)
Virat Kohli: 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಆರ್ಸಿಬಿಯ ವಿಜಯೋತ್ಸವದ ವೇಳೆ (ಬುಧವಾರ) ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ದುರಂತದಲ್ಲಿ 11 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆಯಿಂದ ಬೆಂಗಳೂರು ಹಾಗೂ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ.
ಕಾಲ್ತುಳಿತ ದುರಂತದಿಂದ RCB ಮತ್ತು KSCA ವಿರುದ್ಧ FIR ದಾಖಲಾಗಿದ್ದು, ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ. ಕೆಎಸ್ಸಿಎ ಕಾರ್ಯದರ್ಶಿಗಳಾದ ಎ.ಶಂಕರ್ ಮತ್ತು ಇಎಸ್ ಜಯರಾಮ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಘಟನೆ ಸಂಬಂಧ ಆರ್ಸಿಬಿ ಮ್ಯಾನೇಜ್ಮೆಂಟ್ನ ಕೆಲವರನ್ನು ಬಂಧಿಸಲಾಗಿದೆ.
ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರವು ಬೆಂಗಳೂರು ಕಮೀಷನರ್ ಆಗಿದ್ದ ಬಿ.ದಯಾನಂದ್ರನ್ನು ಸಸ್ಪೆಂಡ್ ಮಾಡಿತ್ತು. ಅಲ್ಲದೇ ಕೆಲವು ಪೊಲೀಸ್ಅಧಿಕಾರಿಗಳಿಗೂ ಅಮಾನತು ಶಿಕ್ಷೆ ವಿಧಿಸಿತ್ತು. ಇದಷ್ಟೇ ಅಲ್ಲದೇ ಇಂಟಲಿಜೆನ್ಸ್ ಮುಖ್ಯಸ್ಥರಾಗಿದ್ದ ಹೇಮಂತ್ ನಿಂಬಾಳ್ಕರ್ರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ರನ್ನೂ ಕಿಕ್ಔಟ್ ಮಾಡಲಾಗಿದೆ.
ಇನ್ನೂ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬರುತ್ತಿದೆ. ಸರ್ಕಾರದ ನಿರ್ಧಾರದ ವಿರುದ್ಧ ಕಿಡಿಕಾರಿರುವ ರಾಜ್ಯದ ಜನರು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಐಪಿಎಲ್ ಮತ್ತು ಆರ್ಸಿಬಿಯಿಂದ ಕೊಹ್ಲಿ ನಿವೃತ್ತಿ!?
ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ವಿರಾಟ್ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಭಾವುಕ ಪೋಸ್ಟ್ ಒಂದನ್ನು ಶೇರ್ಮಾಡಿರುವ ಕೊಹ್ಲಿ, ʼಈಗ ನನ್ನಿಂದ ಏನೂ ಹೇಳಲು ಸಾಧ್ಯವಿಲ್ಲʼವೆಂದು ಹೇಳಿದ್ದಾರೆ. ಆರ್ಸಿಬಿ ಹೇಳಿಕೆಯ ಪೋಸ್ಟ್ ಹಂಚಿಕೊಂಡಿರುವ ಕೊಹ್ಲಿ, ʼAt a loss for words. Absolutely gutted ?ʼ ಎಂದು ಕ್ಯಾಪ್ಶನ್ ನೀಡಿದ್ದಾರೆ.
ಈ ಘಟನೆಯಿಂದ ನನಗೆ ನಿಜವಾಗಲೂ ತುಂಬಾ ನೋವಾಗಿದೆ. ನಮ್ಮನ್ನು ನೋಡಲು ಬಂದ 11 ಮಂದಿ ಪ್ರಾಣ ಕಳೆದುಕೊಂಡಿರುವುದು ತುಂಬಾ ನೋವುಂಟು ಮಾಡಿದೆ. ಈ ಘಟನೆ ನನ್ನ ಜೀವನದಲ್ಲಿ ಮರೆಯಲಾರದ ನೋವಿನ ಘಟನೆಯಾಗಿದೆ ಎಂದು ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಈ ಘಟನೆ ದೇಶದ ಕ್ರಿಕೆಟ್ಪ್ರಿಯರ ಬೇಸರಕ್ಕೆ ಕಾರಣವಾಗಿದೆ. 18 ವರ್ಷಗಳ ಬಳಿಕ ಗೆದ್ದ ಖುಷಿ 18 ಗಂಟೆಯೂ ಉಳಿಯಲಿಲ್ಲ.. ಎಲ್ಲವೂ ಸರಿಹೊಯ್ತು ಎನ್ನುವಷ್ಟರಲ್ಲಿ ಯಾರೋ ಮಾಡಿದ ಎಡವಟ್ಟಿಗೆ ಅಮಾಯಕ ಜೀವಗಳು ಬಲಿಯಾಗಿವೆ. ಬದುಕಿ ಬಾಳಬೇಕಿದ್ದ ಯುವಕ-ಯುವತಿಯರು ಮಸಣದ ಹಾದಿ ಹಿಡಿದಿದ್ದು ಅನೇಕರಿಗೆ ಶಾಕ್ ಉಂಟಾಗಿದೆ.
ಈ ಘಟನೆಯಿಂದ ಬಹಳ ನೊಂದುಕೊಂಡಿರುವ ವಿರಾಟ್ ಕೊಹ್ಲಿ ಮುಂಬರುವ ದಿನಗಳಲ್ಲಿ ಐಪಿಎಲ್ ಮತ್ತು ಆರ್ಸಿಬಿಗೆ ಗುಡ್ ಬೈ ಹೇಳುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ. ಈಗಾಗಲೇ ಅಹಮದಾಬಾದ್ ಕ್ರಿಡಾಂಗಣದಲ್ಲಿ ನಿವೃತ್ತಿ ಬಗ್ಗೆ ಹೇಳಿಕೆ ನೀಡುವ ಮೂಲಕ ಕೊಹ್ಲಿ ಸಂಚಲನ ಮೂಡಿಸಿದ್ದರು.. ಇದೀಗ ಈ ಘಟನೆಯ ನಂತರ ನಿವೃತ್ತಿ ಘೋಷಿಸುವ ಲಕ್ಷಣಗಳು ಎದ್ದು ಕಾಣುತ್ತಿವೆ. ಘಟನೆಯಿಂದ ನೊಂದುಕೊಂಡಿರುವ ಕೊಹ್ಲಿಗೆ ಅಭಿಮಾನಿಗಳು ಧೈರ್ಯ ಹೇಳುತ್ತಿದ್ದರೂ ಶೀಘ್ರವೇ ಈ ಬಗ್ಗೆ ಅವರು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ