ಟಿ20 ಕ್ರಿಕೆಟ್ ನಲ್ಲಿ ಇತಿಹಾಸ ಬರೆದ ವಿರಾಟ್ ಕೊಹ್ಲಿ !ಈ ಸಾಧನೆ ಮಾಡಿದ ಏಷ್ಯಾದ ಮೊದಲ ಬ್ಯಾಟ್ಸ್‌ಮನ್ !

ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 

Written by - Ranjitha R K | Last Updated : Apr 14, 2025, 12:53 PM IST
  • ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ದೊಡ್ಡ ಮೈಲಿಗಲ್ಲು
  • ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ
  • ವಿರಾಟ್ ಕೊಹ್ಲಿ ಹೆಸರಿನಲ್ಲಿವೆ ಹತ್ತು ಹಲವು ದಾಖಲೆ
ಟಿ20 ಕ್ರಿಕೆಟ್ ನಲ್ಲಿ ಇತಿಹಾಸ ಬರೆದ ವಿರಾಟ್ ಕೊಹ್ಲಿ !ಈ ಸಾಧನೆ ಮಾಡಿದ ಏಷ್ಯಾದ ಮೊದಲ ಬ್ಯಾಟ್ಸ್‌ಮನ್ !

ಭಾರತದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ದೊಡ್ಡ ಮೈಲಿಗಲ್ಲು ಸಾಧಿಸಿದ್ದಾರೆ. ವಿರಾಟ್ ಕೊಹ್ಲಿ ಭಾನುವಾರ ವೃತ್ತಿಜೀವನದ ಮತ್ತೊಂದು ದಾಖಲೆ ಬರೆದಿದ್ದಾರೆ. ವಿರಾಟ್ ಕೊಹ್ಲಿ ಈಗ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನು ಪೂರೈಸಿದ ಮೊದಲ ಏಷ್ಯಾದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 

Add Zee News as a Preferred Source

ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ : 
ಭಾನುವಾರ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸುವ ಮೂಲಕ ಈ ಮೈಲಿಗಲ್ಲು ತಲುಪಿದ್ದಾರೆ. ವಿರಾಟ್ ಕೊಹ್ಲಿ 62 ರನ್ ಗಳಿಸಿ ಅಜೇಯರಾಗಿ ಉಳಿದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 17.3 ಓವರ್‌ಗಳಲ್ಲಿ 9 ವಿಕೆಟ್‌ಗಳು ಬಾಕಿ ಇರುವಾಗಲೇ 174 ರನ್‌ಗಳ ಗುರಿಯನ್ನು ಬೆನ್ನಟ್ಟಿತು.

ಇದನ್ನೂ ಓದಿ : DC vs MI, IPL 2025: ಸ್ಫೋಟಕ ಅರ್ಧಶತಕದ ಮೂಲಕ ಭರ್ಜರಿ ಕಮ್‌ಬ್ಯಾಕ್‌ ಮಾಡಿದ ಕರುಣ್ ನಾಯರ್!!

ವಿರಾಟ್ ಕೊಹ್ಲಿ ಹೆಸರಿನಲ್ಲಿವೆ ಹತ್ತು ಹಲವು ದಾಖಲೆ :
ಐಪಿಎಲ್ ವೃತ್ತಿಜೀವನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳನ್ನು ಪ್ರತಿನಿಧಿಸಿದ್ದ ಡೇವಿಡ್ ವಾರ್ನರ್, 184 ಪಂದ್ಯಗಳಲ್ಲಿ 62 ಅರ್ಧಶತಕಗಳು ಮತ್ತು 4 ಶತಕಗಳನ್ನು ಗಳಿಸಿದ್ದಾರೆ. ಹೋಲಿಸಿದರೆ, ವಿರಾಟ್ ಕೊಹ್ಲಿ 258 ಐಪಿಎಲ್ ಪಂದ್ಯಗಳಲ್ಲಿ 58 ಅರ್ಧಶತಕಗಳು ಮತ್ತು 8 ಶತಕಗಳನ್ನು ಗಳಿಸಿದ್ದಾರೆ. ಈ ವಾರದ ಆರಂಭದಲ್ಲಿ, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 13,000 ರನ್‌ಗಳ ಗಡಿ ದಾಟಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಸಾಧನೆಯೊಂದಿಗೆ, ವಿರಾಟ್ ಕೊಹ್ಲಿ ವಿಶೇಷ ಪಟ್ಟಿಗೆ ಸೇರಿದ್ದಾರೆ. ಕ್ರಿಸ್ ಗೇಲ್, ಅಲೆಕ್ಸ್ ಹೇಲ್ಸ್, ಶೋಯೆಬ್ ಮಲಿಕ್ ಮತ್ತು ಕೀರನ್ ಪೊಲಾರ್ಡ್ ನಂತರ ಈ ಸಾಧನೆ ಮಾಡಿದ ಐದನೇ ಆಟಗಾರರಾಗಿ ಕೊಹ್ಲಿ ಹೊರ ಹೊಮ್ಮಿದ್ದಾರೆ. 

ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ 4,188 ರನ್  : 
ವಿರಾಟ್ ಕೊಹ್ಲಿ ಭಾರತ ಪರ 125 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 1 ಶತಕ ಮತ್ತು 38 ಅರ್ಧಶತಕಗಳು ಸೇರಿದಂತೆ 4,188 ರನ್ ಗಳಿಸಿದ್ದಾರೆ. ಕಳೆದ ವರ್ಷ ಜೂನ್ 29 ರಂದು ಅವರು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ 2024 ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧ 59 ಎಸೆತಗಳಲ್ಲಿ 76 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್ ಮೂಲಕ, ಅವರು ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಟ್ರೋಫಿ ಗೆಲ್ಲುವಲ್ಲಿ ಬಹು ಮುಖ್ಯ ಪಾತ್ರ ವಹಿಸಿದ್ದಾರೆ. ಇದಾದ ನಂತರ ಅವರು ಈ ಸ್ವರೂಪದ ಕ್ರಿಕೆಟ್ ಗೆ ವಿದಾಯ ಹೇಳಿದರು.

ಇದನ್ನೂ ಓದಿ : RR vs RCB, IPL 2025: ಸಾಲ್ಟ್‌ & ಕೊಹ್ಲಿ ಭರ್ಜರಿ ಅರ್ಧಶತಕ, ರಾಜಸ್ಥಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಆರ್‌ಸಿಬಿ!!

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News