ನವದೆಹಲಿ: ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ ಇದರಿಂದಾಗಿ ಅವರು ಆರೆಂಜ್ ಕ್ಯಾಪ್‌ನ ಪ್ರಸ್ತುತ ಹೋಲ್ಡರ್ ಆಗಿದ್ದಾರೆ. ಈ ಪ್ರದರ್ಶನದಿಂದಾಗಿ ಐಸಿಸಿ ವಿಶ್ವಕಪ್ 2024 ರ ಟೀಮ್ ಇಂಡಿಯಾ ತಂಡದಲ್ಲಿ ಅವರ ಸ್ಥಾನ ಈಗಾಗಲೇ ಖಚಿತವಾಗಿದೆ.


COMMERCIAL BREAK
SCROLL TO CONTINUE READING

ಇದೆ ವೇಳೆ ಇತ್ತೀಚಿಗೆ ಮಾಧ್ಯಮದ ಜೊತೆ ಮಾತನಾಡುತ್ತಾ ತಮ್ಮ ನೆಚ್ಚಿನ ಆಟಗಾರರ ಕುರಿತಾಗಿ ವಿಸ್ತೃತವಾಗಿ ಮಾತನಾಡಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್


ಸಚಿನ್ ತೆಂಡೂಲ್ಕರ್ ಮತ್ತು ವಿವಿಯನ್ ರಿಚರ್ಡ್ಸ್ ಅವರ ಕ್ರಿಕೆಟ್ ಆರಾಧ್ಯ ದೈವಿಗಳಾಗಿದ್ದಾರೆ ಅವರ ಬಗ್ಗೆ ವಿರಾಟ್ ಕೊಹ್ಲಿ ಯಾವಾಗಲೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ.ಈಗ ಅವರು ಇತ್ತೀಚಿನ ಆಟಗಾರರನ್ನು ಹೆಸರಿಸುತ್ತಾ ಬೆನ್ ಸ್ಟೋಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ "ನನ್ನ ನೆಚ್ಚಿನ ಪ್ರಸ್ತುತ ಕ್ರಿಕೆಟಿಗ ಬೆನ್ ಸ್ಟೋಕ್ಸ್," ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಇವಿಎಂ, ವಿವಿಪ್ಯಾಟ್‌ಗಳಲ್ಲಿ ಮೈಕ್ರೋಕಂಟ್ರೋಲರ್‌ ಪಕ್ಷ ಮತ್ತು ಅಭ್ಯರ್ಥಿಯನ್ನು ಗುರುತಿಸುವುದಿಲ್ಲ : ಸುಪ್ರೀಂ ಕೋರ್ಟ್‌


ಕೊಹ್ಲಿ ಮತ್ತು ಸ್ಟೋಕ್ಸ್ ಪರಸ್ಪರರ ವಿರುದ್ಧ ಹಲವಾರು ಪಂದ್ಯಗಳನ್ನು ಆಡಿದ್ದು ಅವರು ಪ್ರತಿಸ್ಪರ್ಧಿಯಾಗಿದ್ದಾರೆ.ಭಾರತ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಟೋಕ್ಸ್ ಇಂಗ್ಲೆಂಡ್ ಅನ್ನು ಮುನ್ನಡೆಸಿದರು, ಆದರೆ ವಿರಾಟ್ ಅವರ ಎರಡನೇ ಮಗುವಿನ ಜನನದ ಕಾರಣ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು.ರೆಡ್ ಬಾಲ್ ಕ್ರಿಕೆಟ್‌ನತ್ತ ಗಮನ ಹರಿಸಲು ಬೆನ್ ಸ್ಟೋಕ್ಸ್ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿದ್ದಾರೆ.ಮೊಣಕಾಲಿನ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡ ನಂತರ ಅವರು ಸುದೀರ್ಘ ಸ್ವರೂಪದ ಆಟದಲ್ಲಿ ಆಲ್ ರೌಂಡರ್ ಆಗಿ ಆಡಲು ಬಯಸಿದ್ದಾರೆ.


ಮತ್ತೊಂದೆಡೆ, ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ನಡೆಯಲಿರುವ ಜಾಗತಿಕ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ಮೆನ್ ಇನ್ ಬ್ಲೂ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.