಬಿದ್ದಿದ್ದಾರೆ. ಹೀಗಾಗಿ ಯಾದವ್ ಅವರಿಗೆ ಈ ಇಡೀ ಟೆಸ್ಟ್ ಸರಣಿಯಲ್ಲಿ ಅವಕಾಶ ಸಿಕ್ಕಿಲ್ಲ.
ಕುಲದೀಪ್ ಯಾದವ್ ಇದುವರೆಗೆ ಭಾರತ ಪರ 8 ಟೆಸ್ಟ್ ಪಂದ್ಯಗಳಲ್ಲಿ 34 ವಿಕೆಟ್ ಪಡೆದಿದ್ದು, ಇನ್ನಿಂಗ್ಸ್‌ನಲ್ಲಿ 3 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇಂತಹ ಉತ್ತಮ ದಾಖಲೆಯ ಹೊರತಾಗಿಯೂ, ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ ಕಾರಣದಿಂದಾಗಿ ಕುಲದೀಪ್ ಯಾದವ್ ಟೆಸ್ಟ್ ತಂಡದಿಂದ ಹೊರಗುಳಿಯಬೇಕಾಗಿದೆ.
ಇದನ್ನೂ ಓದಿ: ಏಷ್ಯಾಕಪ್’ಗೂ ಮುನ್ನ ಅಂತರಾಷ್ಟ್ರೀಯ ಕ್ರಿಕೆಟ್’ಗೆ ದಿಢೀರ್ ನಿವೃತ್ತಿ ಘೋಷಿಸಿದ ಇಬ್ಬರು ಸ್ಟಾರ್ ಕ್ರಿಕೆಟಿಗರು!
ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಟೀಂ ಇಂಡಿಯಾ ಪರ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದು, ಬಾಲ್ ಹಾಗೂ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾವನ್ನು ಬಲಿಷ್ಠಗೊಳಿಸಲಿದ್ದಾರೆ. ಡೊಮಿನಿಕಾ ಪಿಚ್ ಸ್ಪಿನ್ನರ್ ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡುತ್ತದೆ, ಆದ್ದರಿಂದ ನಾಯಕ ರೋಹಿತ್ ಶರ್ಮಾ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಇಬ್ಬರನ್ನೂ ಪ್ಲೇಯಿಂಗ್ XI ನಲ್ಲಿ ಸೇರಿಸಿಕೊಳ್ಳು ಅವಕಾಶವಿದೆ. ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಬಾಲ್ ಹಾಗೂ ಬ್ಯಾಟ್ ಮೂಲಕ ಟೀಂ ಇಂಡಿಯಾವನ್ನು ಬಲಿಷ್ಠಗೊಳಿಸಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ