T20 World Cup 2022ರಲ್ಲಿ ವಿರಾಟ್ ಕಾರುಬಾರು: ಅಬ್ಬಬ್ಬಾ.. ಕೊಹ್ಲಿ ಹೆಸರಲ್ಲಿದೆ ಇಷ್ಟೊಂದು ದಾಖಲೆಗಳು!
Virat Kohli Records: ಕಳೆದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ 5 ರನ್‌ಗಳ ಜಯ ಸಾಧಿಸಿತ್ತು. ಇದರಲ್ಲಿ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ ಅಜೇಯ 64 ರನ್ ಬಾರಿಸಿ ವಿಶ್ವ ದಾಖಲೆಯನ್ನು ಮಾಡಿದ್ದರು. 16 ರನ್ ಗಳಿಸುತ್ತಿದ್ದಂತೆಯೇ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.
Virat Kohli Records: ಸದ್ಯ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಸೂಪರ್-12 ಹಂತದಲ್ಲಿ ಭಾರತ ಸೆಮಿ ಫೈನಲ್ ಪ್ರವೇಶಿಸಿದೆ. ನೆದರ್ಲ್ಯಾಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಸೋಲು ಕಂಡಿದ್ದು, ಈ ಮೂಲಕ ಟೀಂ ಇಂಡಿಯಾ ಅಧಿಕೃತವಾಗಿ ಸೆಮೀಸ್ ಗೆ ಎಂಟ್ರಿ ಪಡೆದಿದೆ.
ಇನ್ನು ಈ ವಿಶ್ವಕಪ್ ಗ್ರೂಪ್ 12ರ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸಿದ್ದು, ಅರ್ಧ ಶತಕಗಳ ಜೊತೆಗೆ ವಿಶ್ವದಾಖಲೆಯನ್ನೂ ಸಹ ಮಾಡಿದ್ದಾರೆ. ಇವೆಲ್ಲದರ ಜೊತೆಗೆ ಐಸಿಸಿ ಬಿಡುಗಡೆ ಮಾಡಿದ ಬೆಸ್ಟ್ ಬ್ಯಾಟಿಂಗ್ ಸರಾಸರಿ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಅಗ್ರ ಸ್ಥಾನ ಪಡೆದಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ 220.00 ಇದೆ. ಇನ್ನು ಇದೇ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಇದ್ದು, ಅವರ ಬ್ಯಾಟಿಂಗ್ ಸರಾಸರಿ 54.66 ಇದೆ. ಈ ಮೂಲಕ ನಾಲ್ಕನೇ ಐದನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: India Qualify for Semi-Finals: ಅಧಿಕೃತವಾಗಿ ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ
ಕಳೆದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ 5 ರನ್‌ಗಳ ಜಯ ಸಾಧಿಸಿತ್ತು. ಇದರಲ್ಲಿ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ ಅಜೇಯ 64 ರನ್ ಬಾರಿಸಿ ವಿಶ್ವ ದಾಖಲೆಯನ್ನು ಮಾಡಿದ್ದರು. 16 ರನ್ ಗಳಿಸುತ್ತಿದ್ದಂತೆಯೇ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಅಷ್ಟೇ ಅಲ್ಲದೆ, ಶ್ರೀಲಂಕಾ ಆಟಗಾರ ಮಹೇಲಾ ಜಯವರ್ಧನೆ ಅವರ 1,016 ರನ್‌ಗಳ ಮೊತ್ತದ ದಾಖಲೆಯನ್ನು ಕಿಂಗ್ ಕೊಹ್ಲಿ ಮುರಿದರು. ಮಹೇಲಾ ಜಯವರ್ಧನೆ 31 ಇನ್ನಿಂಗ್ಸ್‌ಗಳಲ್ಲಿ ದಾಖಲೆಯನ್ನು ಸ್ಥಾಪಿಸಿದರು.
ಇದರ ಜೊತೆಗೆ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೂ ಪಾತ್ರರಾದರು. ಅಷ್ಟೇ ಅಲ್ಲದೆ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 3300 ರನ್‌ಗಳ ದಾಖಲೆಯನ್ನೂ ಸಹ ಹಿಂದಿಕ್ಕಿದರು. ಟಿ20 ವಿಶ್ವಕಪ್ 2022 ರಲ್ಲಿ ಇದುವರೆಗೆ ವಿರಾಟ್ ಕೊಹ್ಲಿ ಮೂರು ಅರ್ಧ ಶತಕಗಳನ್ನು ಬಾರಿಸಿದ್ದಾರೆ.
ಇದನ್ನೂ ಓದಿ: T20 World Cup 2022: ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಈ ಇಬ್ಬರನ್ನು ಕೈಬಿಡ್ತಾರಾ ರೋಹಿತ್ ಶರ್ಮಾ?
ಇನ್ನೊಂದೆಡೆ ಈ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ನೆದರ್ಲ್ಯಾಂಡ್ ಆಟಗಾರ ಮ್ಯಾಕ್ಸ್ ಒಡೌಡ್ (242 ರನ್) ಇದ್ದರೆ, ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ (220 ರನ್) ಇದ್ದಾರೆ. ಇಂದು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಈ ದಾಖಲೆ ಕೂಡ ಮುರಿಯುವ ಸಾಧ್ಯತೆ ಕಂಡುಬರುತ್ತಿದೆ.\
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.