ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಭಾನುವಾರದಂದು ಟಿ 20 ಮಾದರಿಯಲ್ಲಿ 10,000 ರನ್ ಗಡಿ ದಾಟಿದ ದೇಶದ ಮೊದಲ ಬ್ಯಾಟ್ಸಮನ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಪರ ಬ್ಯಾಟಿಂಗ್ ಮಾಡುವಾಗ ಕೊಹ್ಲಿ ಈ ಸಾಧನೆ ಮಾಡಿದರು. ಪಂದ್ಯಕ್ಕೆ ಬಂದಾಗ, ವಿರಾಟ್ ಕೊಹ್ಲಿ (Virat Kohli) ಗೆ ಈ ಸಾಧನೆ ಮಾಡಲು ಕೇವಲ 13 ರನ್ ಬೇಕಿತ್ತು.
ಇದನ್ನೂ ಓದಿ : T20I World Cup: ವಿಶ್ವಕಪ್ ನಂತರ ಟಿ 20 ತಂಡದ ನಾಯಕತ್ವದಿಂದ ಕೆಳಗಿಳಿಯಲಿರುವ ವಿರಾಟ್ ಕೊಹ್ಲಿ
ಕೊಹ್ಲಿ ಟಿ 20 ಫಾರ್ಮ್ಯಾಟ್‌ನಲ್ಲಿ ಇನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ 10,000 ರನ್ ಪೂರೈಸಿದರು.ಜಸ್‌ಪ್ರೀತ್ ಬುಮ್ರಾ ಅವರ ಎರಡು ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸಿಡಿಸುವ ಮೂಲಕ ಒಟ್ಟಾರೆಯಾಗಿ ಈ ಸಾಧನೆ ಮಾಡಿದ ಐದನೇ ಬ್ಯಾಟ್ಸಮನ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.
Back to back half-centuries for Captain Kohli! 🤩👏🏻👏🏻#PlayBold #WeAreChallengers #ನಮ್ಮRCB #IPL2021 #RCBvMI pic.twitter.com/mYhuJfKhdd
— Royal Challengers Bangalore (@RCBTweets) September 26, 2021
ಇದಕ್ಕೂ ಮೊದಲು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್, ಕೀರನ್ ಪೊಲ್ಲಾರ್ಡ್, ಪಾಕಿಸ್ತಾನದ ಶೋಯೆಬ್ ಮಲಿಕ್ ಮತ್ತು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರು ಈ ಸಾಧನೆ ಮಾಡಿದ ಆಟಗಾರರಾಗಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 41 ಎಸೆತಗಳಲ್ಲಿ 51 ರನ್ ಗಳಿಸಿದರು.
ಇದನ್ನೂ ಓದಿ : IPL 2021 : ಮೊದಲ ಐಪಿಎಲ್ ಗೆಲ್ಲುವಿನತ್ತ ದಾಪುಗಾಲಿಡುತ್ತಿದೆ RCB
ಇದಕ್ಕೂ ಮುನ್ನ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ (MI) ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಬೆಂಗಳೂರು ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 165 ರನ್ ಗಳನ್ನು ಗಳಿಸಿದೆ. ಕೊನೆಯಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ ಅವರು 37 ಎಸೆತಗಳಲ್ಲಿ 56 ರನ್ ಗಳಿಸುವ ಮೂಲಕ ತಂಡವು ಸ್ಪರ್ಧಾತ್ಮಕ ಮೊತ್ತವನ್ನು ಗಳಿಸಲು ನೆರವಾದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.