Virat Kohli Records: ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ನೀರಸ ಆರಂಭ ಮಾಡಿದೆ. ನಾಯಕ ರೋಹಿತ್ ಶರ್ಮಾ ಸೇರಿದಂತೆ ಟಾಪ್ ಬ್ಯಾಟ್ಸ್‌ಮನ್‌’ಗಳು ಬಾಕ್ಸಿಂಗ್ ಡೇ ಟೆಸ್ಟ್‌’ನ ಮೊದಲ ದಿನ ಸ್ಕೋರ್ ಮಾಡುವಲ್ಲಿ ವಿಫಲರಾಗಿದ್ದಾರೆ. ಕೆಎಲ್ ರಾಹುಲ್ ಅರ್ಧಶತಕ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿದೆ. ಇನ್ನೊಂದೆಡೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲು ಪ್ರಯತ್ನಿಸಿದರೂ ಸಹ, ಅವರಿಗೂ ದೊಡ್ಡ ಸ್ಕೋರ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಸಣ್ಣ ಇನ್ನಿಂಗ್ಸ್’ನಲ್ಲಿ ಇಬ್ಬರು ನಾಯಕರ ದಾಖಲೆಯನ್ನು ಹಿಂದಿಕ್ಕಿದ್ದಾರೆ ಕೊಹ್ಲಿ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಶೂ ಮೇಲೆ ತನ್ನ ಇಬ್ಬರು ಹೆಣ್ಣು ಮಕ್ಕಳ ಹೆಸರು ಬರೆದುಕೊಂಡು ಮೈದಾನಕ್ಕಿಳಿದ ಖ್ಯಾತ ಕ್ರಿಕೆಟಿಗ ! ಕಾರಣ ಇದು


ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ 1236 ರನ್ ಗಳಿಸಿದ್ದರು. ದ್ರಾವಿಡ್ ಅವರಿಗಿಂತ 13 ರನ್ ಹಿಂದಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧ 1252 ರನ್ ದಾಟಿದ ಕೂಡಲೇ ಕಿಂಗ್ ಕೊಹ್ಲಿ (1274 ರನ್) ಕೋಚ್’ನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಮೂರನೇ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಆಟಗಾರ ಎಂದೆನಿಸಿಕೊಂಡಿದ್ದಾರೆ.


ಇದನ್ನೂ ಓದಿ: 31 ವರ್ಷದಲ್ಲಿ ಯಾವೊಬ್ಬ ನಾಯಕನೂ ಮಾಡದ ಆ ದಾಖಲೆ ಸೃಷ್ಟಿಸ್ತಾರಾ ರೋಹಿತ್? ಹರಣಿಗಳ ನಾಡಲ್ಲಿ ನನಸಾಗುತ್ತಾ ಕನಸು?


ಇನ್ನೊಂದೆಡೆ ದಕ್ಷಿಣ ಆಫ್ರಿಕಾ ವಿರುದ್ಧದ ಈ ಸರಣಿಯನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌’ನಂತೆ ಆಡಲಾಗುತ್ತಿದೆ. ಅಂದಹಾಗೆ ಈ ಇನ್ನಿಂಗ್ಸ್’ನಲ್ಲಿ 38 ರನ್ ಗಳಿಸುತ್ತಿದ್ದಂತೆ WTC ನಲ್ಲಿ ವಿರಾಟ್ ಅವರ ಒಟ್ಟು ಸ್ಕೋರ್ 2101 ರನ್ ಆಗಿದೆ. ಈ ಮೂಲಕ ಈ ಹಿಂದೆ 2097 ರನ್ ಕಲೆ ಹಾಕಿದ್ದ ನಾಯಕ ರೋಹಿತ್ ಶರ್ಮಾ ಅವರನ್ನು ವಿರಾಟ್ ಹಿಂದಿಕ್ಕಿದ್ದಾರೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ