WTC Final 2023: ಕ್ರಿಕೆಟ್ ಜಗತ್ತಿನಲ್ಲಿ ಇತಿಹಾಸ ಸೃಷ್ಟಿಸಲು ವಿರಾಟ್ ತವಕ: ಕೊಹ್ಲಿ ಬರೆಯಲಿರುವ ದಾಖಲೆ ಅಂತಿಂತದ್ದಲ್ಲ…

WTC Final 2023: ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್‌ ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್‌ ನಲ್ಲಿ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 112 ರನ್ ಗಳಿಸಿದರೆ, ನಂತರ ಅವರು ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಗರಿಷ್ಠ ಸ್ಕೋರರ್ ಆಗಲಿದ್ದಾರೆ.

Written by - Bhavishya Shetty | Last Updated : Jun 6, 2023, 09:04 AM IST
    • ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ನ ಅಂತಿಮ ಪಂದ್ಯ
    • ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್‌ ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ನಡೆಯಲಿದೆ
    • ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಶ್ರೇಷ್ಠ ದಾಖಲೆಯನ್ನು ಮಾಡಲಿದ್ದಾರೆ
WTC Final 2023: ಕ್ರಿಕೆಟ್ ಜಗತ್ತಿನಲ್ಲಿ ಇತಿಹಾಸ ಸೃಷ್ಟಿಸಲು ವಿರಾಟ್ ತವಕ: ಕೊಹ್ಲಿ ಬರೆಯಲಿರುವ ದಾಖಲೆ ಅಂತಿಂತದ್ದಲ್ಲ… title=
Virat Kohli

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ನ (ಡಬ್ಲ್ಯುಟಿಸಿ ಫೈನಲ್) ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್‌ ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ನಡೆಯಲಿದೆ. ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕದಲ್ಲಿ ಇತಿಹಾಸ ಸೃಷ್ಟಿಸುವ ಸನಿಹದಲ್ಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ನ (ಡಬ್ಲ್ಯುಟಿಸಿ ಫೈನಲ್) ಅಂತಿಮ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಶ್ರೇಷ್ಠ ದಾಖಲೆಯನ್ನು ಮಾಡಲಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯಿಂದ ಹಿಂದೆ ಸರಿದಿರುವ ವರದಿ ನಿರಾಕರಿಸಿದ ಕುಸ್ತಿಪಟು ಸಾಕ್ಷಿ ಮಲ್ಲಿಕ್ 

ಜೂನ್ 7 ರಿಂದ ಜೂನ್ 11 ರವರೆಗೆ ಇಂಗ್ಲೆಂಡ್‌ ನ ಕೆನ್ನಿಂಗ್ಟನ್ ಓವಲ್ (ಲಂಡನ್) ಮೈದಾನದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್‌ ನಲ್ಲಿ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 112 ರನ್ ಗಳಿಸಿದರೆ, ನಂತರ ಅವರು ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಗರಿಷ್ಠ ಸ್ಕೋರರ್ ಆಗಲಿದ್ದಾರೆ. ಇಲ್ಲಿಯವರೆಗೆ, ಈ ಶ್ರೇಷ್ಠ ದಾಖಲೆಯನ್ನು ಯಾವುದೇ ಬ್ಯಾಟ್ಸ್‌ಮನ್ ಮಾಡಲು ಸಾಧ್ಯವಾಗಿಲ್ಲ. ವಿರಾಟ್ ಕೊಹ್ಲಿ ಈ ಅದ್ಭುತ ದಾಖಲೆ ಮಾಡಿದರೆ ಕ್ರಿಕೆಟ್ ಜಗತ್ತಿನಲ್ಲಿ ಇತಿಹಾಸ ಸೃಷ್ಟಿಸಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ನ (ಡಬ್ಲ್ಯುಟಿಸಿ ಫೈನಲ್) ಫೈನಲ್‌ ನಲ್ಲಿ ವಿರಾಟ್ ಕೊಹ್ಲಿ 112 ರನ್ ಗಳಿಸಿದರೆ, ಅವರು ಸಚಿನ್ ತೆಂಡೂಲ್ಕರ್ ಮತ್ತು ರಿಕಿ ಪಾಂಟಿಂಗ್ ಅವರ ವಿಶ್ವದಾಖಲೆಯನ್ನು ಮುರಿಯುತ್ತಾರೆ. ಪ್ರಸ್ತುತ, ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ಆಸ್ಟ್ರೇಲಿಯಾದ ದಿಗ್ಗಜ ನಾಯಕ ರಿಕಿ ಪಾಂಟಿಂಗ್ ಹೆಸರಿನಲ್ಲಿದೆ. ರಿಕಿ ಪಾಂಟಿಂಗ್ ಅವರು ಐಸಿಸಿ ನಾಕೌಟ್ ಪಂದ್ಯಗಳಲ್ಲಿ 18 ಇನ್ನಿಂಗ್ಸ್‌ ಗಳಲ್ಲಿ 731 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರು ಎರಡನೇ ಸ್ಥಾನದಲ್ಲಿದೆ. ಸಚಿನ್ ತೆಂಡೂಲ್ಕರ್ ಐಸಿಸಿ ನಾಕೌಟ್ ಪಂದ್ಯಗಳಲ್ಲಿ 14 ಇನ್ನಿಂಗ್ಸ್‌ಗಳಲ್ಲಿ 658 ರನ್ ಗಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ ನಲ್ಲಿ (ಡಬ್ಲ್ಯುಟಿಸಿ ಫೈನಲ್) ವಿರಾಟ್ ಕೊಹ್ಲಿ 112 ರನ್ ಗಳಿಸಿದರೆ, ಅವರು ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ. ಪ್ರಸ್ತುತ ಆಡುತ್ತಿರುವ ಕ್ರಿಕೆಟಿಗರ ಪೈಕಿ ವಿರಾಟ್ ಕೊಹ್ಲಿ ಈ ದಾಖಲೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 25,322 ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಇದುವರೆಗೆ ಅಂತರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಗರಿಷ್ಠ 34357 ರನ್ ಗಳಿಸಿದ್ದಾರೆ.

ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ

1. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 18 ಇನ್ನಿಂಗ್ಸ್‌ಗಳಲ್ಲಿ 731 ರನ್

2. ಸಚಿನ್ ತೆಂಡೂಲ್ಕರ್ (ಭಾರತ) - 14 ಇನ್ನಿಂಗ್ಸ್‌ಗಳಲ್ಲಿ 658 ರನ್

3. ವಿರಾಟ್ ಕೊಹ್ಲಿ (ಭಾರತ) - 15 ಇನ್ನಿಂಗ್ಸ್‌ಗಳಲ್ಲಿ 620 ರನ್

 

ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ

1. ಸಚಿನ್ ತೆಂಡೂಲ್ಕರ್ (ಭಾರತ) - 34357 ರನ್

2. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 28016 ರನ್

3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 27483 ರನ್

4. ಮಹೇಲಾ ಜಯವರ್ಧನೆ (ಶ್ರೀಲಂಕಾ) - 25957 ರನ್

5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 25534 ರನ್

6. ವಿರಾಟ್ ಕೊಹ್ಲಿ (ಭಾರತ) - 25,322 ರನ್

 

ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಅತಿ ಹೆಚ್ಚು ಶತಕಗಳು

1. ಸಚಿನ್ ತೆಂಡೂಲ್ಕರ್ (ಭಾರತ) - 100 ಶತಕಗಳು

2. ವಿರಾಟ್ ಕೊಹ್ಲಿ (ಭಾರತ) - 75 ಶತಕಗಳು

3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 71 ಶತಕಗಳು

4. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 63 ಶತಕಗಳು

5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 62 ಶತಕಗಳು

6. ಹಾಶಿಮ್ ಆಮ್ಲಾ (ದಕ್ಷಿಣ ಆಫ್ರಿಕಾ) - 55 ಶತಕಗಳು

ಇದನ್ನೂ ಓದಿ: Wrestlers Protest: 'ನಮ್ಮ ಹೋರಾಟ ಬೃಜ್ ಭೂಷಣ್ ವಿರುದ್ಧ, ಸರ್ಕಾರದ ವಿರುದ್ಧ ಅಲ್ಲ' ಮುಂದಿನ ಕಾರ್ಯತಂತ್ರ ಸಿದ್ಧಪಡಿಸುತ್ತಿದ್ದೇವೆ ಎಂದ ಸಾಕ್ಷಿ ಮಲಿಕ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News