IND vs AUS 2nd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಟೆಸ್ಟ್‌ಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಪಂದ್ಯ ಡಿಸೆಂಬರ್ 6 ರಿಂದ ಪ್ರಾರಂಭವಾಗಲಿದೆ. ಅಡಿಲೇಡ್‌ನ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಡೇ-ನೈಟ್ ಟೆಸ್ಟ್ ಆಗಿದ್ದು, ಇದನ್ನು ಪಿಂಕ್‌ ಬಾಲ್‌ನಿದ ಆಡಲಾಗುತ್ತದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೇಲಿದೆ. ಈ ಪಂದ್ಯದ ವೇಳೆ ಅವರಿಗೆ ದೊಡ್ಡ ಸಾಧನೆ ಮಾಡುವ ಅವಕಾಶ ಸಿಕ್ಕಿದೆ. ಅಡಿಲೇಡ್ ಟೆಸ್ಟ್‌ನಲ್ಲಿ ವಿರಾಟ್ ಒಂದು ವೇಳೆ ಶತಕ ಸಿಡಿಸಿದರೆ, 9 ಬ್ಯಾಟ್ಸ್‌ಮನ್‌ಗಳ ದಾಖಲೆ ಮುರಿಯಲಿದ್ದಾರೆ. 


COMMERCIAL BREAK
SCROLL TO CONTINUE READING

ಟೆಸ್ಟ್ ಮಾದರಿಯಲ್ಲಿ, ವಿರಾಟ್ ಕೊಹ್ಲಿ ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 63.62 ಸರಾಸರಿಯಲ್ಲಿ 509 ರನ್ ಗಳಿಸಿದ್ದಾರೆ. ಇದರಲ್ಲಿ 3 ಶತಕ ಮತ್ತು ಒಂದು ಅರ್ಧ ಶತಕ ಸೇರಿದೆ. ಅಂದರೆ ಅವರು ಈ ಮೈದಾನದಲ್ಲಿ ಸಾಕಷ್ಟು ರನ್ ಗಳಿಸುತ್ತಾರೆ ಮತ್ತು ಪ್ರತಿಯೊಂದು ಪಂದ್ಯದಲ್ಲೂ ದೊಡ್ಡ ಇನ್ನಿಂಗ್ಸ್ ಆಡುತ್ತಾರೆ. ಈ ಬಾರಿ ಅಡಿಲೇಡ್‌ನಲ್ಲಿ ಶತಕ ಬಾರಿಸಿದರೆ, ಈ ಮೈದಾನದಲ್ಲಿ ಆಡಿದ ಟೆಸ್ಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಲಿದ್ದಾರೆ. 


ಇದನ್ನೂ ಓದಿ: T20ಯಲ್ಲಿ 349 ರನ್ !ಚುಟುಕು ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ದೊಡ್ಡ ರೆಕಾರ್ಡ್ ಇದು ! ದಾಖಲೆ ರೂವಾರಿ ಈ ದಾಂಡಿಗ !


ಮಾರ್ನಸ್ ಲಾಬುಶೇನ್, ಜಾಕ್ ಹಾಬ್ಸ್, ಡಾನ್ ಬ್ರಾಡ್ಮನ್, ಡೀನ್ ಜೋನ್ಸ್, ಆರ್ಥರ್ ಮೋರಿಸ್, ಬಾಬ್ ಸಿಂಪ್ಸನ್, ಮ್ಯಾಥ್ಯೂ ಹೇಡನ್, ಜಸ್ಟಿನ್ ಲ್ಯಾಂಗರ್ ಮತ್ತು ಸ್ಟೀವ್ ವಾ ಕೂಡ ಅಡಿಲೇಡ್ ಓವಲ್ ಮೈದಾನದಲ್ಲಿ ತಲಾ ಮೂರು ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದಾರೆ. ಅಡಿಲೇಡ್ ನಲ್ಲಿ ಸೆಂಚುರಿ ಬಾರಿಸಿದರೆ ಈ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಬಹುದು. ಈ ಮೂಲಕ ಆಸ್ಟ್ರೇಲಿಯಾದ ಓವಲ್ ಮೈದಾನದಲ್ಲಿ ಅತ್ಯಧಿಕ ಟೆಸ್ಟ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಕೀರ್ತಿಗೆ ಪಾತ್ರರಾಲಿದ್ದಾರೆ. 


ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 102 ರನ್ ಹೊಡೆದರೆ ಅಡಿಲೇಡ್ ಓವಲ್ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ರೆಕಾರ್ಡ್‌ ಸೃಷ್ಟಿಸಲಿದ್ದಾರೆ. ವೆಸ್ಟ್ ಇಂಡೀಸ್ ದಾಂಡಿಗ ಬ್ರಿಯಾನ್ ಲಾರಾ (610 ರನ್ಸ್) ಅವರ ದಾಖಲೆಯನ್ನು ಮುರಿಯಬಹುದಾಗಿದೆ. 


ವಿರಾಟ್ ಅಡಿಲೇಡ್ ಓವಲ್ ಮೈದಾನದಲ್ಲಿ ಎಲ್ಲಾ ಮೂರು ಮಾದರಿಗಳು ಸೇರಿದಂತೆ ಒಟ್ಟು 11 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 73.61 ಸರಾಸರಿಯಲ್ಲಿ 957 ರನ್ ಗಳಿಸಿದ್ದಾರೆ, ಇದರಲ್ಲಿ 5 ಶತಕಗಳೂ ಸೇರಿವೆ. ವಿರಾಟ್ ಈ ಪಂದ್ಯದಲ್ಲಿ 43 ರನ್ ಗಳಿಸಿದರೆ ಅಡಿಲೇಡ್ ಓವಲ್ ಮೈದಾನದಲ್ಲಿ 1000 ಅಂತಾರಾಷ್ಟ್ರೀಯ ರನ್ ಪೂರೈಸಲಿದ್ದಾರೆ. ಅಡಿಲೇಡ್ ಓವಲ್ ಮೈದಾನದಲ್ಲಿ ಈ ಸಾಧನೆ ಮಾಡಿದ ಮೊದಲ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಪಾತ್ರರಾಗಲಿದ್ದಾರೆ.  


ಇದನ್ನೂ ಓದಿ: ಟೀಂ ಇಂಡಿಯಾ ಅಭಿಮಾನಿಗಳಿಗೆ ಆಘಾತ.. ಮೈದಾನದಿಂದ ಭಾರತದ ಫ್ಯಾನ್ಸ್‌ಗೆ ನಿಷೇಧ ಏರಿದ ಬಿಸಿಸಿಐ!! ಕಾರಣ ಏನು..?


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.