Virat Kohli Century: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ 19 ನೇ ಪಂದ್ಯ ಇಂದು ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಸತತ ಮೂರು ಪಂದ್ಯಗಳನ್ನು ಗೆದ್ದಿದ್ದು, ಪಾಯಿಂಟ್ ಟೇಬಲ್’ನಲ್ಲಿ ಆರು ಅಂಕಗಳನ್ನು ಪಡೆದು, +1.249 ರ ನಿವ್ವಳ ರನ್ ರೇಟ್’ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೆಕೆಆರ್ ಮತ್ತು ಎಲ್ ಎಸ್ ಜಿ ವಿರುದ್ಧ ಸತತ ಸೋಲುಗಳನ್ನು ಎದುರಿಸಬೇಕಾಯಿತು. ಈ ಮೂಲಕ ನಾಲ್ಕು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಮೂರು ಸೋಲುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.
ಅಂದಹಾಗೆ ಈ ಪಂದ್ಯದಲ್ಲಿ ಆರ್ ಸಿ ಬಿಯ ಲೆಜೆಂಡರಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮಹಾ ದಾಖಲೆ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 7,500 ರನ್ ಪೂರೈಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನೊಂದೆಡೆ ಕೇವಲ 67 ಎಸೆತದಲ್ಲಿ ಶತಕ ಬಾರಿಸಿದ್ದಾರೆ. ರಾಜಸ್ಥಾನ ರಾಯಲ್ಸ್ ವಿರುದ್ಧ ಮೊದಲ ಬಾರಿಗೆ ಈ ಸಾಧನೆ ಮಾಡಿದ್ದಾರೆ ವಿರಾಟ್ ಕೊಹ್ಲಿ.
ಇದನ್ನೂ ಓದಿ: ಪ್ರೇಯಸಿಯ ಆತ್ಮಹತ್ಯೆ ನೋವು ಕಾಡುತ್ತಿದ್ದರೂ ಪ್ರಸ್ತುತ IPLನಲ್ಲಿ ಅಬ್ಬರಿಸುತ್ತಿದ್ದಾರೆ ಈ ಸ್ಟಾರ್ ಕ್ರಿಕೆಟಿಗ!
ಐಪಿಎಲ್’ನಲ್ಲಿ 7500 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಏಕೈಕ ಬ್ಯಾಟ್ಸ್‌ಮನ್ ಇವರೇ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ