Rohit Sharma Video: ಡಗೌಟ್‌ನಲ್ಲಿ ಸಿರಾಜ್ ಜೊತೆ ರೋಹಿತ್ ದೃಶ್ಯ; ವಿಡಿಯೋ ವೈರಲ್

Rohit Sharma Video: ಜೈಪುರದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದ ವೇಳೆ ನಡೆದಿರುವ ದೃಶ್ಯವೊಂದು ಇದೀಗ ಪ್ರೇಕ್ಷಕರ ಗಮನ ಸೆಳೆದಿದೆ. ಪ್ರೇಕ್ಷಕರ ಗಮನ ಸೆಳೆದಿದೆ. T20 ನಾಯಕನಾಗಿ ತನ್ನ ಮೊದಲ ಪಂದ್ಯದಲ್ಲಿ, ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ನ್ಯೂಜಿಲೆಂಡ್ ವಿರುದ್ಧ ಅದ್ಭುತ ಗೆಲುವಿನತ್ತ ಮುನ್ನಡೆಸಿದರು.   

Written by - Yashaswini V | Last Updated : Nov 18, 2021, 08:38 AM IST
  • ಸಿರಾಜ್‌ಗೆ ಹೊಡೆದ ರೋಹಿತ್
  • ರೋಚಕ ದೃಶ್ಯ ಕ್ಯಾಮರಾದಲ್ಲಿ ಸೆರೆ
  • ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ
Rohit Sharma Video: ಡಗೌಟ್‌ನಲ್ಲಿ ಸಿರಾಜ್ ಜೊತೆ ರೋಹಿತ್ ದೃಶ್ಯ; ವಿಡಿಯೋ ವೈರಲ್ title=
Rohit siraj viral video

ಜೈಪುರ: ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಟಿ20 ನಾಯಕನಾಗಿ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಜಯ ಸಾಧಿಸಿದೆ. ಬುಧವಾರ ಜೈಪುರದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದ  ವೇಳೆ ನಡೆದಿರುವ ದೃಶ್ಯವೊಂದು ಇದೀಗ ಪ್ರೇಕ್ಷಕರ ಗಮನ ಸೆಳೆದಿದೆ. ಪ್ರೇಕ್ಷಕರ ಗಮನ ಸೆಳೆದಿದೆ. ಭಾರತದ ಬ್ಯಾಟಿಂಗ್ ಸಮಯದಲ್ಲಿ, ಟೀಮ್ ಇಂಡಿಯಾದ ಡಗೌಟ್‌ನಲ್ಲಿ, ನಾಯಕ ರೋಹಿತ್ ಶರ್ಮಾ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ಎಂದು ಮಾಡಿದರು? ಅವರ ಈ ವಿಡಿಯೋ ಟ್ವಿಟರ್‌ನಲ್ಲಿ ತೀವ್ರವಾಗಿ ವೈರಲ್ ಆಗುತ್ತಿದೆ. 

ಸಿರಾಜ್‌ಗೆ  ಹೊಡೆದ ರೋಹಿತ್!
ವಾಸ್ತವವಾಗಿ, ಪಂದ್ಯದ ಸಮಯದಲ್ಲಿ, ರೋಹಿತ್ ಶರ್ಮಾ (Rohit Sharma) ಡಗೌಟ್‌ನಲ್ಲಿ ಕುಳಿತಿದ್ದ ವೇಗದ ಬೌಲರ್ ಮೊಹಮ್ಮದ್ ಸಿರಾಜ್‌ಗೆ ಹಿಂದಿನಿಂದ ಹೊಡೆದಿದ್ದಾರೆ. ಆದರೆ ತುಂಬಾ ಗಂಭೀರವಾಗಿ ಏನಲ್ಲ ಮೋಜಿನ ರೀತಿಯಲ್ಲಿ ರೋಹಿತ್ ಶರ್ಮಾ ಮೊಹಮ್ಮದ್ ಸಿರಾಜ್‌ಗೆ ಹೊಡೆದಿದ್ದಾರೆ. ಈ ವಿಡಿಯೋವನ್ನು ನೋಡಿದ ಅಭಿಮಾನಿಗಳು ಕೂಡ ಖುಷಿಪಡುತ್ತಿದ್ದಾರೆ.  ಟೀಂ ಇಂಡಿಯಾ ಗೆಲುವಿನತ್ತ ದಾಪುಗಾಲು ಹಾಕುತ್ತಿರುವಾಗ ರೋಹಿತ್ ಸಿರಾಜ್ ಜೊತೆ ಮೋಜು ಮಸ್ತಿ ಮಾಡುತ್ತಿದ್ದ ದೃಶ್ಯವನ್ನು ಕ್ಯಾಮರಾಮನ್ ಸೆರೆ ಹಿಡಿದಿದ್ದಾರೆ. ಹಿಟ್‌ಮ್ಯಾನ್ ಸಿರಾಜ್‌ಗೆ ಹಿಂದಿನಿಂದ ಮೋಜಿನ ರೀತಿಯಲ್ಲಿ ತಲೆಯ ಮೇಲೆ ಕುಟುಕಿರುವ ದೃಶ್ಯ ಇದರಲ್ಲಿ ಸೆರೆಯಾಗಿದೆ.

ಇದನ್ನೂ ಓದಿ- India vs New Zealand: ಅಬ್ಬರಿಸಿದ ಸೂರ್ಯಕುಮಾರ್ ಯಾದವ್,ರೋಹಿತ್ ಶರ್ಮಾ, ಭಾರತಕ್ಕೆ 5 ವಿಕೆಟ್ ಗಳ ಗೆಲುವು

ಮೊದಲ ಪಂದ್ಯವನ್ನು ಗೆದ್ದು ಬೀಗಿದ ಭಾರತ:
ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಭಾರತಕ್ಕೆ 165 ರನ್ ಗಳ ಗುರಿ ನೀಡಿತ್ತು, ಇದಕ್ಕೆ ಉತ್ತರವಾಗಿ ಭಾರತ 2 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಭಾರತದ ಗೆಲುವಿನ ಹೀರೋಗಳಾದ ಸೂರ್ಯಕುಮಾರ್ ಯಾದವ್ ಮತ್ತು ರೋಹಿತ್ ಶರ್ಮಾ ಕ್ರಮವಾಗಿ 62 ಮತ್ತು 48 ರನ್ ಗಳಿಸಿದರು. ಸೂರ್ಯಕುಮಾರ್ ತಮ್ಮ 40 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಹೊಡೆದರೆ, ರೋಹಿತ್ 36 ಎಸೆತಗಳನ್ನು ಎದುರಿಸಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದರು, ಆದರೆ ಅರ್ಧಶತಕ ಬಾರಿಸುವುದರಿಂದ ಕೇವಲ 2 ರನ್‌ಗಳಿಂದ ವಂಚಿತರಾದರು. ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) 1 ವಿಕೆಟ್ ಪಡೆದರು.

ಇದನ್ನೂ ಓದಿ- 2025 ICC Champions Trophy: ಪಾಕ್ ನಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ ಭಾಗಿಯಾಗುತ್ತಾ ಟೀಮ್ ಇಂಡಿಯಾ..?

ಕೆಎಲ್ ರಾಹುಲ್ 15 ರನ್ ಗಳಿಸಿ ಔಟಾದರೆ, ಟಿ20 ವಿಶ್ವಕಪ್‌ನಿಂದ ಹೊರಗುಳಿದ ಬಳಿಕ ತಂಡಕ್ಕೆ ಮರಳಿದ ಶ್ರೇಯಸ್ ಅಯ್ಯರ್ 5 ರನ್ ಗಳಿಸುವಷ್ಟರಲ್ಲಿ ಆರಾಮವಾಗಿ ಕಾಣದೆ ವಿಕೆಟ್ ಕಳೆದುಕೊಂಡರು. ಮೊದಲ ಅಂತರಾಷ್ಟ್ರೀಯ ಪಂದ್ಯವನ್ನು ಆಡುತ್ತಿರುವ ವೆಂಕಟೇಶ್ ಅಯ್ಯರ್ ಅವರು ಡೆರಿಲ್ ಮಿಚೆಲ್ ಅವರನ್ನು ಬೌಂಡರಿ ಬಾರಿಸಿದರು, ಆದರೆ ಮುಂದಿನ ಎಸೆತದಲ್ಲಿ ರಿವರ್ಸ್ ಸ್ವೀಪ್ ಆಡುವ ಪ್ರಯತ್ನದಲ್ಲಿ ರವೀಂದ್ರ ರಚಿನ್ ಅವರಿಗೆ ಕ್ಯಾಚ್ ನೀಡಿದರು. ಆದರೆ, ಇದಾದ ಬಳಿಕ ರಿಷಭ್ ಪಂತ್ ಗೆಲುವಿನ ರನ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟರು. ಇದಕ್ಕೂ ಮುನ್ನ ಮಾರ್ಟಿನ್ ಗಪ್ಟಿಲ್ ಮತ್ತು ಮಾರ್ಕ್ ಚಾಪ್ಮನ್ ಅವರ ಅರ್ಧಶತಕಗಳ ನೆರವಿನಿಂದ ನ್ಯೂಜಿಲೆಂಡ್ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತ್ತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News