Virat Kohli highest run-scorer against CSK: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2025ರ ಎಂಟನೇ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಿತು. ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರಿತುರಾಜ್ ಗಾಯಕ್ವಾಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಎರಡೂ ತಂಡಗಳು ತಲಾ ಒಂದು ಬದಲಾವಣೆಯೊಂದಿಗೆ ಮೈದಾನಕ್ಕೆ ಇಳಿದವು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿಯ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಒಂದು ಉತ್ತಮ ದಾಖಲೆಯನ್ನು ನಿರ್ಮಿಸಿದ್ದಾರೆ.
ಫಿಲ್ ಸಾಲ್ಟ್ ಜೊತೆ ಆರಂಭಿಕರಾಗಿ ಬಂದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ರನ್ ಗಳಿಸಲು ಕಷ್ಟಪಡುತ್ತಿರುವುದು ಕಂಡುಬಂದಿತ್ತು. ಆದರೆ ಆ ಬಳಿಕ ಅದ್ಭುತ ಆರಂಭ ಕೊಟ್ಟಿದ್ದಂತು ಸುಳ್ಳಲ್ಲ.
ಅಂದಹಾಗೆ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಈ ಪಂದ್ಯದಲ್ಲಿ ಅವರು 5 ರನ್ ಗಳಿಸಿದ ತಕ್ಷಣ, ಶಿಖರ್ ಧವನ್ ದಾಖಲೆಯನ್ನು ಮುರಿದಿದ್ದಾರೆ. ಶಿಖರ್ ಧವನ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1057 ರನ್ ಗಳಿಸಿದ್ದಾರೆ. ಕೊಹ್ಲಿ 1084 ರನ್‌ಗಳೊಂದಿಗೆ ಮೊದಲ ಸ್ಥಾನ ತಲುಪಿರುವುದರಿಂದ ಅವರು ಈಗ ಎರಡನೇ ಸ್ಥಾನದಲ್ಲಿದ್ದಾರೆ. ಪಟ್ಟಿಯಲ್ಲಿ ಮೂರನೇ ಹೆಸರು ರೋಹಿತ್ ಶರ್ಮಾ, ಅವರು ಸಿಎಸ್‌ಕೆ ವಿರುದ್ಧ 896 ರನ್ ಗಳಿಸಿದ್ದಾರೆ.
ಇದನ್ನೂ ಓದಿ: ನಾನು ಅವನನ್ನೇ ಮದುವೆ ಆಗಬೇಕು ಅನ್ಕೊಂಡಿದ್ದೆ, ಪ್ರೀತಿಯಲ್ಲಿ ಮೋಸ ಹೋದೆ: ನಟಿ ನಮ್ರತಾ ಗೌಡ
ಸಿಎಸ್‌ಕೆ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳು
ವಿರಾಟ್ ಕೊಹ್ಲಿ - 1084 ರನ್
ಶಿಖರ್ ಧವನ್ - 1057 ರನ್
ರೋಹಿತ್ ಶರ್ಮಾ - 896 ರನ್
ದಿನೇಶ್ ಕಾರ್ತಿಕ್ - 727 ರನ್
ಡೇವಿಡ್ ವಾರ್ನರ್ - 696 ರನ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









