Virat Kohli : ಶತಕ ಸಿಡಿಸಿದ ವಿರಾಟ್ ಕೊಹ್ಲಿಗೆ ಸುಲಭವಾಗಿಲ್ಲ ಟಿ20 ವಿಶ್ವಕಪ್‌!

ಈ ಜಾಗತಿಕ ಪಂದ್ಯಾವಳಿಯಲ್ಲಿ ಭಾರತವು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ವರ್ಷ ಟಿ20 ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.

Written by - Channabasava A Kashinakunti | Last Updated : Sep 11, 2022, 05:26 PM IST
  • ಟಿ20 ವಿಶ್ವಕಪ್ 2022 ಆಸ್ಟ್ರೇಲಿಯಾ ನೆಲದಲ್ಲಿ ಅಕ್ಟೋಬರ್ 16 ರಿಂದ ಪ್ರಾರಂಭ
  • ಭಾರತವು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನ
  • ಟೀಂ ಇಂಡಿಯಾದ ದೊಡ್ಡ ಬ್ಯಾಟಿಂಗ್ ಶಕ್ತಿ ಕೊಹ್ಲಿ
Virat Kohli : ಶತಕ ಸಿಡಿಸಿದ ವಿರಾಟ್ ಕೊಹ್ಲಿಗೆ ಸುಲಭವಾಗಿಲ್ಲ ಟಿ20 ವಿಶ್ವಕಪ್‌! title=

Virat Kohli : ಟಿ20 ವಿಶ್ವಕಪ್ 2022 ಆಸ್ಟ್ರೇಲಿಯಾ ನೆಲದಲ್ಲಿ ಅಕ್ಟೋಬರ್ 16 ರಿಂದ ಪ್ರಾರಂಭವಾಗಲಿದೆ. ಈ ಜಾಗತಿಕ ಪಂದ್ಯಾವಳಿಯಲ್ಲಿ ಭಾರತವು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ವರ್ಷ ಟಿ20 ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.

ಸೆ. 16 ರಂದು ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಆಯ್ಕೆ

ಭಾರತೀಯ ಕ್ರಿಕೆಟ್ ತಂಡವು ಸ್ಫೋಟಕ ಬ್ಯಾಟ್ಸ್‌ಮನ್‌ಗಳಿಂದ ತುಂಬಿದೆ, ಈ ಆಟಗಾರರು ಪಂದ್ಯವನ್ನು ತಾವಾಗಿಯೇ ತಿರುಗಿಸಬಲ್ಲರು. ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಸೆಪ್ಟೆಂಬರ್ 16 ರಂದು ಪ್ರಕಟಿಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್‌ಗೆ ಆಯ್ಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : Team India : ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಈ ಅಪಾಯಕಾರಿ ಆಟಗಾರನಿಗೆ ಸ್ಥಾನ ಪಕ್ಕಾ!

ಟೀಂ ಇಂಡಿಯಾದ ದೊಡ್ಡ ಬ್ಯಾಟಿಂಗ್ ಶಕ್ತಿ ಕೊಹ್ಲಿ

ಟ್ವೆಂಟಿ-20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡಲು ವಿರಾಟ್ ಕೊಹ್ಲಿ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಆದರೆ ಅದು ಅಷ್ಟು ಸುಲಭವಾಗಿಲ್ಲ. ವಿರಾಟ್ ಕೊಹ್ಲಿ ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾದ ದೊಡ್ಡ ಬ್ಯಾಟಿಂಗ್ ಶಕ್ತಿ. ಕೊಹ್ಲಿ ಟೀಂ ಇಂಡಿಯಾದ ದೊಡ್ಡ ಬ್ಯಾಟ್ಸ್‌ಮನ್. ಕೊಹ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದಾಗ, ಇಡೀ ತಂಡವು ಅವರ ಸುತ್ತ ನಡೆಯುತ್ತದೆ.

ಕೊಹ್ಲಿಗೆ ಮುಂದೆ ಇದೆ ದೊಡ್ಡ ಸವಾಲು

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾಗೆ ಹಲವು ಆಯ್ಕೆಗಳಿವೆ. ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಅವರಂತಹ ಬ್ಯಾಟ್ಸ್‌ಮನ್‌ಗಳು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಆದರೆ, ಟಿ20 ವಿಶ್ವಕಪ್‌ನಂತಹ ದೊಡ್ಡ ಟೂರ್ನಿಗಳಲ್ಲಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಇನ್ನಿಂಗ್ಸ್ ಓಪನಿಂಗ್ ಮಾಡಲಿದ್ದಾರೆ. ಇದು ಟೀಂ ಇಂಡಿಯಾದ ಪ್ರಮುಖ ಆರಂಭಿಕ ಜೋಡಿಯಾಗಲಿದೆ.

ಇದನ್ನೂ ಓದಿ : Team India : ರಿಷಭ್ ಪಂತ್‌ನಿಂದಾಗಿ ಈ ಆಟಗಾರನ ವೃತ್ತಿಜೀವಕ್ಕೆ ಅಪಾಯ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News