‘ICC Men's Player of the Month’ ಎನಿಸಿಕೊಂಡ ಕಿಂಗ್ ಕೊಹ್ಲಿ: ಮೊದಲ ಬಾರಿಗೆ ಈ ಪ್ರಶಸ್ತಿ ಪಡೆದ ವಿರಾಟ್

Virat Kohli T20 World Cup: ವಿರಾಟ್ ಕೊಹ್ಲಿ ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಇದೀಗ ಆ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಟೋಬರ್ ಕ್ಯಾಲೆಂಡರ್ ತಿಂಗಳಿನಲ್ಲಿ ವಿರಾಟ್ ಕೊಹ್ಲಿ 205 T20 ರನ್ ಗಳಿಸಿದರು. ಈ ಸಮಯದಲ್ಲಿ, ಅಕ್ಟೋಬರ್ 23 ರಂದು, ಅವರ ಅಜೇಯ 82 ರನ್ ಗಳ ಆಧಾರದ ಮೇಲೆ, ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ನಾಲ್ಕು ವಿಕೆಟ್‌ಗಳ ಪ್ರಸಿದ್ಧ ವಿಜಯವನ್ನು ದಾಖಲಿಸಿತು.

Written by - Bhavishya Shetty | Last Updated : Nov 7, 2022, 03:31 PM IST
    • ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಭಾಜನರಾದ ವಿರಾಟ್ ಕೊಹ್ಲಿ
    • ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಕೊಹ್ಲಿ
    • ಅಕ್ಟೋಬರ್ ಕ್ಯಾಲೆಂಡರ್ ತಿಂಗಳಿನಲ್ಲಿ ವಿರಾಟ್ ಕೊಹ್ಲಿ 205 T20 ರನ್ ಗಳಿಸಿದರು
‘ICC Men's Player of the Month’ ಎನಿಸಿಕೊಂಡ ಕಿಂಗ್ ಕೊಹ್ಲಿ: ಮೊದಲ ಬಾರಿಗೆ ಈ ಪ್ರಶಸ್ತಿ ಪಡೆದ ವಿರಾಟ್  title=
virat kohli

Virat Kohli ICC Men's Player of the Month: ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ಟಿ20 ವಿಶ್ವಕಪ್ ಮಧ್ಯದಲ್ಲಿ ಒಂದು ದೊಡ್ಡ ಗುಡ್ ನ್ಯೂಸ್ ಸಿಕ್ಕಿದೆ. ವಿರಾಟ್ ಕೊಹ್ಲಿ ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಡೇವಿಡ್ ಮಿಲ್ಲರ್ ಮತ್ತು ಜಿಂಬಾಬ್ವೆ ಆಲ್‌ರೌಂಡರ್ ಸಿಕಂದರ್ ರಜಾ ಅವರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಇದನ್ನೂ ಓದಿ: T20 World Cup 2022ರಲ್ಲಿ ವಿರಾಟ್ ಕಾರುಬಾರು: ಅಬ್ಬಬ್ಬಾ.. ಕೊಹ್ಲಿ ಹೆಸರಲ್ಲಿದೆ ಇಷ್ಟೊಂದು ದಾಖಲೆಗಳು!

ವಿರಾಟ್ ಕೊಹ್ಲಿಯ ಅದ್ಭುತ ಸಾಧನೆ:

ವಿರಾಟ್ ಕೊಹ್ಲಿ ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಇದೀಗ ಆ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಟೋಬರ್ ಕ್ಯಾಲೆಂಡರ್ ತಿಂಗಳಿನಲ್ಲಿ ವಿರಾಟ್ ಕೊಹ್ಲಿ 205 T20 ರನ್ ಗಳಿಸಿದರು. ಈ ಸಮಯದಲ್ಲಿ, ಅಕ್ಟೋಬರ್ 23 ರಂದು, ಅವರ ಅಜೇಯ 82 ರನ್ ಗಳ ಆಧಾರದ ಮೇಲೆ, ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ನಾಲ್ಕು ವಿಕೆಟ್‌ಗಳ ಪ್ರಸಿದ್ಧ ವಿಜಯವನ್ನು ದಾಖಲಿಸಿತು.

2022ರ ಟಿ 20 ವಿಶ್ವಕಪ್‌ನಲ್ಲಿ ವಿರಾಟ್ ವಿಶ್ವರೂಪ:

ವಿರಾಟ್ ಕೊಹ್ಲಿ 2022ರ ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಅಷ್ಟೇ ಅಲ್ಲ ಇದುವರೆಗಿನ ಇಡೀ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದು ವಿರಾಟ್ ಕೊಹ್ಲಿಯವರೇ. ವಿರಾಟ್ ಕೊಹ್ಲಿ 5 ಪಂದ್ಯಗಳಲ್ಲಿ 123.00 ಸರಾಸರಿಯಲ್ಲಿ 246 ರನ್ ಗಳಿಸುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: T20 World Cup Money Prize: ವಿಶ್ವಕಪ್ ಗೆದ್ದವರ ಪಾಲಾಗಲಿರುವ ಮೊತ್ತವೆಷ್ಟು? ರನ್ನರ್ ಅಪ್ ಗೂ ಸಿಗಲಿದೆಯೇ ಬಹುಮಾನ?

ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. T20 ವಿಶ್ವಕಪ್‌ನಲ್ಲಿ, ವಿರಾಟ್ ಕೊಹ್ಲಿ ಒಟ್ಟು 26 ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 83.92 ರ ಸರಾಸರಿಯಲ್ಲಿ 1091 ರನ್ ಗಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News