IND vs SA Test Series: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿರುವ ಟೀಂ ಇಂಡಿಯಾ T20 ಮತ್ತು ODI ಸರಣಿಗಳನ್ನು ಆಡಿದ್ದು, ಇದೀಗ ಟೆಸ್ಟ್ ಸರಣಿ ಆಡಲು ಸಿದ್ಧತೆ ನಡೆಸುತ್ತಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಪ್ರಾರಂಭವಾಗಲಿದ್ದು, ಇದಕ್ಕೂ ಮುನ್ನ ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಂದರ್ಶನ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: RCBಗೆ ಕಪ್ ಗೆಲ್ಲಲು ಸಹಾಯ ಮಾಡಿ ಎಂದ ಅಭಿಮಾನಿಗೆ ಧೋನಿ ಕೊಟ್ಟ ಉತ್ತರವೇನು ಗೊತ್ತಾ?


ಏಕದಿನ ವಿಶ್ವಕಪ್‌ ಫೈನಲ್‌’ನಲ್ಲಿ ಸೋಲನುಭವಿಸಿದ ಬಳಿಕ, ಕೊಹ್ಲಿ ಸುಮಾರು ಒಂದು ತಿಂಗಳ ಕಾಲ ಕ್ರಿಕೆಟ್‌’ನಿಂದ ದೂರ ಉಳಿದಿದ್ದರು. ಇದೀಗ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಮೊದಲು ಸಂದರ್ಶನವನ್ನು ನೀಡಿದ್ದಾರೆ.


ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ವಿರಾಟ್ ಕೊಹ್ಲಿ, "ನನಗೆ ಟೆಸ್ಟ್ ಕ್ರಿಕೆಟ್ ಆಟದ ಅಡಿಪಾಯವಿದ್ದಂತೆ. ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಎಂಬುದು ಇತಿಹಾಸ, ಸಂಸ್ಕೃತಿ, ಪರಂಪರೆ, ಎಲ್ಲವೂ… ಇದು ಎಲ್ಲಕ್ಕಿಂತ ವಿಭಿನ್ನ ಅನುಭವ" ಎಂದಿದ್ದಾರೆ.


“ಆಟಗಾರನಾಗಿ, ತಂಡವಾಗಿ, ಸುದೀರ್ಘ ಇನ್ನಿಂಗ್ಸ್ ಆಡುವ ಮತ್ತು ತಂಡಕ್ಕೆ ಗೆಲುವು ತಂದುಕೊಡುವುದು ವಿಶೇಷ ಭಾವನೆಯನ್ನು ನೀಡುತ್ತದೆ. ಟೆಸ್ಟ್ ಕ್ರಿಕೆಟ್ ಆಡುವುದು ನನಗೆ ತುಂಬಾ ಖುಷಿ, ಈ ಆಟ ನನಗೆ ತೃಪ್ತಿ ನೀಡುತ್ತದೆ. 100 ಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಲು, ಟೆಸ್ಟ್ ಕ್ರಿಕೆಟ್ ಆಡುವ ಕನಸು ಕಾಣಲು ಮತ್ತು ಟೆಸ್ಟ್ ಕ್ರಿಕೆಟಿಗನಾಗಲು, ನಾನು ನಿಜವಾಗಿಯೂ ಪುಣ್ಯ ಮಾಡಿದ್ದೇನೆ” ಎಂಬರ್ಥದಲ್ಲಿ ಮಾತನಾಡಿದ್ದಾರೆ.


ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 111 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ 187 ಇನ್ನಿಂಗ್ಸ್‌ಗಳಲ್ಲಿ ಸರಾಸರಿ 49.29 ಆಗಿದ್ದು, ಒಟ್ಟು 8676 ರನ್ ಗಳಿಸಿದ್ದಾರೆ. 29 ಶತಕ ಮತ್ತು 29 ಅರ್ಧಶತಕಗಳ ಇನ್ನಿಂಗ್ಸ್‌’ಗಳನ್ನು ಕೊಹ್ಲಿ ಆಡಿದ್ದಾರೆ. ಇನ್ನು ವಿರಾಟ್ ಅವರ ಗರಿಷ್ಠ ಸ್ಕೋರ್ ಅಜೇಯ 254 ರನ್.


ಇದನ್ನೂ ಓದಿ: 56ನೇ ವಯಸ್ಸಿನಲ್ಲಿ ತನಗಿಂತ 22 ವರ್ಷ ಕಿರಿಯ ಯುವತಿ ಜೊತೆ 2ನೇ ಬಾರಿ ಮದುವೆಗೆ ಸಿದ್ಧರಾದ ಸ್ಟಾರ್ ನಟ


ಅಂದಹಾಗೆ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಮೊದಲ ಟೆಸ್ಟ್ ಪಂದ್ಯ ಸೆಂಚೂರಿಯನ್‌’ನಲ್ಲಿ ನಡೆಯಲಿದ್ದು, ವಿರಾಟ್ ಕೊಹ್ಲಿ 2018 ರಲ್ಲಿ 153 ರನ್‌’ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.