IND vs ENG: ವಿಶೇಷ ದಾಖಲೆಯ ಹೊಸ್ತಿಲಲ್ಲಿ ಅಶ್ವಿನ್…! ಈ ಸಾಧನೆ ಮಾಡಿದರೆ ಅನಿಲ್ ಕುಂಬ್ಳೆ ರೆಕಾರ್ಡ್ ಬ್ರೇಕ್ ಖಚಿತ
R Ashwin Test Wickets: ಜನವರಿ 25ರ ಗುರುವಾರದಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ರವಿಚಂದ್ರನ್ ಅಶ್ವಿನ್ ಈ ದಾಖಲೆಯ ಮೇಲೆ ಕಣ್ಣಿಟ್ಟಿದ್ದಾರೆ. ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ಶ್ರೇಷ್ಠ ದಾಖಲೆ ಮಾಡಲು ಕೇವಲ 10 ವಿಕೆಟ್’ಗಳ ಅಂತರದಲ್ಲಿದ್ದಾರೆ.
R Ashwin Test Wickets: ಭಾರತ ತಂಡದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್’ನಲ್ಲಿ ದೊಡ್ಡ ದಾಖಲೆ ಮಾಡುವ ಹೊಸ್ತಿಲಲ್ಲಿ ನಿಂತಿದ್ದಾರೆ. ಇದುವರೆಗೆ ಭಾರತದ ಶ್ರೇಷ್ಠ ಸ್ಪಿನ್ನರ್ ಅನಿಲ್ ಕುಂಬ್ಳೆ ಹೆಸರಿನಲ್ಲಿ ಮಾತ್ರ ದಾಖಲಾಗಿರುವ ಈ ಶ್ರೇಷ್ಠ ದಾಖಲೆಯನ್ನು ರವಿಚಂದ್ರನ್ ಅಶ್ವಿನ್ ಸರಿಗಟ್ಟುವ ಸನಿಹದಲ್ಲಿದ್ದಾರೆ.
ಇದನ್ನೂ ಓದಿ: Horoscope: ಇಂದು ಪವಿತ್ರ ಶುಕ್ಲ ಯೋಗ: ಈ ರಾಶಿಗೆ ಲಕ್ಷ್ಮೀಕೃಪೆಯಿಂದ ಕೈತುಂಬಾ ದುಡ್ಡು ಸಿಗಲಿದೆ!
ಜನವರಿ 25ರ ಗುರುವಾರದಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ರವಿಚಂದ್ರನ್ ಅಶ್ವಿನ್ ಈ ದಾಖಲೆಯ ಮೇಲೆ ಕಣ್ಣಿಟ್ಟಿದ್ದಾರೆ. ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ಶ್ರೇಷ್ಠ ದಾಖಲೆ ಮಾಡಲು ಕೇವಲ 10 ವಿಕೆಟ್’ಗಳ ಅಂತರದಲ್ಲಿದ್ದಾರೆ.
37 ವರ್ಷದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತಮ್ಮ 500 ಟೆಸ್ಟ್ ವಿಕೆಟ್’ಗಳನ್ನು ಪೂರೈಸಲಿದ್ದಾರೆ. ಅಶ್ವಿನ್ ಇದುವರೆಗೆ ಟೆಸ್ಟ್ ಕ್ರಿಕೆಟ್’ನಲ್ಲಿ ಭಾರತದ ಪರ 95 ಟೆಸ್ಟ್ ಪಂದ್ಯಗಳಲ್ಲಿ 490 ವಿಕೆಟ್’ಗಳನ್ನು ಪಡೆದಿದ್ದಾರೆ. ಇನ್ನೂ 10 ವಿಕೆಟ್ ಪಡೆದರೆ, ಟೆಸ್ಟ್ ಕ್ರಿಕೆಟ್’ನಲ್ಲಿ 500 ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಆಗಲಿದ್ದಾರೆ. ಇಲ್ಲಿಯವರೆಗೆ ಭಾರತದ ಪರ ಈ ದೊಡ್ಡ ಮೈಲಿಗಲ್ಲು ಸಾಧಿಸಲು ಅನಿಲ್ ಕುಂಬ್ಳೆಗೆ ಮಾತ್ರ ಸಾಧ್ಯವಾಗಿದೆ.
ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್’ನಲ್ಲಿ 619 ವಿಕೆಟ್ ಪಡೆದಿದ್ದಾರೆ. ರವಿಚಂದ್ರನ್ ಅಶ್ವಿನ್ 95 ಟೆಸ್ಟ್ ಪಂದ್ಯಗಳಲ್ಲಿ 490 ವಿಕೆಟ್ ಪಡೆದಿದ್ದಾರೆ. ಅಶ್ವಿನ್ ಟೆಸ್ಟ್ ಪಂದ್ಯಗಳಲ್ಲಿ 34 ಬಾರಿ ಇನ್ನಿಂಗ್ಸ್’ನಲ್ಲಿ 5 ವಿಕೆಟ್ ಪಡೆದಿದ್ದಾರೆ. ಇದಲ್ಲದೆ 8 ಬಾರಿ ಟೆಸ್ಟ್ ಪಂದ್ಯಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. ಭಾರತವು ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳನ್ನು ಆಡಬೇಕಿದ್ದು, ಅಶ್ವಿನ್ ಈ ದಾಖಲೆ ಮಾಡಲು ಗರಿಷ್ಠ ಎರಡು ಪಂದ್ಯಗಳ ಅಗತ್ಯವಿದೆ.
ಟೆಸ್ಟ್ ಕ್ರಿಕೆಟ್’ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್
1. ಮುತ್ತಯ್ಯ ಮುರಳೀಧರನ್ (ಶ್ರೀಲಂಕಾ) - 800 ಟೆಸ್ಟ್ ವಿಕೆಟ್‌ಗಳು
2. ಶೇನ್ ವಾರ್ನ್ (ಆಸ್ಟ್ರೇಲಿಯಾ) - 708 ಟೆಸ್ಟ್ ವಿಕೆಟ್
3. ಜೇಮ್ಸ್ ಆಂಡರ್ಸನ್ (ಇಂಗ್ಲೆಂಡ್) - 690 ಟೆಸ್ಟ್ ವಿಕೆಟ್
4. ಅನಿಲ್ ಕುಂಬ್ಳೆ (ಭಾರತ) - 619 ಟೆಸ್ಟ್ ವಿಕೆಟ್‌ಗಳು
5. ಸ್ಟುವರ್ಟ್ ಬ್ರಾಡ್ (ಇಂಗ್ಲೆಂಡ್) - 604 ಟೆಸ್ಟ್ ವಿಕೆಟ್
6. ಗ್ಲೆನ್ ಮೆಕ್‌ಗ್ರಾತ್ (ಆಸ್ಟ್ರೇಲಿಯಾ) - 563 ಟೆಸ್ಟ್ ವಿಕೆಟ್‌ಗಳು
7. ಕರ್ಟ್ನಿ ವಾಲ್ಷ್ (ವೆಸ್ಟ್ ಇಂಡೀಸ್) - 519 ಟೆಸ್ಟ್ ವಿಕೆಟ್
8. ನಾಥನ್ ಲಿಯಾನ್ (ಆಸ್ಟ್ರೇಲಿಯಾ) - 512 ಟೆಸ್ಟ್ ವಿಕೆಟ್
9. ರವಿಚಂದ್ರನ್ ಅಶ್ವಿನ್ (ಭಾರತ) - 490 ಟೆಸ್ಟ್ ವಿಕೆಟ್
10. ಡೇಲ್ ಸ್ಟೇಯ್ನ್ (ದಕ್ಷಿಣ ಆಫ್ರಿಕಾ) - 439 ಟೆಸ್ಟ್ ವಿಕೆಟ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ