Virat Kohli duplicate person: ಭಾರತ ಕ್ರಿಕೆಟ್ ತಂಡ ಪ್ರಸ್ತುತ ಶ್ರೀಲಂಕಾ ಪ್ರವಾಸದಲ್ಲಿದ್ದು, ಟಿ20 ಸರಣಿಯನ್ನು ಗೆದ್ದ ಬಳಿಕ ಇದೀಗ ಏಕದಿನ ಸರಣಿಯನ್ನು ಆಡುತ್ತಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಆಡುತ್ತಿದ್ದಾರೆ. ಆದರೆ, ಈ ಇಬ್ಬರು ದಿಗ್ಗಜರಿದ್ದರೂ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ ಹಿಂದೆ ಬಿದ್ದಿದೆ.
ಇದನ್ನೂ ಓದಿ: ಒಂದೇ ವರ್ಷದಲ್ಲಿ 14 ಹಿಟ್ ಸಿನಿಮಾ! ಅಮಿತಾಬ್ʼಗಿಂತಲೂ ಹೆಚ್ಚು ಸಂಭಾವನೆ ಪಡೀತಾರೆ ಈ ಸ್ಟಾರ್
ಅಂದಹಾಗೆ ಬಾಂಗ್ಲಾದೇಶದಲ್ಲಿ ಸದ್ಯ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ರಾಜಕೀಯ ಕೋಲಾಹಲ ಭುಗಿಲೆದ್ದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಜನರು ತಿರುಗಿಬಿದ್ದಿದ್ದಾರೆ. ಇನ್ನು ಈ ಪ್ರತಿಭಟನೆಯಲ್ಲಿ 'ವಿರಾಟ್ ಕೊಹ್ಲಿ' ಕಾಣಿಸಿಕೊಂಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅದು ಕೂಡ ಘೋಷಣೆಗಳನ್ನು ಕೂಗುತ್ತಾ, ಆರ್ ಸಿ ಬಿ ಕ್ಯಾಪ್ ಧರಿಸಿರುವುದು ಕಂಡುಬಂದಿದೆ.
ಬಾಂಗ್ಲಾದೇಶದಲ್ಲಿ ಕಳೆದ ಹಲವು ದಿನಗಳಿಂದ ಪ್ರಕ್ಷುಬ್ಧ ವಾತಾವರಣವಿದ್ದು, ದೇಶದಾದ್ಯಂತ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಆಂದೋಲನವು ಹಿಂಸಾತ್ಮಕ ಸ್ವರೂಪವನ್ನು ಪಡೆದುಕೊಂಡಿದ್ದು, ಇದರಿಂದಾಗಿ ಅನೇಕ ಪ್ರತಿಭಟನಾಕಾರ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.
'ವಿರಾಟ್' ವೈರಲ್ ವಿಡಿಯೋ
🚨King Kohli joins the victory celebration at the streets of Chattogram, #Bangladesh pic.twitter.com/zxl5opkbEq
— Zeyy (@zeyroxxie) August 5, 2024
ಮತ್ತೊಂದೆಡೆ ಪ್ರಧಾನಿ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿ ನಿವಾಸದತ್ತ ಮೆರವಣಿಗೆ ನಡೆಸಿ ಮನೆಗೆ ನುಗ್ಗಿ ಲೂಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅಂತಹ ವೀಡಿಯೋವೊಂದರಲ್ಲಿ ವಿರಾಟ್ ಕೊಹ್ಲಿಯನ್ನು ಹೋಲುವ ವ್ಯಕ್ತಿಯೊಬ್ಬ, ಬಿಳಿ ಟಿ-ಶರ್ಟ್, ಕ್ಯಾಪ್ ಮತ್ತು ಕಪ್ಪು ಕನ್ನಡಕವನ್ನು ಧರಿಸಿ, ಬಾಂಗ್ಲಾದೇಶದ ರಸ್ತೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ನೃತ್ಯ ಮಾಡುತ್ತಾ ಇರುವುದು ಕಂಡು ಬಂದಿದೆ.
ಇದನ್ನೂ ಓದಿ: ತಿಂಗಳಿಗೆ 60000000 ರೂ. ಗಳಿಸುವ ಈ ಸುಂದರಿಗೆ ಬಾಯ್ ಫ್ರೇಂಡ್ ಬೇಕಂತೆ..! ಟ್ರೈ ಮಾಡಿ ಬಾಯ್ಸ್
ವಿಡಿಯೋ ಸತ್ಯತೆ ಏನು?
ಈ ವಿಡಿಯೋದ ಅಸಲಿಯತ್ತೇನೆಂದರೆ, ಅಲ್ಲಿರುವುದು ನಿಜವಾದ ವಿರಾಟ್ ಕೊಹ್ಲಿ ಅಲ್ಲ. ಅವರಂತೇ ಕಾಣುವ ಬೇರೊಬ್ಬ ವ್ಯಕ್ತಿ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ