ಔಟ್‌ ಆಗಿದ್ದಕ್ಕೆ ತಡೆಯಲಾರದ ಕೋಪ... ತಾಳ್ಮೆ ಕಳೆದುಕೊಂಡು ನೀರಿನ ಬಾಕ್ಸ್‌ಗೆ ಬ್ಯಾಟ್‌ನಿಂದ ಬಡಿದ ವಿರಾಟ್! ವಿಡಿಯೋ ನೋಡಿ

Virat Kohli Anger: ಭಾರತ ತಂಡ 12 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿ ಸೋತ ಕಳಪೆ ದಾಖಲೆಯನ್ನು ಬರೆದಿದೆ. ಇದೀಗ ವಿರಾಟ್ ಕೊಹ್ಲಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಕೋಪವನ್ನು ಹೊರಹಾಕುತ್ತಿರುವಂತೆ ಕಾಣಿಸುತ್ತದೆ.  

Written by - Bhavishya Shetty | Last Updated : Oct 27, 2024, 02:03 PM IST
    • ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ
    • ಕಳಪೆ ಪ್ರದರ್ಶನದಿಂದಾಗಿ ಭಾರತ ಈ ಮೂರು ಪಂದ್ಯಗಳ ಸರಣಿಯನ್ನು ಕಳೆದುಕೊಂಡಿದೆ.
    • ಭಾರತ ತಂಡ 12 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿ ಸೋತ ಕಳಪೆ ದಾಖಲೆಯನ್ನು ಬರೆದಿದೆ
ಔಟ್‌ ಆಗಿದ್ದಕ್ಕೆ ತಡೆಯಲಾರದ ಕೋಪ... ತಾಳ್ಮೆ ಕಳೆದುಕೊಂಡು ನೀರಿನ ಬಾಕ್ಸ್‌ಗೆ ಬ್ಯಾಟ್‌ನಿಂದ ಬಡಿದ ವಿರಾಟ್! ವಿಡಿಯೋ ನೋಡಿ title=
Virat Kohli Video

Virat Kohli Viral Video: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪುಣೆ ಟೆಸ್ಟ್ ಪಂದ್ಯದಲ್ಲೂ ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ವಿರಾಟ್ ಕೊಹ್ಲಿ, ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಅಲ್ಪ ಮೊತ್ತಕ್ಕೆ ಔಟಾಗಿ ಪೆವಿಲಿಯನ್‌ಗೆ ಮರಳಿದ್ದರು. ಅವರ ಮತ್ತು ತಂಡದ ಕಳಪೆ ಪ್ರದರ್ಶನದಿಂದಾಗಿ ಭಾರತ ಈ ಮೂರು ಪಂದ್ಯಗಳ ಸರಣಿಯನ್ನು ಕಳೆದುಕೊಂಡಿದೆ.

ಇದನ್ನೂ ಓದಿ: ಬೇಸರದಿಂದಲೇ ಐಶ್ವರ್ಯಾ ರೈ ಜೊತೆಗಿನ ಡಿವೋರ್ಸ್‌ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಬಚ್ಚನ್.! ಕೊನೆಗೂ ಬೇರ

ಈ ಸೋಲಿನ ಮೂಲಕ, ಭಾರತ ತಂಡ 12 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿ ಸೋತ ಕಳಪೆ ದಾಖಲೆಯನ್ನು ಬರೆದಿದೆ. ಇದೀಗ ವಿರಾಟ್ ಕೊಹ್ಲಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಕೋಪವನ್ನು ಹೊರಹಾಕುತ್ತಿರುವಂತೆ ಕಾಣಿಸುತ್ತದೆ.

ಪುಣೆ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿತ್ತು ಎಂದೇ ಹೇಳಬಹುದು. ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 18 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ ಒಂದು ರನ್ ಗಳಿಸಿದ್ದರೆ, ಎರಡನೇ ಇನ್ನಿಂಗ್ಸ್‌ನಲ್ಲಿ17 ರನ್ ಗಳಿಸಿದ್ದರು. ಇದೀಗ ಅವರ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಡ್ರೆಸ್ಸಿಂಗ್ ರೂಮ್‌ಗೆ ವಾಪಸಾಗುತ್ತಿರುವಾಗ ತನ್ನ ಬ್ಯಾಟ್‌ನಿಂದ ನೀರಿನ ಬಾಕ್ಸ್‌ʼಗೆ ಬಲವಾಗಿ ಹೊಡೆಯುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ನೋಡಿದ ಅವರ ಅಭಿಮಾನಿಗಳು ಕೂಡ ಬೆಚ್ಚಿ ಬಿದ್ದಿದ್ದಾರೆ.

 

 

ಇದನ್ನೂ ಓದಿ: Bigg Boss 11: ಬಿಗ್‌ಬಾಸ್‌ ಮನೆಯಿಂದ ಹೊರಬರುತ್ತಿದ್ದಂತೆ ಕಿಚ್ಚನ ಭೇಟಿ ಮಾಡಲು ಬಂದ ದರ್ಶನ್‌ ಅಭಿಮಾನಿ!! ಫೋಟೋ ವೈರಲ್‌ 

ಈ ವರ್ಷದ ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯವನ್ನು ಆಡಿದ ನಂತರ, ವಿರಾಟ್ ಕೊಹ್ಲಿ ಸುಮಾರು 8 ತಿಂಗಳ ಕಾಲ ಈ ಸ್ವರೂಪದಿಂದ ದೂರವಿದ್ದರು. ಭಾರತ ಪ್ರವಾಸದಲ್ಲಿ ಟೆಸ್ಟ್ ಸರಣಿ ಆಡಲು ಬಂದಿದ್ದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನೂ ಕಳೆದುಕೊಂಡಿದ್ದರು. ಕಳೆದ ತಿಂಗಳು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ವಿರಾಟ್ ಈ ಸ್ವರೂಪದಲ್ಲಿ ಪುನರಾಗಮನ ಮಾಡಿದರು. ಆದರೆ ಈ ಎರಡೂ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. ಈಗ ನ್ಯೂಜಿಲೆಂಡ್ ಸರಣಿಯಲ್ಲಿಯೂ ಅವರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಲಾಗುತ್ತಿಲ್ಲ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News