Virat Kohli: ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸುವ ಮೂಲಕ ದೊಡ್ಡ ಸಾಧನೆ ಮಾಡಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ 9,000 ರನ್ ಪೂರೈಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದೀಪಾವಳಿಗೂ ಮುನ್ನ ಈ 6 ರಾಶಿಗಳಿಗೆ ಒಲಿಯುವುದು ಅದೃಷ್ಟ.. ಕಾರು ಬಂಗಲೆ ಖರೀದಿ ಯೋಗ, ಅಪಾರ ಧನಾಗಮನ.. ಸಿರಿವಂತಿಕೆ ಬರುವ ಕಾಲ.. ವೈಭವದ ಜೀವನ!


ಮೊದಲ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದ್ದರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಎಚ್ಚರಿಕೆಯಿಂದ ಆಡಿದ ಅವರು 15ನೇ ಎಸೆತದಲ್ಲಿ ಮೊದಲ ರನ್ ಗಳಿಸಿದರು. ಜೊತೆಗೆ 70 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.


ವಿರಾಟ್ ಕೊಹ್ಲಿ ಟೆಸ್ಟ್ ನಲ್ಲಿ 9000 ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ. ಭಾರತದ ಪರ ಸಚಿನ್, ದ್ರಾವಿಡ್ ಮತ್ತು ಸುನಿಲ್ ಗವಾಸ್ಕರ್ ಈ ಸಾಧನೆ ಮಾಡಿದ್ದಾರೆ. ಆದರೆ, ಗರಿಷ್ಠ ಇನ್ನಿಂಗ್ಸ್ ಆಡಿದ ಬಳಿಕ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಅಂದರೆ 197ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ.


ಇದನ್ನೂ ಓದಿ: ರೈಲ್ವೆ ಜಾರಿ ಮಾಡಿದೆ ಹೊಸ ಟಿಕೆಟ್ ಬುಕಿಂಗ್ ಪದ್ಧತಿ !ರೈಲು ಹೊರಡುವ ಕೆಲವೇ ನಿಮಿಷಗಳ ಮುನ್ನ ಟಿಕೆಟ್ ಮಾಡಿದರೂ ಸಿಗುವುದು ಕನ್ಫರ್ಮ್ ಟಿಕೆಟ್!ತತ್ಕಾಲ್ ಗಿಂತ ಅಗ್ಗ ಈ ಟಿಕೆಟ್


ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಇದುವರೆಗೆ 116 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 29 ಶತಕಗಳು ಮತ್ತು ಏಳು ದ್ವಿಶತಕಗಳನ್ನು ಒಳಗೊಂಡಂತೆ 9000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 31 ಅರ್ಧಶತಕಗಳನ್ನು ಕೂಡ ಗಳಿಸಿದ್ದಾರೆ. ಅವರ ಅತ್ಯುತ್ತಮ ಸ್ಕೋರ್ 254 ಆಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ