Asia Cup Final IND vs SL: ಏಷ್ಯಾಕಪ್ 2023ರ ಅಂತಿಮ ಪಂದ್ಯವು ಸೆಪ್ಟೆಂಬರ್ 17 ಅಂದರೆ ಇಂದು ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಒಂದೆಡೆ, ಶ್ರೀಲಂಕಾ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ, ಭಾರತವು ವಿಶ್ವಕಪ್’ಗೆ ಮುನ್ನ ದೊಡ್ಡ ಪಂದ್ಯಾವಳಿಯನ್ನು ಗೆದ್ದು ಇತಿಹಾಸ ಬರೆಯಲು ಕಾಯುತ್ತಿದೆ.
ಇನ್ನು ಈ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಟೀಂ ಇಂಡಿಯಾದ ಇಬ್ಬರು ಆಟಗಾರರಿಗೆ ತುಂಬಾ ವಿಶೇಷವಾಗಲಿದೆ. ಈ ಇಬ್ಬರು ಆಟಗಾರರು 13 ವರ್ಷಗಳ ನಂತರ ಏಕದಿನ ಮಾದರಿಯಲ್ಲಿ ಏಷ್ಯಾಕಪ್’ನ ಅಂತಿಮ ಪಂದ್ಯವನ್ನು ಒಟ್ಟಾಗಿ ಆಡಲಿದ್ದಾರೆ.
ಇದನ್ನೂ ಓದಿ: ಬ್ರೇಕಪ್ ಬಳಿಕ ಮತ್ತೆ ಒಂದಾದ ಸ್ಟಾರ್ ಜೋಡಿ.. ಮೂರು ವರ್ಷದ ಪ್ರೀತಿಗೆ ಮತ್ತೆ ಮುನ್ನುಡಿ ಬರೆದ ಶುಭ್ಮನ್-ಸಾರಾ!
2018ರ ನಂತರ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯುತ್ತಿರುವುದು ಇದೇ ಮೊದಲು. ಕಳೆದ ಬಾರಿಯ ಏಷ್ಯಾಕಪ್’ನಲ್ಲಿ ಟೀಂ ಇಂಡಿಯಾ ಏಕದಿನ ಮಾದರಿಯಲ್ಲಿ ಗೆಲುವು ಸಾಧಿಸಿತ್ತು. ಆ ವೇಳೆ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದರು. ಆದರೆ ಆ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಆ ತಂಡದ ಭಾಗವಾಗಿರಲಿಲ್ಲ. ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ವಿರಾಟ್ ಕೊಹ್ಲಿ ಕೊನೆಯ ಬಾರಿಗೆ 2010 ರಲ್ಲಿ ಏಕದಿನ ಮಾದರಿಯಲ್ಲಿ ಏಷ್ಯಾಕಪ್ ಫೈನಲ್‌ನಲ್ಲಿ ಆಡಿದ್ದರು. ಆ ಸಮಯದಲ್ಲಿ ರೋಹಿತ್ ಶರ್ಮಾ ಕೂಡ ತಂಡದ ಭಾಗವಾಗಿದ್ದರು. ಈ ಇಬ್ಬರು ಆಟಗಾರರು ಇದೀಗ 13 ವರ್ಷಗಳ ನಂತರ ಏಕದಿನ ಮಾದರಿಯಲ್ಲಿ ಏಷ್ಯಾಕಪ್’ನ ಅಂತಿಮ ಪಂದ್ಯವನ್ನು ಆಡುತ್ತಿದ್ದಾರೆ.
ಅಮೋಘ ಫಾರ್ಮ್’ನಲ್ಲಿರುವ ಟೀಂ ಇಂಡಿಯಾ;
2023ರ ಏಷ್ಯಾಕಪ್’ನಲ್ಲಿ ಭಾರತ ತಂಡ ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡಿದೆ. ಮೊದಲ ಪಂದ್ಯ ಪಾಕಿಸ್ತಾನದ ವಿರುದ್ಧವಾಗಿತ್ತು, ಆದರೆ ಆ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ನೇಪಾಳವನ್ನು 10 ವಿಕೆಟ್’ಗಳಿಂದ ಸೋಲಿಸಿತು. ಇದಾದ ಬಳಿಕ ಪಾಕಿಸ್ತಾನವನ್ನು 228 ರನ್’ಗಳಿಂದ ಸೋಲಿಸಿತ್ತು. ನಂತರ ಶ್ರೀಲಂಕಾವನ್ನು 41 ರನ್’ಗಳಿಂದ ಸೋಲಿಸಿತ್ತು. ಆದರೆ ಸೂಪರ್-4ರ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ಎದುರು ಸೋಲನುಭವಿಸಬೇಕಾಯಿತು. ಆದರೆ, ಈ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ಪ್ರಮುಖ ಆಟಗಾರರಿಲ್ಲದೆ ಪ್ರವೇಶಿಸಿತ್ತು ಎಂಬುದು ಗಮನಿಸಬೇಕಾದ ಸಂಗತಿ.
2023ರ ಏಷ್ಯಾಕಪ್’ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅಕ್ಸರ್ ಪಟೇಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ಇದನ್ನೂ ಓದಿ: Asia Cup ಫೈನಲ್ ಪಂದ್ಯದಿಂದ ಅಕ್ಷರ್ ಪಟೇಲ್ ಔಟ್! ಬದಲಿಯಾಗಿ 23ರ ಹರೆಯದ ಸ್ಟಾರ್ ಆಟಗಾರನಿಗೆ ಸ್ಥಾನ
ಶ್ರೀಲಂಕಾ ತಂಡ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನ, ಕುಸಲ್ ಜೆನಿತ್ ಪೆರೆರಾ, ಕುಸಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವ, ಸದಿರ ಸಮರವಿಕ್ರಮ, ಮಹಿಷ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮತಿಶ ಪತಿರಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫೆರ್ನಾಂಡೋ, ಪ್ರಮೋದ್ ಮದುಶನ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ