ಚೆನ್ನೈ ವಿರುದ್ಧ ಗೆಲುವು: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ; ಮೂವರು RCB ಅಭಿಮಾನಿಗಳ ಬಂಧನ!!

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ 2 ರನ್‌ಗಳ ರೋಚಕ ಗೆಲುವು ಸಾಧಿಸಿತ್ತು. ಇದರ ನಂತರ ಅಭಿಮಾನಿಗಳ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್‌ ವೈರಲ್ ಆಗಿತ್ತು. ಇದನ್ನ ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Written by - Puttaraj K Alur | Last Updated : May 6, 2025, 05:58 PM IST
  • ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿಗೆ 2 ರನ್‌ಗಳ ರೋಚಕ ಗೆಲುವು
  • ಚಿತ್ರದುರ್ಗದಲ್ಲಿ ಮೇಲೆ ಬಲಿ ನೀಡಿ ಸಂಭ್ರಮಿಸಿದ ಆರ್‌ಸಿಬಿ ಅಭಿಮಾನಿಗಳು
  • ಮೂವರು ಆರ್‌ಸಿಬಿ ಅಭಿಮಾನಿಗಳನ್ನ ಬಂಧಿಸಿದ ಮೊಳಕಾಲ್ಮೂರು ಪೊಲೀಸರು
ಚೆನ್ನೈ ವಿರುದ್ಧ ಗೆಲುವು: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ; ಮೂವರು RCB ಅಭಿಮಾನಿಗಳ ಬಂಧನ!!

RCB vs CSK: ಮೇ 3ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 2 ರನ್‌ಗಳ ರೋಚಕ ಗೆಲುವು ಸಾಧಿಸಿತ್ತು. ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಿದ ಸಂಭ್ರಮದಲ್ಲಿದ್ದ ಆರ್‌ಸಿಬಿ ಅಭಿಮಾನಿಗಳು ವಿರಾಟ್‌ ಕೊಹ್ಲಿ ಕಟೌಟ್‌ ಮುಂದೆ ಮೇಕೆ ಬಲಿ ನೀಡಿದ್ದರು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಿಯಮ್ಮನಹಳ್ಳಿ ಈ ಘಟನೆ ನಡೆದಿತ್ತು. ಮೇಕೆ ಬಲಿ ನೀಡಿದ ಆರೋಪದ ಮೇರೆಗೆ ಆರ್‌ಸಿಬಿಯ ಮೂವರು ಅಭಿಮಾನಿಗಳನ್ನು ಪೊಲೀಸರು ಬಂಧಿಸಿದ್ದಾರೆ.  

Add Zee News as a Preferred Source

ಬಂಧಿತರನ್ನು ಸಣ್ಣ ಪಾಲಯ್ಯ (22), ಜಯಣ್ಣ (23) ಮತ್ತು ತಿಪ್ಪೆಸ್ವಾಮಿ (28) ಎಂದು ಗುರುತಿಸಲಾಗಿದೆ. ಈ ಮೂವರು ಮರಿಯಮ್ಮನಹಳ್ಳಿ ನಿವಾಸಿಗಳಾಗಿದ್ದಾರೆ. ಚೆನ್ನೈ ವಿರುದ್ಧ ಆರ್‌ಸಿಬಿ ರೋಚಕ ಗೆಲುವು ಸಾಧಿಸಿದ ಬಳಿಕ ಅಭಿಮಾನಿಗಳ ಸಂಭ್ರಮಾಚರಣೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿತ್ತು. ಇದನ್ನ ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. 

ಇದನ್ನೂ ಓದಿ: ಭಾರತದ ಪ್ರಖ್ಯಾತ ಗಾಯಕನನ್ನು ಇನ್‌ಸ್ಟಾದಲ್ಲಿ ಬ್ಲಾಕ್ ಮಾಡಿದ ವಿರಾಟ್ ಕೊಹ್ಲಿ! ಯಾರವ?

ವೈರಲ್‌ ಆಗಿರೋ 20 ಸೆಕೆಂಡುಗಳ ವಿಡಿಯೋದಲ್ಲಿ ಒಬ್ಬ ಯುವಕ ಕೊಹ್ಲಿಯ ಕಟೌಟ್‌ನ ಮುಂದೆ ಮೇಕೆಯನ್ನ ಹಿಡಿದಿರುತ್ತಾನೆ. ಮತ್ತೋರ್ವ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಜಯ ಸಾಧಿಸಿದೆ ಎಂದು ಕೂಗುತ್ತಿದ್ದಂತೆ, ಮೇಕೆಯನ್ನು ಮಚ್ಚಿನಿಂದ ಕಡಿದು, ಅದರ ರಕ್ತವನ್ನು ಕೊಹ್ಲಿಯ ಕಟೌಟ್ ಮತ್ತು ಪೋಸ್ಟರ್‌ಗೆ ಅರ್ಪಣೆ ಮಾಡಲಾಗುತ್ತದೆ. ಮೂರನೇ ವ್ಯಕ್ತಿ ಮೇಕೆಯನ್ನು ಹಗ್ಗದಿಂದ ಹಿಡಿದಿಟ್ಟುಕೊಂಡಿರುವುದನ್ನು ಕಾಣಬಹುದು.

'call-me-143-kalki' ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿರುವ ಈ ವಿಡಿಯೋ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಮೊಳಕಾಲ್ಮೂರು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ಮೂವರು ಆರ್‌ಸಿಬಿ ಅಭಿಮಾನಿಗಳನ್ನ ಬಂಧಿಸಿದ್ದಾರೆ.  

ಇದನ್ನೂ ಓದಿ: "ಒಂದು ವೇಳೆ ಅನುಷ್ಕಾ ನನ್ನ ಜೀವನದಲ್ಲಿ ಇಲ್ಲದೇ ಹೋಗಿದ್ದರೆ, ನಾನು.." ವಿರಾಟ್‌ ಕೊಹ್ಲಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News