close

News WrapGet Handpicked Stories from our editors directly to your mailbox

ಸಚಿನ್ ತೆಂಡೂಲ್ಕರ್, ಬ್ರಿಯಾನ್ ಲಾರಾ ದಾಖಲೆ ಮುರಿದ ವಿರಾಟ್ ಕೊಹ್ಲಿ ..!

ಐಸಿಸಿ ಕ್ರಿಕೆಟ್ ವಿಶ್ವಕಪ್ 2019 ರ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20,000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

Updated: Jun 27, 2019 , 05:22 PM IST
ಸಚಿನ್ ತೆಂಡೂಲ್ಕರ್, ಬ್ರಿಯಾನ್ ಲಾರಾ ದಾಖಲೆ ಮುರಿದ ವಿರಾಟ್ ಕೊಹ್ಲಿ ..!
photo:ANI

ನವದೆಹಲಿ: ಐಸಿಸಿ ಕ್ರಿಕೆಟ್ ವಿಶ್ವಕಪ್ 2019 ರ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20,000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಆ ಮೂಲಕ ವೇಗವಾಗಿ ಈ ಸಾಧನೆ ಮಾಡಿದ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾದರು. ಇದಕ್ಕೂ ಮೊದಲು ಸಚಿನ್ ಹಾಗೂ ಲಾರಾ ಈ ದಾಖಲೆಯನ್ನು ಮಾಡಿದ್ದರು.

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಕ್ಕೂ ಮುನ್ನ ಕೊಹ್ಲಿ ಮೈಲಿಗಲ್ಲುಗಳಿಂದ 37 ರನ್ ಬೇಕಾಗಿತ್ತು. ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲು ಬಂದಾಗ ಆರು ಓವರ್‌ಗಳ ನಂತರ ಭಾರತ 29/1 ಆಗಿತ್ತು ಮತ್ತು ಅವರು ಬೌಂಡರಿಯೊಂದಿಗೆ ತಮ್ಮ ಖಾತೆಯನ್ನು ತೆರೆದರು. 

ವಿರಾಟ್ ಕೊಹ್ಲಿ ಶೀಘ್ರದಲ್ಲೇ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರ 11,363 ಏಕದಿನ ರನ್ ದಾಖಲೆಯನ್ನು ಹಿಂದಿಕ್ಕಲಿದ್ದಾರೆ. ಈ ವಿಶ್ವಕಪ್ ಟೂರ್ನಿಯಲ್ಲಿ ಸತತ ಅರ್ಧಶತಕಗಳನ್ನು ಗಳಿಸಿದ್ದಾರೆ. ಪಾಕಿಸ್ತಾನ ವಿರುದ್ಧ ಅರ್ಧಶತಕದೊಂದಿಗೆ, ಅವರು 11,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದರು. 222 ಇನ್ನಿಂಗ್ಸ್‌ಗಳಲ್ಲಿ  ಈ ಮೈಲಿಗಲ್ಲು ತಲುಪಿದ ಸಾಧನೆ ಮಾಡಿದ್ದರು. ಇನ್ನೊಂದೆಡೆಗೆ ಸಚಿನ್ ತೆಂಡೂಲ್ಕರ್ ಅವರಿಗಿಂತ 54 ಪಂದ್ಯಗಳನ್ನು ಕೊಹ್ಲಿ ಕಡಿಮೆ ಆಡಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿ 6,613 ರನ್ ಮತ್ತು ಟಿ-20 ಗಳಲ್ಲಿ 2,263 ರನ್ ಗಳಿಸಿದ್ದಾರೆ. ಎಲ್ಲಾ ಮೂರು ಸ್ವರೂಪದ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಸರಾಸರಿ 50 ಬ್ಯಾಟಿಂಗ್ ಸರಾಸರಿಯನ್ನು ಹೊಂದಿದ್ದಾರೆ. ಭಾರತ ತಂಡವು ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದಿದೆ, ನ್ಯೂಜಿಲೆಂಡ್ ವಿರುದ್ಧದ ಪಂದ್ಯವನ್ನು ಮಳೆಯಲ್ಲಿ ಕೊಚ್ಚಿ ಹೋದದ್ದರಿಂದ ಇದುವರೆಗೆ ಭಾರತ ಅಜೇಯ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ.