ವಿರಾಟ್ ಕೊಹ್ಲಿ ಶತಕಗಳ ಶತಕ ಗಳಿಸಬಹುದು…ಆದರೆ..!
ಭಾನುವಾರ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ 74ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ ನಂತರ ವಿರಾಟ್ ಕೊಹ್ಲಿ ಹಲವಾರು ದಾಖಲೆಗಳಿಗೆ ಕಾರಣಕರ್ತರಾದರು.
ನವದೆಹಲಿ: ಭಾನುವಾರ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ 74ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದ ನಂತರ ವಿರಾಟ್ ಕೊಹ್ಲಿ ಹಲವಾರು ದಾಖಲೆಗಳಿಗೆ ಕಾರಣಕರ್ತರಾದರು.
ತವರಿನಲ್ಲಿ ಅತಿ ಹೆಚ್ಚು ಏಕದಿನ ಶತಕಗಳ ಪಟ್ಟಿಯಲ್ಲಿ ಭಾರತದ ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಮೀರಿಸುವ ಮೂಲಕ ವಿರಾಟ್ ಅನೇಕ ದಾಖಲೆಗಳನ್ನು ಮುರಿದರು ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನ 50-ಓವರ್‌ಗಳ ಸ್ವರೂಪದಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ಶತಕಗಳನ್ನು ಗಳಿಸಿದ ದಾಖಲೆಯನ್ನು ಸಹ ಹೊಂದಿದ್ದಾರೆ.ಈಗ ಅವರಿಗೆ ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಏಕದಿನ ಶತಕಗಳ ದಾಖಲೆಯನ್ನು ಮುರಿಯುವುದಕ್ಕೆ ಕೇವಲ ಮೂರು ಶತಕಗಳ ಕೊರತೆ ಇದೆ.
ಇದನ್ನೂ ಓದಿ: "ಸುಳ್ಳು ಹೇಳದೇ ಬಿಜೆಪಿಯವರು ಬದುಕಲು ಸಾಧ್ಯವಿಲ್ಲ"
ಈಗ ವಿರಾಟ್ ಕೊಹ್ಲಿ ಅವರ ಸ್ಥಿರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಒಂದು ವೇಳೆ ವಿರಾಟ್ ಕೊಹ್ಲಿ 40 ವರ್ಷದ ವರೆಗೆ ಟೀಮ್ ಇಂಡಿಯಾದಲ್ಲಿ ಸಕ್ರಿಯರಾಗಿದ್ದರೆ ಸುಲಭವಾಗಿ 100 ಶತಕಗಳನ್ನು ಗಳಿಸಬಹುದು ಎಂದು ಹೇಳಿದ್ದಾರೆ.ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಬೆದರಿಕೆ ಕರೆ; ಸಂಪೂರ್ಣ ತನಿಖೆ: ಸಿಎಂ ಬೊಮ್ಮಾಯಿ
"ಅವರು 5 ಅಥವಾ 6 ವರ್ಷಗಳು ಆಡಿದರೆ, ಅವರು 100 ಕ್ಕೆ ಬರುತ್ತಾರೆ.ಅದರಲ್ಲಿ ಯಾವುದೇ ಸಂದೇಹವಿಲ್ಲ.ಅವರ ಸರಾಸರಿ ವರ್ಷಕ್ಕೆ 6 ಆದ್ದರಿಂದ ಒಂದು ವೇಳೆ ಅದು ಸಾಧ್ಯವಾದಲ್ಲಿ ಅವರು ಖಂಡಿತವಾಗಿಯೂ 26 ಶತಕಗಳನ್ನು ಗಳಿಸಬಹುದು. ಸಚಿನ್ ಕೂಡ ತಮ್ಮ ನಲವತ್ತು ವರ್ಷದವರೆಗೆ ಕ್ರಿಕೆಟ್ ಆಡಿದರು.ಈಗ ಕೊಹ್ಲಿ ಫಿಟ್ನೆಸ್ ಬಗ್ಗೆ ಸಾಕಷ್ಟು ತಿಳಿದಿರುವುದರಿಂದ ಇದು ಸುಲಭವಾಗಿ ಸಾಧ್ಯವಾಗಬಹುದು.ಇಂದಿಗೂ ಕೂಡ ಅವರು ಟೀಮ್ ಇಂಡಿಯಾದಲ್ಲಿ ವಿಕೆಟ್ ಗಳ ನಡುವೆ ವೇಗವಾಗಿ ಓಡುವ ಆಟಗಾರರಾಗಿದ್ದಾರೆ ಎಂದು ಗವಾಸ್ಕರ್ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.