WACಯಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ 88.17 ಮೀಟರ್ ದೂರ ಜಾವೆಲಿನ್ ಎಸೆದ ವಿಡಿಯೋ

Neeraj Chopra javelin throw Video: ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌’ನಲ್ಲಿರುವ ರಾಷ್ಟ್ರೀಯ ಅಥ್ಲೆಟಿಕ್ಸ್ ಸೆಂಟರ್‌’ನಲ್ಲಿ ನಡೆದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ 88.17 ಮೀಟರ್‌ ದೂರ ಎಸೆದು ಜಾವೆಲಿನ್ ಚಿನ್ನದ ಪದಕ ಗೆದ್ದಿದ್ದಾರೆ.

Written by - Bhavishya Shetty | Last Updated : Aug 28, 2023, 11:27 AM IST
    • ರಾಷ್ಟ್ರೀಯ ಅಥ್ಲೆಟಿಕ್ಸ್ ಸೆಂಟರ್‌’ನಲ್ಲಿ ನಡೆದ ಜಾವೆಲಿನ್ ಥ್ರೋ ಸ್ಪರ್ಧೆ
    • ನೀರಜ್ 88.17 ಮೀಟರ್‌ ದೂರ ಎಸೆದು ಜಾವೆಲಿನ್ ಚಿನ್ನದ ಪದಕ ಗೆದ್ದಿದ್ದಾರೆ.
    • ನೀರಜ್ ಎರಡನೇ ಸುತ್ತಿನಲ್ಲಿಯೇ 88.17 ಮೀಟರ್‌ ದೂರ ಎಸೆದಿದ್ದರು.
WACಯಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ 88.17 ಮೀಟರ್ ದೂರ ಜಾವೆಲಿನ್ ಎಸೆದ ವಿಡಿಯೋ  title=
Neeraj Chopra Javelin Throw Video

Neeraj Chopra javelin throw Video: ಒಲಿಂಪಿಕ್ಸ್ ಮತ್ತು ಡೈಮಂಡ್ ಲೀಗ್‌’ನಲ್ಲಿ ಚಿನ್ನ ಗೆದ್ದಿದ್ದ ಗೋಲ್ಡನ್ ಬಾಯ್ ನೀರಜ್ ಚೋಪ್ರಾ ಇದೀಗ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌’ಶಿಪ್ 2023 ರಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬೀಚ್’ನಲ್ಲಿ ಯುಜ್ವೇಂದ್ರ ಚಾಹಲ್ ಪತ್ನಿಯ ಬಿಕಿನಿ ಹಾಟ್ ಫೋಟೋಶೂಟ್!

ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌’ನಲ್ಲಿರುವ ರಾಷ್ಟ್ರೀಯ ಅಥ್ಲೆಟಿಕ್ಸ್ ಸೆಂಟರ್‌’ನಲ್ಲಿ ನಡೆದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ 88.17 ಮೀಟರ್‌ ದೂರ ಎಸೆದು ಜಾವೆಲಿನ್ ಚಿನ್ನದ ಪದಕ ಗೆದ್ದಿದ್ದಾರೆ.

ಫೈನಲ್‌’ನಲ್ಲಿ ಒಟ್ಟು ಆರು ಪ್ರಯತ್ನಗಳಿತ್ತು. ನೀರಜ್ ಎರಡನೇ ಸುತ್ತಿನಲ್ಲಿಯೇ 88.17 ಮೀಟರ್‌ ದೂರ ಎಸೆದಿದ್ದರು. ಆ ಬಳಿಕ ಅಂಕಪಟ್ಟಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಅವರು ಕೊನೆಯವರೆಗೂ ಈ ಮುನ್ನಡೆ ಕಾಯ್ದುಕೊಂಡರು. ನೀರಜ್ ಅವರ ಆರು ಪ್ರಯತ್ನಗಳಲ್ಲಿ ಫೌಲ್, 88.17ಮೀ, 86.32ಮೀ, 84.64ಮೀ, 87.73ಮೀ ಮತ್ತು 83.98ಮೀ ಆಗಿತ್ತು. ಮತ್ತೊಂದೆಡೆ, ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್ ಎಸೆದು ಬೆಳ್ಳಿ ಪದಕ ಗೆದ್ದರು. ಮೂರನೇ ಸ್ಥಾನ ಅಂದರೆ ಕಂಚಿನ ಪದಕವನ್ನು ಜೆಕ್ ಗಣರಾಜ್ಯದ ಜಾಕುಬ್ ವೆಡ್ಲೆಚ್ 86.67 ಮೀ ಎಸೆದು ಗೆದ್ದಿದ್ದಾರೆ.

ನೀರಜ್ ಜೊತೆಗೆ ಭಾರತದ ಇತರ ಇಬ್ಬರು ಆಟಗಾರರಾದ ಡಿಪಿ ಮನು ಮತ್ತು ಕಿಶೋರ್ ಜೆನಾ ಕೂಡ ಫೈನಲ್‌’ನಲ್ಲಿದ್ದರು. ಕಿಶೋರ್ 84.77 ಮೀಟರ್ ಎಸೆದು ಐದನೇ ಸ್ಥಾನ ಪಡೆದರೆ, ಡಿಪಿ ಮನು 84.14 ಮೀಟರ್ ಎಸೆದು ಆರನೇ ಸ್ಥಾನ ಪಡೆದರು. ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ನೀರಜ್ ಮೊದಲ ಪ್ರಯತ್ನದಲ್ಲಿ 88.77 ಮೀಟರ್‌ ದೂರ ಎಸೆದು ಫೈನಲ್‌ ಪ್ರವೇಶಿಸಿದ್ದರು. ಈ ಸಾಧನೆಯೊಂದಿಗೆ ಮುಂದಿನ ವರ್ಷ ಪ್ಯಾರಿಸ್‌’ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌’ಗೆ ಅರ್ಹತೆ ಗಳಿಸಿದ್ದಾರೆ.

ಇದನ್ನೂ ಓದಿ: Yo-Yo Testನಲ್ಲಿ ಫೇಲ್: ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಆಯ್ಕೆಯಾಗಿದ್ದ 5 ಆಟಗಾರರು ಔಟ್!

25 ವರ್ಷದ ಭಾರತದ ಸ್ಟಾರ್ ಅಥ್ಲೀಟ್ ಟೋಕಿಯೊ ಒಲಿಂಪಿಕ್ಸ್‌’ನಲ್ಲಿ ಚಿನ್ನದ ಪದಕ ಗೆದ್ದಿದ್ದರು. 2018 ರಲ್ಲಿ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌’ನಲ್ಲಿ ಚಿನ್ನದ ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಕಳೆದ ವರ್ಷ ಡೈಮಂಡ್ ಲೀಗ್ ಕೂಡ ಗೆದ್ದಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News