ಇತ್ತೀಚೆಗೆಯಷ್ಟೇ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿತ್ತು. ಇನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಭಾಗವಹಿಸಬಹುದೇ ಅಥವಾ ಇಲ್ಲವೇ ಎಂಬುದು ಇಂದು ನಡೆಯಲಿರುವ ಆರ್‌ಟಿ-ಪಿಸಿಆರ್ ಪರೀಕ್ಷೆಯ ವರದಿ ಬಂದ ಬಳಿಕ ನಿರ್ಧಾರವಾಗಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ರೋಹಿತ್ ಭಾಗಿಯಾಗಲು ಅಸಾಧ್ಯವಾದರೆ ತಂಡಕ್ಕೆ ಹೊಸ ನಾಯಕನನ್ನು ಘೋಷಿಸಬೇಕಾಗುತ್ತದೆ.
ಇದನ್ನೂ ಓದಿ: Hero Bike: ಸದ್ದಿಲ್ಲದೆ ಅಗ್ಗದ ಹೀರೋ ಬೈಕ್ ಬಿಡುಗಡೆ, ವೈಶಿಷ್ಟ್ಯಗಳ ಬಗ್ಗೆ ತಿಳಿಯಿರಿ
ಕಳೆದ ವರ್ಷ ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸಕ್ಕೆ ಆಗಮಿಸಿತ್ತು. ಆದರೆ ಆ ಸಂದರ್ಭದಲ್ಲಿ ಭಾರತೀಯ ಕ್ಯಾಂಪ್‌ನಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಈ ಟೂರ್‌ನ ಕೊನೆಯ ಪಂದ್ಯವನ್ನು ರದ್ದುಗೊಳಿಸಲಾಯಿತು. ಆಗ ಟೀಂ ಇಂಡಿಯಾದ ಕಮಾಂಡ್ ವಿರಾಟ್ ಕೊಹ್ಲಿಯವರ ಕೈಯಲ್ಲಿತ್ತು. ಈ ಪಂದ್ಯ ಅತ್ಯಂತ ಮಹತ್ವದ್ದಾಗಿದ್ದದ್ದು, ಮಾತ್ರವಲ್ಲದೆ, ಆ ಪರಿಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ಮತ್ತೊಮ್ಮೆ ನಾಯಕತ್ವದ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಇದೀಗ ಮತ್ತೆ ತಂಡದ ನಾಯಕತ್ವವನ್ನು ಕೊಹ್ಲಿ ವಹಿಸಿಕೊಳ್ಳುತ್ತಾರಾ ಎಂಬ ಅನುಮಾನ ಮೂಡಿದೆ. ಸದ್ಯ ಕೊಹ್ಲಿಗೆ ಜಸ್ಪ್ರೀತ್ ಬುಮ್ರಾ ಮತ್ತು ರಿಷಬ್ ಪಂತ್ ಪೈಪೋಟಿ ನೀಡಲಿದ್ದಾರೆ.
ಕೆಎಲ್ ರಾಹುಲ್ ತಂಡದ ಭಾಗವಾಗಿಲ್ಲ
ವಿರಾಟ್ ಕೊಹ್ಲಿ ಈ ವರ್ಷದ ಆರಂಭದಲ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ನೀಡಲಾಗಿತ್ತು. ಆದರೆ ಗಾಯಗೊಂಡ ಕಾರಣ ರಾಹುಲ್ ಆಟದಿಂದ ಹೊರಬಿದ್ದಿದ್ದರು. ಸದ್ಯ ಈ ಟೂರ್ನಿಯಲ್ಲಿ ರಾಹುಲ್ ಇಲ್ಲದ ಕಾರಣ ಅವರಿಗೂ ನಾಯಕತ್ವ ಸಿಗುವುದು ಅಸಾಧ್ಯ. ಹೀಗಾಗಿ ಕೊಹ್ಲಿಯೇ ನಾಯಕನಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: WATCH: ವಾಹನಗಳ ಮೇಲೆ ಆನೆ ದಾಳಿ, ಆತಂಕಗೊಂಡ ವಾಹನ ಸವಾರರು
ಬಿಸಿಸಿಐ ಟ್ವೀಟ್:
ರೋಹಿತ್ ಶರ್ಮಾಗೆ ಕೊರೊನಾ ಸೋಂಕು ತಗುಲಿದೆ ಎಂದು ಬಿಸಿಸಿಐ ಟ್ವಿಟರ್ ಮೂಲಕ ಮಾಹಿತಿ ನೀಡಿದೆ. ಶನಿವಾರ ನಡೆದ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯಲ್ಲಿ ರೋಹಿತ್ ಶರ್ಮಾ ಅವರಿಗೆ ಕರೋನಾ ಪಾಸಿಟಿವ್ ಕಂಡುಬಂದಿದೆ ಎಂದು ಬಿಸಿಸಿಐ ತಿಳಿಸಿದೆ. ಅಭ್ಯಾಸ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡಿರಲಿಲ್ಲ. ಅವರ ಸ್ಥಾನದಲ್ಲಿ ಕೆಎಸ್ ಭರತ್ ಅವರನ್ನು ಬ್ಯಾಟಿಂಗ್ ಮಾಡಲು ಕಳುಹಿಸಲಾಗಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.