ಭಾರತದ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದ ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡವು 2-1 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಸೋತಿರುವ ಬೆನ್ನಲ್ಲೇ ಈಗ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವ ಹುದ್ದೆಯಿಂದ ಕೆಳಗಿಳಿದಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

Last Updated : Jan 15, 2022, 07:17 PM IST
  • ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡವು 2-1 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಸೋತಿರುವ ಬೆನ್ನಲ್ಲೇ ಈಗ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವ ಹುದ್ದೆಯಿಂದ ಕೆಳಗಿಳಿದಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಭಾರತದ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದ ವಿರಾಟ್ ಕೊಹ್ಲಿ  title=
file photo

ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡವು 2-1 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಸೋತಿರುವ ಬೆನ್ನಲ್ಲೇ ಈಗ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವ ಹುದ್ದೆಯಿಂದ ಕೆಳಗಿಳಿದಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: Ind vs SA : 'ಕ್ರಿಕೆಟ್‌ನಿಂದ ಅಮಾನತು ಮಾಡಿ ದಂಡ ವಿಧಿಸಿ' : ಕೊಹ್ಲಿ ವಿರುದ್ಧ ವಾಗ್ದಾಳಿ!

ಈಗ ಟೆಸ್ಟ್ ತಂಡದ ನಾಯಕತ್ವವನ್ನು ತ್ಯಜಿಸುವ ವಿಚಾರವನ್ನು ವಿರಾಟ್ ಕೊಹ್ಲಿ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆ ಮೂಲಕ ಘೋಷಿಸಿದ್ದಾರೆ."ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಇದು 7 ವರ್ಷಗಳ ಕಠಿಣ ಪರಿಶ್ರಮ, ಶ್ರಮ ಮತ್ತು ನಿರಂತರ ಪರಿಶ್ರಮದ ದಿನವಾಗಿದೆ. ನಾನು ಆ ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ ಮತ್ತು ಅಲ್ಲಿ ಏನನ್ನೂ ಬಿಡಲಿಲ್ಲ. ಪ್ರತಿಯೊಂದೂ ಒಂದು ಹಂತದಲ್ಲಿ ಕೊನೆಗೊಳ್ಳಬೇಕು ಮತ್ತು ಹಾಗಾಗಿ ಅದು ಭಾರತದ ಟೆಸ್ಟ್ ನಾಯಕನಾಗಿ ಕೊನೆಗೊಳ್ಳಬೇಕಾಗಿದೆ," ಅವರು ಹೇಳಿದರು.

ಇದನ್ನೂ ಓದಿ: Virat Kohli Captaincy : ಅಪಾಯದಲ್ಲಿದೆ ಕೊಹ್ಲಿ ಟೆಸ್ಟ್ ನಾಯಕತ್ವ : ಕ್ಯಾಪ್ಟನ್ ಶಿಪ್ ಕಳೆದುಕೊಳ್ಳುವ ಭೀತಿಯಲ್ಲಿ ವಿರಾಟ್!

2014-2015ರ ಆಸ್ಟ್ರೇಲಿಯನ್ ಪ್ರವಾಸದ ಮಧ್ಯದಲ್ಲಿ ಧೋನಿಯಿಂದ ಭಾರತದ ಟೆಸ್ಟ್ ನಾಯಕತ್ವವನ್ನು ವಹಿಸಿಕೊಂಡ ನಂತರ, ವಿರಾಟ್ ಕೊಹ್ಲಿ 68 ಪಂದ್ಯಗಳಲ್ಲಿ ಭಾರತದ ತಂಡವನ್ನು ಮುನ್ನಡೆಸಿದ್ದಾರೆ,ಅದರಲ್ಲಿ ತಂಡವು 40 ಗೆದ್ದಿದೆ, 17 ಸೋಲು ಮತ್ತು 11 ಡ್ರಾ ಆಗಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News